Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 26 ವರ್ಷ ಸೇನೆಯಲ್ಲಿ ಸೇವೆ-ನಿವೃತ್ತಿ ನಂತರವೂ ದೇಶ ಸೇವೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 26 ವರ್ಷ ಸೇನೆಯಲ್ಲಿ ಸೇವೆ-ನಿವೃತ್ತಿ ನಂತರವೂ ದೇಶ ಸೇವೆ

Districts

26 ವರ್ಷ ಸೇನೆಯಲ್ಲಿ ಸೇವೆ-ನಿವೃತ್ತಿ ನಂತರವೂ ದೇಶ ಸೇವೆ

Public TV
Last updated: October 10, 2019 1:17 pm
Public TV
Share
2 Min Read
RCR Public Hero
SHARE

-ಸೇನಾ ಆಕಾಂಕ್ಷಿಗಳಿಗೆ ತರಬೇತಿ

ರಾಯಚೂರು: ಸರ್ಕಾರಿ ನೌಕರಿಯಿಂದ ನಿವೃತ್ತಿಯಾದರೆ ಸಾಕು ಮನೆ ಮಕ್ಕಳು ಮೊಮ್ಮಕ್ಕಳು ಅಂತ ಆರಾಮಾಗಿದ್ದು ಬಿಡೋಣ ಅಂದುಕೊಳ್ಳುವವರೇ ಜಾಸ್ತಿ. ರಾಯಚೂರಿನ ಮಾಜಿ ಸೈನಿಕ ಮೊಹಮದ್ ಸಲೀಂ ಮಾತ್ರ ನಿವೃತ್ತಿ ಬಳಿಕವೂ ದೇಶಸೇವೆಯನ್ನ ಮುಂದುವರಿಸಿದ್ದಾರೆ. ಸೇನೆ ಸೇರಲು ಆಸಕ್ತಿಯಿರುವ ಯುವಕರಿಗೆ ಮಾರ್ಗದರ್ಶಕರಾಗಿ ಉಚಿತವಾಗಿ ತರಬೇತಿ ನೀಡುವ ಮೂಲಕ ಆದರ್ಶವಾಗಿದ್ದಾರೆ.

vlcsnap 2019 10 10 12h54m16s707

ಮೊಹಮದ್ ಸಲೀಂ ರಾಯಚೂರಿನ ಲಿಂಗಸುಗೂರು ತಾಲೂಕಿನ ಗುರಗುಂಟಾ ಗ್ರಾಮದ ಮಾಜಿ ಸೈನಿಕ. ಹವಾಲ್ದಾರ್ ಮೇಜರ್ ಆಗಿದ್ದ ಸಲೀಂ ಸೇನಾ ನಿವೃತ್ತಿ ಬಳಿಕ 2017 ರಿಂದ ಹಟ್ಟಿ ಪಟ್ಟಣದ ಸಿಂಡಿಕೇಟ್ ಬ್ಯಾಂಕ್‍ನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಇಷ್ಟೆ ಆಗಿದ್ರೆ ಅಂತಾ ವಿಶೇಷ ಏನ್ ಇರಲಿಲ್ಲ ಬಿಡಿ. ರಾಯಚೂರು ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದಿಂದ ಸೇನೆಯಲ್ಲಿ ಸೇವೆ ಸಲ್ಲಿಸುವವರ ಸಂಖ್ಯೆ ಕಡಿಮೆಯಿದ್ದು, ಅದನ್ನ ಹೆಚ್ಚಿಸಬೇಕು ಅಂತ ಎರಡು ವರ್ಷಗಳಿಂದ ಉಚಿತ ಸೇನಾ ತರಬೇತಿ ನೀಡುತ್ತಿದ್ದಾರೆ.

