Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನರ್ಹ ಶಾಸಕರಿಗೆ ಬಿಜೆಪಿಯಿಂದ ಬಂಪರ್ ಆಫರ್ – 1 ಕ್ಷೇತ್ರದ ಬಗ್ಗೆ ಮುಗಿಯದ ಗೊಂದಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅನರ್ಹ ಶಾಸಕರಿಗೆ ಬಿಜೆಪಿಯಿಂದ ಬಂಪರ್ ಆಫರ್ – 1 ಕ್ಷೇತ್ರದ ಬಗ್ಗೆ ಮುಗಿಯದ ಗೊಂದಲ

Bengaluru City

ಅನರ್ಹ ಶಾಸಕರಿಗೆ ಬಿಜೆಪಿಯಿಂದ ಬಂಪರ್ ಆಫರ್ – 1 ಕ್ಷೇತ್ರದ ಬಗ್ಗೆ ಮುಗಿಯದ ಗೊಂದಲ

Public TV
Last updated: September 25, 2019 2:24 pm
Public TV
Share
3 Min Read
rebel final
SHARE

ಬೆಂಗಳೂರು: ಅನರ್ಹ ಶಾಸಕರಿಗೆ ಬಿಜೆಪಿ ಬಂಪರ್ ಆಫರ್ ಪ್ರಕಟಿಸಿದೆ. ಒಂದು ಕ್ಷೇತ್ರ ಹೊರತುಪಡಿಸಿ ಘೋಷಣೆ ಆಗಿರುವ 14 ಕ್ಷೇತ್ರಗಳಿಗೆ ಅನರ್ಹರಿಗೆ ಅಥವಾ ಅವರ ಸಂಬಂಧಿಗೆ ಟಿಕೆಟ್ ನೀಡಲು ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ.

ಇವತ್ತು ನಡೆಯುವ ಕೋರ್ ಕಮಿಟಿ ಸಭೆಯಲ್ಲಿ ಹೆಸರುಗಳನ್ನು ಅಂತಿಮಗೊಳಿಸಿ ಕಳುಹಿಸುವಂತೆ ಹೈಕಮಾಂಡ್ ಬಿಜೆಪಿ ನಾಯಕರಿಗೆ ಸೂಚನೆ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಈ ವಿಚಾರವಾಗಿ ಬಿಜೆಪಿ ಬಳಿ ಎರಡು ಆಯ್ಕೆಗಳಿವೆ. ಒಂದು ಅನರ್ಹರನ್ನೇ ಕಣಕ್ಕೆ ಇಳಿಸುವುದು.  ಇವರ ನಾಮಪತ್ರದ ಜೊತೆಗೆ ಅನರ್ಹರು ಸೂಚಿಸಿದ ವ್ಯಕ್ತಿಗಳಿಂದ ನಾಮಪತ್ರ ಸಲ್ಲಿಸುವುದು. ಸುಪ್ರೀಂನಲ್ಲಿ ಪರ ತೀರ್ಪು ಬಂದರೆ ಅನರ್ಹರೇ ಸ್ಪರ್ಧಿಸಲಿದ್ದಾರೆ. ಒಂದು ವೇಳೆ ವಿರುದ್ಧ ತೀರ್ಪು ಬಂದರೆ ಅನರ್ಹರು ಯಾರನ್ನು ಸೂಚಿಸುತ್ತಾರೋ ಅವರನ್ನೇ ಕಣಕ್ಕೆ ಇಳಿಸಿ ಎಂದು ಹೈಕಮಾಂಡ್ ಸೂಚನೆ ನೀಡಿದೆ.

