ಮಂಡ್ಯ: ಸಿಎಂ ಯಡಿಯೂರಪ್ಪ ಅವರ ಕಟ್ಟಾ ಬೆಂಬಲಿಗರು ಸರ್ಕಾರ ಬೀಳಿಸಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಚಿವ ಸ್ಥಾನ ವಂಚಿತರ ವೇಗ ನೋಡಿದರೆ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ ಅನ್ನಿಸುತ್ತಿದೆ. ಅತೃಪ್ತ ಶಾಸಕರ ಸ್ಪೀಡ್ ನೋಡಿದರೆ ಅವರುಗಳೇ ಯಡಿಯೂರಪ್ಪ ಅವರನ್ನು ಮನೆಗೆ ಕಳುಹಿಸಲು ರೆಡಿಯಾಗಿದ್ದಾರೆ. ನಾವೇನೂ ಬಿಜೆಪಿ ನಾಯಕರಂತೆ ಬಿಜೆಪಿ ಶಾಸಕರನ್ನು ಅಪರೇಶನ್ ಮಾಡುವ ಕೆಲಸಕ್ಕೆ ಕೈ ಹಾಕೋದಿಲ್ಲ ಎಂದು ಟೀಕಿಸಿದರು.
ಇದೇ ವೇಳೆ ಬೇಬಿ ಬೆಟ್ಟದ ಗಣಿಗಾರಿಕೆ ವಿಷಯದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ. ಗಣಿಗಾರಿಕೆಗೆ ಸಂಬಂಧಿಸಿದಂತೆ ನಾವೇ ಎರಡು ತಿಂಗಳು ಕಾಲ ನಿಷೇಧಾಜ್ಞೆ ವಿಧಿಸಲಾಗಿದೆ. ಈಗ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿ ಮಾಡಿದ್ದಾರೆ ಎಂದು ತಿಳಿಸಿದರು.