ಲಕ್ನೋ: ಪ್ರಿಯಕರನ ಜೊತೆ ದೈಹಿಕ ಸಂಬಂಧದಲ್ಲಿ ತೊಡಗಿದ್ದ ಪತ್ನಿ ಪತಿ ಕೈಗೆ ಸಿಕ್ಕಿಬಿದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.
ಬಾರ್ರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಪಕ್ಕದ ಮನೆಯ ಮಹೇಶ್ ಎಂಬವನ ಜೊತೆ ಅನೈತಿಕ ಸಂಬಂಧ ಹೊಂದಿದ್ದಳು. ಪತಿ ಇಲ್ಲಿದಿದ್ದಾಗ ಮಹೇಶ್ ಮಹಿಳೆಯ ಮನೆಗೆ ಬರುತ್ತಿದ್ದನು. ಹೀಗೆ ಮಹೇಶ್ ಮಹಿಳೆಯ ಮನೆಗೆ ಭೇಟಿ ನೀಡಿದ್ದು, ಇಬ್ಬರು ದೈಹಿಕ ಸಂಬಂಧ ಬೆಳೆಸುತ್ತಿದ್ದರು.
ಇಬ್ಬರು ಸಂಬಂಧ ಬೆಳೆಸುತ್ತಿದ್ದ ವೇಳೆ ಮಹಿಳೆಯ ಪತಿ ಮನೆಗೆ ಬಂದಿದ್ದಾನೆ. ಅಲ್ಲದೆ ಪತ್ನಿ ಪ್ರಿಯಕರನ ಜೊತೆ ದೈಹಿಕ ಸಂಬಂಧ ಬೆಳೆಸುತ್ತಿರುವುದ್ದನ್ನು ನೋಡಿದ್ದಾನೆ. ಇದಾದ ಬಳಿಕ ಪತಿ ಹಾಗೂ ಪತ್ನಿ ನಡುವೆ ಜಗಳವಾಗಿದ್ದು, ಮಹಿಳೆ ತಪ್ಪಿತಸ್ಥ ಮನೋಭಾವನೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಜನರು ಸಾಕಷ್ಟು ಚರ್ಚೆ ಮಾಡಲು ಶುರು ಮಾಡಿದ್ದಾರೆ. ಸದ್ಯ ಘಟನೆ ಬಗ್ಗೆ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಲ್ಲದೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.