Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಯ್ಯಪ್ಪ, ನೆಹರು ನಗರ ಬೆಟ್ಟಗಳು ವಾಸಕ್ಕೆ ಯೋಗ್ಯವಲ್ಲ- ಭೂ ವಿಜ್ಞಾನಿಗಳ ತಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಅಯ್ಯಪ್ಪ, ನೆಹರು ನಗರ ಬೆಟ್ಟಗಳು ವಾಸಕ್ಕೆ ಯೋಗ್ಯವಲ್ಲ- ಭೂ ವಿಜ್ಞಾನಿಗಳ ತಂಡ

Karnataka

ಅಯ್ಯಪ್ಪ, ನೆಹರು ನಗರ ಬೆಟ್ಟಗಳು ವಾಸಕ್ಕೆ ಯೋಗ್ಯವಲ್ಲ- ಭೂ ವಿಜ್ಞಾನಿಗಳ ತಂಡ

Public TV
Last updated: August 17, 2019 4:33 pm
Public TV
Share
2 Min Read
ayyappa hill
SHARE

ಮಡಿಕೇರಿ: ವಿರಾಜಪೇಟೆಯಲ್ಲಿರುವ ಅಯ್ಯಪ್ಪ ಮತ್ತು ನೆಹರು ನಗರ ಬೆಟ್ಟಗಳು ಯಾವುದೇ ಕಾರಣಕ್ಕೂ ವಾಸಿಸಲು ಸುರಕ್ಷಿತವಲ್ಲ ಎಂದು ಕೇಂದ್ರ ಗಣಿ ಮತ್ತು ಭೂವಿಜ್ಞಾನ ಇಲಾಖೆ ವಿಜ್ಞಾನಿಗಳ ತಂಡ ಸ್ಪಷ್ಟಪಡಿಸಿದೆ.

ಎರಡೂ ಬೆಟ್ಟಗಳಲ್ಲಿ ದೊಡ್ಡ ಪ್ರಮಾಣದಲ್ಲಿ ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಇಂದು ವಿಜ್ಞಾನಿಗಳ ತಂಡ ಬೆಟ್ಟಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜ್ಞಾನಿ ಕಪಿಲ್ ಸಿಂಗ್, ಸದ್ಯ ಬೆಟ್ಟದಲ್ಲಿ ಮೂಡಿರುವ ಬಿರುಕುಗಳು ಮುಂದೆ ಗುಡ್ಡ ಕುಸಿತದ ಮುನ್ಸೂಚನೆಯಂತಿವೆ. ಹೀಗಾಗಿ ಅಯ್ಯಪ್ಪ ಹಾಗೂ ನೆಹರು ಬೆಟ್ಟಗಳು ಯಾವುದೇ ಕಾರಣಕ್ಕೂ ವಾಸಕ್ಕೆ ಸುರಕ್ಷಿತವಾದ ಸ್ಥಳಗಳಲ್ಲ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

vlcsnap 2019 08 17 16h27m50s194

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಮಳೆಗಾಲದ ಸಂದರ್ಭದಲ್ಲಿ ಯಾವಾಗ ಬೇಕಾದರೂ ಬೆಟ್ಟ ಕುಸಿಯುವ ಸಾಧ್ಯತೆ ಇದೆ ಎಂದು ಅಧ್ಯಯನ ತಂಡ ಹೇಳಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ 54 ಕುಟುಂಬಗಳನ್ನು ಸ್ಥಳಾಂತರಿಸಲಾಗಿದೆ. ಜೊತೆಗೆ ಆಗಸ್ಟ್ 31 ರವರೆಗೆ ಈ ಕುಟುಂಬಗಳಿಗೆ ನಿರಾಶ್ರಿತರ ಕೇಂದ್ರಗಳಲ್ಲಿ ಆಶ್ರಯ ನೀಡಲಾಗುವುದು. ಬಳಿಕ ವಿಜ್ಞಾನಿಗಳ ತಂಡದ ವರದಿಯನ್ನು ಆಧರಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇತ್ತೀಚೆಗೆ ಎರಡೂ ಬೆಟ್ಟಗಳು ಭಾರೀ ಬಿರುಕು ಬಿಟ್ಟಿದ್ದವು. ಹೀಗಾಗಿ ಇಂದು ಬೆಂಗಳೂರಿನಿಂದ ಭೂವಿಜ್ಞಾನಿಗಳ ತಂಡ ಆಗಮಿಸಿ, ಎರಡೂ ಬೆಟ್ಟಗಳ ಮಣ್ಣು ಪರೀಕ್ಷೆ ನಡೆಸಿತು. ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ನೇತೃತ್ವದಲ್ಲಿ ತಂಡ ಬೆಟ್ಟಕ್ಕೆ ಭೇಟಿ ನೀಡಿತ್ತು. ಕಪಿಲ್ ಸಿಂಗ್ ಮತ್ತು ಸುನಂದ ಬಸು ವಿಜ್ಞಾನಿಗಳ ತಂಡ ಮಳೆಗಾಲದಲ್ಲಿ ಬೆಟ್ಟ ಕುಸಿಯುವ ಸಾಧ್ಯತೆ ಇದೆ, ಹೀಗಾಗಿ ಅಲ್ಲಿ ವಾಸ ಮಾಡುವುದು ಯೋಗ್ಯವಲ್ಲ ಎಂದು ದೃಢಪಡಿಸಿದೆ.

