ಸ್ವತಃ ಟೀ ತಯಾರಿಸಿ, ಮಾರಿದ ದೀದಿ: ವಿಡಿಯೋ

Public TV
2 Min Read
Mamata Banerjee

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಟೀ ತಯಾರಿಸಿ, ಮಾರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಮಮತಾ ಬ್ಯಾನರ್ಜಿ ಅವರು ಜನಸಂಪರ್ಕ ಅಭಿಯಾನದ ಮೂಲಕ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡುತ್ತಿದ್ದಾರೆ. ಈ ನಿಟ್ಟಿನಲ್ಲಿ ಬುಧವಾರ ಕರಾವಳಿ ಪ್ರದೇಶ ದಿಘಾದ ದತ್‍ಪುರ ಗ್ರಾಮಕ್ಕೆ ಭೇಟಿ ನೀಡಿದಾಗ ರಸ್ತೆ ಬದಿಯ ಅಂಗಡಿಯಲ್ಲಿ ಸ್ವತಃ ಟೀ ತಯಾರಿಸಿ, ಗ್ರಾಹಕರು ಹಾಗೂ ಬೆಂಬಲಿಗರಿಗೆ ನೀಡಿದ್ದಾರೆ. ಇದನ್ನೂ ಓದಿ: ಚುನಾವಣೆ ಗೆಲುವಿಗೆ ಪ್ರಶಾಂತ್ ಕಿಶೋರ್ ಮೊರೆ ಹೋದ ದೀದಿ

ಮಮತಾ ಬ್ಯಾನರ್ಜಿ ಅವರು ದತ್‍ಪುರ ಗ್ರಾಮ ಅಂಗಡಿಯ ಮುಂದೆ ಮೊದಲು ಒಂದು ಪುಟ್ಟ ಮಗುವನ್ನು ಎತ್ತಿ ಮುದ್ದಾಡಿದರು. ಬಳಿಕ ಅಂಗಡಿಯ ಒಳಗೆ ಹೋಗಿ, ಟೀ ತಯಾರಿಸಿ, ಮಾರಿದ್ದಾರೆ. ಈ ದೃಶ್ಯವನ್ನು ಸ್ಥಳದಲ್ಲಿದ್ದ ಟಿಎಂಸಿ ಪಕ್ಷದ ಕಾರ್ಯಕರ್ತರು, ದೀದಿ ಬೆಂಬಲಿಗರು ತಮ್ಮ ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೋದಲ್ಲಿ ಅನೇಕ ಜನರು ದೀದಿ ಅವರನ್ನು ಸುತ್ತುವರೆದಿದ್ದಾರೆ.

ಈ ವಿಡಿಯೋವನ್ನು ಮಮತಾ ಬ್ಯಾನರ್ಜಿ ಅವರು ಟ್ವೀಟ್ ಮಾಡಿದ್ದರು, ಜೀವನದಲ್ಲಿ ಕೆಲವೊಮ್ಮೆ ಸಣ್ಣ ಕೆಲಸವು ಕೂಡ ನಮಗೆ ಬಹಳಷ್ಟು ಸಂತೋಷವನ್ನು ನೀಡುತ್ತದೆ. ಇವುಗಳಲ್ಲಿ ಉತ್ತಮ ಟೀ ತಯಾರಿಸುವುದು ಮತ್ತು ಕುಡಿಯುವುದು ಕೂಡ ಒಂದಾಗಿದೆ ಎಂದು ಬರೆದುಕೊಂಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಾರೀ ಪ್ರಚಾರ ತಂದುಕೊಟ್ಟ ‘ಚಾಯ್ ಪೇ ಚರ್ಚಾ’ ತಂತ್ರವನ್ನು ಮಮತಾ ಬ್ಯಾನರ್ಜಿ ಅನುಸರಿಸುತ್ತಿದ್ದಾರೆ. ಮತ್ತೆ ಅಧಿಕಾರಕ್ಕೆ ಬರಲು ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ತೃಣ ಮೂಲ ಕಾಂಗ್ರೆಸ್‍ಗೆ ಹೆಚ್ಚಿನ ಬೆಂಬಲ ತಂದುಕೊಡುವಲ್ಲಿ ನಿರತರಾಗಿದ್ದಾರೆ. ಹೀಗಾಗಿ ಸಾರ್ವಜನಿಕ ಸಂಪರ್ಕ ಸಾಧಿಸಿ, ಜನರು ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ ಹಾಗೂ ಅವುಗಳನ್ನು ನಿವಾರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಾಗಿದೆ.

mamata banerjee Modi

2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‍ನ ಹಿರಿಯ ನಾಯಕ ಮಣಿ ಶಂಕರ್ ಅಯ್ಯರ್ ಚಾಯ್ ಅವರು ಪ್ರಧಾನಿ ಮೋದಿ ಅವರನ್ನು ಎಂದು ಟೀಕೆ ಮಾಡಿದ್ದರು. ಮೋದಿ ಪ್ರಧಾನಿ ಅಭ್ಯರ್ಥಿಯೇ ಅಲ್ಲ. ಚಹಾ ಮಾರುವುದಕ್ಕೆ ಸೂಕ್ತ ವ್ಯಕ್ತಿ ಎಂದಿದ್ದರು. ಇದನ್ನು ಬಳಸಿಕೊಂಡಿದ್ದ ಬಿಜೆಪಿ `ಚಾಯ್ ಪೇ ಚರ್ಚಾ’ ಹೆಸರಿನಲ್ಲಿ ಹೊಸ ಅಭಿಯಾನ ಹುಟ್ಟು ಹಾಕಿತ್ತು. ಈ ಅಭಿಯಾನ ದೊಡ್ಡಮಟ್ಟದಲ್ಲಿ ಜನ ಮಾನಸದಲ್ಲಿ ಉಳಿದುಕೊಳ್ಳುವ ಮೂಲಕ ಯಶಸ್ವಿಯಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *