ಮುಂಬೈ: ತಾಯಿಯ ಮೇಲೆ ಅತ್ಯಾಚಾರ ಎಸಗಿದ್ದ ಪ್ರಕರಣದ 20 ವರ್ಷದ ಆರೋಪಿಯನ್ನು ಮುಂಬೈ ಕೋರ್ಟ್ ಖುಲಾಸೆಗೊಳಿಸಿದೆ.
ಆರೋಪಿ ತನ್ನ ತಾಯಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನುವುದಕ್ಕೆ ಯಾವುದೇ ಸಾಕ್ಷ್ಯಾಧಾರಗಳಿಲ್ಲ. ಅಷ್ಟೇ ಅಲ್ಲದೆ ಅತ್ಯಾಚಾರವಾಗಿಲ್ಲ ಎಂದು ವೈದ್ಯಕೀಯ ಪರೀಕ್ಷೆಯ ವರದಿಯಲ್ಲೂ ತಿಳಿದು ಬಂದಿದೆ. ಹೀಗಾಗಿ ಆರೋಪಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ ಎಂದು ಕೋರ್ಟ್ ತೀರ್ಪು ನೀಡಿದೆ.
ಏನಿದು ಪ್ರಕರಣ?:
ಆರೋಪಿಯು ಮದ್ಯ ವ್ಯಸನಿಯಾಗಿದ್ದು 2018ರ ಜನವರಿ 1ರಂದು ಕುಡಿದು ಮನೆಗೆ ಬಂದಿದ್ದ. ಈ ವೇಳೆ ಹಣ ನೀಡುವಂತೆ ನನ್ನ ಮೇಲೆ ಹಲ್ಲೆ ಮಾಡಿದ್ದ ಹಾಗೂ ಅಸಭ್ಯವಾಗಿ ವರ್ತಿಸಿದ್ದ ಎಂದು ತಾಯಿಯು ಪೊಲೀಸರಿಗೆ ದೂರು ನೀಡಿದ್ದಳು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಈ ಹಿಂದೆ ಕೋರ್ಟ್ ವಿಚಾರಣೆಗೆ ಹಾಜರಾಗಿದ್ದ ಆರೋಪಿ, ತಾನು ಮದ್ಯದ ಅಮಲಿನಲ್ಲಿ ಹಣ ಕೇಳಿ ತಾಯಿ ಮೇಲೆ ಹಲ್ಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದ. ಜೊತೆಗೆ ಕ್ಷಮೆಯಾಚಿಸಿದ್ದ. ಅಲ್ಲದೆ ತಾನು ತಾನು ತಾಯಿ ಮೇಲೆ ಅತ್ಯಾಚಾರ ಎಸಗುವ ನೀಚ ವ್ಯಕ್ತಿಯಲ್ಲ ಎಂದು ಹೇಳಿದ್ದ.