vlcsnap 2019 08 14 19h51m13s185

ಈ ಹಿಂದೆಯೇ ವಿರಾಜಪೇಟೆ ನಗರದ ನೆಹರು ನಗರ ಬೆಟ್ಟ ಮತ್ತು ಅಯ್ಯಪ್ಪ ಬೆಟ್ಟ ಕುಸಿಯುವ ಭೀತಿಯಲ್ಲಿವೆ. ನೆಹರು ನಗರದಲ್ಲಿ ಬೆಟ್ಟ ಸಂಪೂರ್ಣ ಬಾಯ್ತೆರಿದಿದ್ದು, ಬೆಟ್ಟದ ಬಿರುಕು ಕ್ಷಣ ಕ್ಷಣಕ್ಕೂ ಅಗಲವಾಗುತ್ತಿದೆ. ಅಲ್ಲದೆ, ಅಯ್ಯಪ್ಪ ಬೆಟ್ಟದಲ್ಲಿ ಸಹ ದೊಡ್ಡ ಬಿರುಕುಗಳು ಕಾಣಿಸಿಕೊಂಡಿದ್ದು, ಯಾವುದೇ ಕ್ಷಣದಲ್ಲೂ ಬೆಟ್ಟ ಕುಸಿಯಬಹುದು ಎಂದು ಜಿಲ್ಲಾಡಳಿತ ತಿಳಿಸಿತ್ತು.

ಮುನ್ನೆಚ್ಚರಿಕಾ ಕ್ರಮವಾಗಿ ನೆಹರು ಬೆಟ್ಟದ 8 ಕುಟುಂಬಗಳನ್ನು ಹಾಗೂ ಅಯ್ಯಪ್ಪ ಬೆಟ್ಟದ ಬಳಿಯ 25 ಕುಟುಂಬಗಳನ್ನು ಸ್ಥಳಾಂತರ ಮಾಡಲಾಗಿತ್ತು. ಈ ಎಲ್ಲ ಕುಟುಂಬಗಳಿಗೆ ವಿರಾಜಪೇಟೆಯ ಸರ್ಕಾರಿ ಶಾಲೆಯಲ್ಲಿ ಆಶ್ರಯ ಕಲ್ಪಿಸಲಾಗಿತ್ತು. ಸ್ಥಳಾಂತರಿಸಿದರೂ ಯಾವ ಪ್ರಮಾಣದಲ್ಲಿ ಗುಡ್ಡ ಕುಸಿಯಲಿದೆ ಎಂದು ಹೇಳಲು ಸಾಧ್ಯವಿಲ್ಲ. ಹೀಗಾಗಿ ವಿರಾಜಪೇಟೆ ನಗರದ ಜನತೆ ತೀವ್ರ ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ.

TAGGED:Ayyappa HillDistrict AdministrationFallgeologistsNehru HillPublic TVಅಯ್ಯಪ್ಪ ಬೆಟ್ಟಕುಸಿತಜಿಲ್ಲಾಡಳಿತನೆಹರು ಬೆಟ್ಟಪಬ್ಲಿಕ್ ಟಿವಿವಿಜ್ಞಾನಿಗಳು
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
16 minutes ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
57 minutes ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
1 hour ago
BJP MP Vishweshwar Hegde Kageri
Kalaburagi

ಇರಾನ್-ಇಸ್ರೇಲ್ ಯುದ್ಧದ ಸಂದರ್ಭದಲ್ಲಿ ದೇಶಕ್ಕೆ ಸಮಸ್ಯೆಯಾಗಿಲ್ಲ: ಕಾಗೇರಿ

Public TV
By Public TV
2 hours ago
Behnam Rezaei
Latest

ಇರಾನ್‌ಗೆ ಶಾಕ್: ನೌಕಾಪಡೆ ಉಪ ಗುಪ್ತಚರ ಮುಖ್ಯಸ್ಥ ಬೆಹ್ನಾಮ್ ರೆಝಾಯ್ ಹತ್ಯೆ – ಖಚಿತಪಡಿಸಿದ IRGC

Public TV
By Public TV
2 hours ago
eve Sweet 2
Latest

ವಿಶ್ವದ ನಂ.1 ನೀಲಿ ತಾರೆಗೆ 1 ತಿಂಗಳಲ್ಲಿ 1000 ಪುರುಷರಿಂದ ಬಂತು ಮದುವೆ ಪ್ರಪೋಸಲ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?