Bjp flag 3

ಅಥಣಿ ಕ್ಷೇತ್ರದ ಟಿಕೆಟ್ ವಿಚಾರದಲ್ಲಿ ಗೊಂದಲ ಮುಂದುವರಿದಿದ್ದು, ಮಹೇಶ್ ಕುಮಟಹಳ್ಳಿ ಪರಿಷತ್ ಸದಸ್ಯ ಸ್ಥಾನಕ್ಕೆ ಒಪ್ಪಿದರೆ ಮಾತ್ರ ಡಿಸಿಎಂ ಲಕ್ಷ್ಮಣ ಸವದಿಗೆ ಟಿಕೆಟ್ ನೀಡಲಾಗುತ್ತದೆ. ಈ ಕ್ಷೇತ್ರದ ಟಿಕೆಟ್ ಹಂಚಿಕೆ ಬಗ್ಗೆ ಇನ್ನು ಚೌಕಾಶಿ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ಮಂಗಳವಾರ ಅನರ್ಹ ಶಾಸಕರಾದ ಎಸ್.ಟಿ.ಸೋಮಶೇಖರ್, ಭೈರತಿ ಬಸವರಾಜ್, ಶಿವರಾಮ್ ಹೆಬ್ಬಾರ್, ಪ್ರತಾಪ್‍ಗೌಡ ಪಾಟೀಲ್, ರಮೇಶ್ ಜಾರಕಿಹೊಳಿ ದೆಹಲಿಯಿಂದ ಬೆಂಗಳೂರಿಗೆ ಮರಳಿದ್ದರು. ಇದನ್ನೂ ಓದಿ: ಕರ್ನಾಟಕದ 2 ಕ್ಷೇತ್ರಗಳಿಗೆ ಉಪಚುನಾವಣೆ ಇಲ್ಲ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರ ಬಂದ ಅನರ್ಹ ಶಾಸಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ್ದರು. ಸ್ವಲ್ಪ ಸಮಯದ ಬಳಿಕ ಮಾತನಾಡಿದ ಅನರ್ಹ ಶಾಸಕ ಭೈರತಿ ಬಸವರಾಜ್, ನಾವು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇವೆ. ನಾವೇನೂ ತಪ್ಪು ಮಾಡಿಲ್ಲ. ಸುಪ್ರೀಂಕೋರ್ಟ್ ತೀರ್ಪು ನಮ್ಮ ಪರವಾಗಿಯೇ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

Rebel MLAs B 1

ಉಪ ಚುನಾವಣೆ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಯವರು ಟಿಕೆಟ್ ಕೊಡುವುದಿಲ್ಲ ಅಂತ ಎಲ್ಲಿಯೂ ಹೇಳಿಕೊಂಡಿಲ್ಲ. ಅವರು ಟಿಕೆಟ್ ಕೊಡದಿದ್ದರೆ ಮುಂದೆ ನೋಡೋಣ ಎಂದು ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದರು.

ಶಿವರಾಮ್ ಹೆಬ್ಬಾರ್ ಅವರು, ಇನ್ನೆರಡು ದಿನ ಕಾದು ನೋಡಿ ಎಲ್ಲವೂ ನಿಮಗೆ ಗೊತ್ತಾಗುತ್ತದೆ. ಈಗಲೇ ಎಲ್ಲವ್ನೂ ಹೇಳಲು ಸಾಧ್ಯವಿಲ್ಲ ಎಂದಿದ್ದರೆ ಇತ್ತ ಪ್ರತಾಪ್‍ಗೌಡ ಪಾಟೀಲ್ ಅವರು, ಉಪ ಚುನಾವಣೆಗೆ ಹೋಗುವುದೇ ನಮ್ಮ ನಡೆ ಅಷ್ಟೇ. ಇದನ್ನು ಬಿಟ್ಟು ಏನನ್ನೂ ಹೇಳಲ್ಲ ಎಂದು ಕಾರ್ ಹತ್ತಿ ಹೊರಟು ಹೋಗಿದ್ದರು.

ಶಾಸಕ ಸ್ಥಾನದ ಅನರ್ಹತೆಯನ್ನು ಪ್ರಶ್ನೆ ಮಾಡಿ ಸುಪ್ರೀಂ ಕೋರ್ಟಿನಲ್ಲಿ ಅನರ್ಹರು ಅರ್ಜಿ ಸಲ್ಲಿಕೆ ಮಾಡಿದ್ದರು. ಆದರೆ ತ್ವರಿತ ವಿಚಾರಣೆಗೆ ನಿರಾಕರಿಸಿತ್ತು. ಅಲ್ಲದೇ ಸೆ. 16ರಂದು ಪ್ರಕರಣ ವಿಚಾರಣೆಗೆ ಬಂದರೂ ಕೂಡ ನ್ಯಾಯಮೂರ್ತಿಗಳು ವಿಚಾರಣೆಯಿಂದ ಹಿಂದೆ ಸರಿದ ಪರಿಣಾಮ ಪ್ರಕರಣ ವಿಚಾರಣೆ ಮುಂದೂಡಲಾಗಿತ್ತು. ಈಗ ಸೆ.22 ರಿಂದ ವಿಚಾರಣೆ ಆರಂಭಗೊಂಡಿದೆ.

Rebel MLA 1

ರಾಜ್ಯಗಳಲ್ಲಿ 15 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದ್ದು ನಾಮಪತ್ರ ಸಲ್ಲಿಕೆ ಮಾಡಲು ಸೆ.30 ಅಂತಿಮ ದಿನವಾಗಿದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 3 ಕಡೆಯ ದಿನಾಂಕವಾಗಿದೆ. ಅಕ್ಟೋಬರ್ 21 ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು, ಅ.24 ರಂದು ಫಲಿತಾಂಶ ಲಭ್ಯವಾಗಲಿದೆ. ಹೀಗಾಗಿ ಸೆ.30ರ ಒಳಗಡೆ ಪ್ರಕರಣ ಇತ್ಯರ್ಥವಾಗದಿದ್ದರೆ ಅನರ್ಹರು ಸಂಕಷ್ಟಕ್ಕೆ ಸಿಲುಕಲಿದ್ದಾರೆ.

ಚುನಾವಣಾ ಆಯೋಗದ ಘೋಷಣೆಯಂತೆ ಹಿರೇಕೆರೂರು ಅನರ್ಹ ಶಾಸಕರಾದ ಬಿ.ಸಿ.ಪಾಟೀಲ್, ಯಶವಂತಪುರದ ಎಸ್.ಟಿ.ಸೋಮಶೇಖರ್, ವಿಜಯನಗರದ ಆನಂದ್ ಸಿಂಗ್, ಚಿಕ್ಕಬಳ್ಳಾಪುರದ ಕೆ.ಸುಧಾಕರ್, ಹೊಸಕೋಟೆಯ ಎಂಟಿಬಿ ನಾಗರಾಜ್, ಯಲ್ಲಾಪುರದ ಶಿವರಾಂ ಹೆಬ್ಬಾರ್, ಶಿವಾಜಿನಗರದ ರೋಷನ್ ಬೇಗ್, ಕೆ.ಆರ್.ಪುರಂನ ಬೈರತಿ ಬಸವರಾಜ್, ಮಹಾಲಕ್ಷ್ಮಿ ಲೇಔಟಿನ ಗೋಪಾಲಯ್ಯ, ಕಾಗವಾಡದ ಶ್ರೀಮಂತ್ ಪಾಟೀಲ್, ಹುಣಸೂರಿನ ಹೆಚ್.ವಿಶ್ವನಾಥ್ ಮತ್ತು  ನಾರಾಯಣಗೌಡರ ಕೆ.ಆರ್.ಪೇಟೆಯ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ.

TAGGED:bjpelectionskannada newskarnatakaSupreme Courtಅನರ್ಹ ಶಾಸಕರುಚುನಾವಣಾ ಆಯೋಗಟಿಕೆಟ್ನಾಮಪತ್ರ ಸಲ್ಲಿಕೆಬಿಜೆಪಿ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

devendra fadnavis
Karnataka

ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ: ದೇವೇಂದ್ರ ಫಡ್ನವೀಸ್

Public TV
By Public TV
2 minutes ago
Election Commission
Latest

ಪ.ಬಂಗಾಳ ಚುನಾವಣೆ ವೇಳೆ ದುರ್ನಡತೆ – ಐವರು ಪೊಲೀಸ್ ಅಧಿಕಾರಿಗಳನ್ನ ಅಮಾನತುಗೊಳಿಸಿ ಶಿಸ್ತು ಕ್ರಮಕ್ಕೆ ನಿರ್ದೇಶಿಸಿದ EC

Public TV
By Public TV
10 minutes ago
a huge tree fell in front of a moving car in aldur chikkamagaluru
Chikkamagaluru

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ – ಪ್ರಯಾಣಿಕರು ಜಸ್ಟ್‌ ಮಿಸ್‌

Public TV
By Public TV
34 minutes ago
We are not blackmailing we are demanding our rights Mandya Muslim clerics stern warning to Congress
Districts

ಅಧಿಕಾರಕ್ಕೆ ತಂದ ನಮಗೆ ನಿಮ್ಮನ್ನು ಕೆಳಗಿಳಿಸುವುದು ಗೊತ್ತು- ಕಾಂಗ್ರೆಸ್‌ಗೆ ಮುಸ್ಲಿಂ ಧರ್ಮಗುರುಗಳ ಖಡಕ್ ವಾರ್ನಿಂಗ್

Public TV
By Public TV
43 minutes ago
Chalavadi narayanaswamy
Bengaluru City

ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ಜನರಲ್ ಎಸ್‌ಸಿ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತೆ: ಛಲವಾದಿ ಕಿಡಿ

Public TV
By Public TV
1 hour ago
CET Exam Staff who cut Janavara and threw it dustbin Chikkaballapura
Chikkaballapur

CET Exam| ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?