ಗುರುಗುಂಟಾ ಗ್ರಾಮದಲ್ಲಿ ತರಬೇತಿಗೆ ಸೌಲಭ್ಯಗಳು ಇಲ್ಲದಿದ್ದರೂ ಗ್ರಾಮದ ಹೊರವಲಯದ ಪ್ರದೇಶವೊಂದರಲ್ಲಿ ಸೇನಾರ್ಥಿಗಳಿಗೆ ಅಗತ್ಯ ತರಬೇತಿ ನೀಡುತ್ತಿದ್ದಾರೆ. ಕೇವಲ ಗುರಗುಂಟಾ ಮಾತ್ರವಲ್ಲದೆ ಸುತ್ತಮುತ್ತಲ ಗ್ರಾಮಗಳಾದ ಗೌಡೂರು, ಯಲಗಟ್ಟ, ಮಾಚನೂರು, ಕೋಠಾ, ಹಟ್ಟಿ, ರಾಯದುರ್ಗ, ಅಮರೇಶ್ವರ ಕ್ರಾಸ್ ನಿಂದಲೂ ಯುವಕರು ತರಬೇತಿಗೆ ಬರುತ್ತಿದ್ದಾರೆ. ಅಲ್ಲದೆ ಬೀದರ್ ,ಗೋಕಾಕ್ ನಿಂದಲೂ ಆರು ಯುವಕರು ತರಬೇತಿಗೆ ಬಂದಿದ್ದು, ಅವರಿಗೆಲ್ಲಾ ಸಲೀಂ ಸ್ವಂತ ಖರ್ಚಿನಲ್ಲೇ ಊಟ, ವಸತಿ ವ್ಯವಸ್ಥೆ ಮಾಡಿದ್ದಾರೆ. ಒಟ್ಟು 45 ಜನ ತರಬೇತಿ ಪಡೆಯುತ್ತಿದ್ದಾರೆ.

hhkl

ಬೆಳಗ್ಗೆ ಐದು ಗಂಟೆಗೆಲ್ಲಾ ತರಬೇತಿ ಆರಂಭಿಸುವ ಸಲೀಂ ಯುವಕರಿಗೆ ಸೇನೆಗೆ ಆಯ್ಕೆಯಾಗಲು ಬೇಕಾಗುವ ಕಠಿಣ ದೈಹಿಕ ತರಬೇತಿಯನ್ನ ನೀಡುತ್ತಿದ್ದಾರೆ. ರನ್ನಿಂಗ್, ಲಾಂಗ್ ಜಂಪ್, ಹೈಜಂಪ್ ಶಾಟ್ ಪುಟ್ ನಿಂದ ಹಿಡಿದು ಪ್ರತಿಯೊಂದಕ್ಕೂ ಅಣಿಗೊಳಿಸುತ್ತಿದ್ದಾರೆ. ಇವರಲ್ಲಿ ತರಬೇತಿ ಪಡೆದ ಯುವಕ ರವಿಕುಮಾರ್ ಈಗಾಗಲೇ ಸೇನೆಗೆ ಆಯ್ಕೆಯಾಗಿದ್ದಾರೆ. ಮೂರು ಜನ ಯುವಕರು ಸ್ಟಾಫ್ ಸೆಲೆಕ್ಷನ್ ಕಮಿಷನ್ ಗೆ ಆಯ್ಕೆಯಾಗಿದ್ದಾರೆ. 26 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಯಾದ ಎಂ.ಡಿ.ಸಲಿಂ ತಾವು ಕೆಲಸ ಮಾಡುವ ಬ್ಯಾಂಕ್ ನಲ್ಲೂ ಒಳ್ಳೆಯ ಕೆಲಸಗಾರ ಅನ್ನೋ ಹೆಸರನ್ನ ಪಡೆದಿದ್ದು, ಬಡ ಯುವಕರನ್ನ ದೇಶಕಾಯಲು ಸಜ್ಜುಗೊಳಿಸುತ್ತಿದ್ದಾರೆ.

RCR Public Hero 1 2

ಪತ್ನಿ ಹಾಗೂ ಇಬ್ಬರು ಮಕ್ಕಳಿರುವ ಸಲೀಂ ಕೆಲಸಕ್ಕೆ ಅವರ ಕುಟುಂಬ ಹಾಗೂ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ. ಯುವಕರು ಹೆಚ್ಚು ಹೆಚ್ಚು ಸಂಖ್ಯೆಯಲ್ಲಿ ಸೇನೆ ಸೇರಬೇಕು. ಆದ್ರೆ ಅವರಿಗೆ ತರಬೇತಿ ತುಂಬಾ ದುಬಾರಿ ಆಗಿರುವುದರಿಂದ ಉಚಿತವಾಗಿ ತರಬೇತಿ ನೀಡುತ್ತಿದ್ದೇನೆ ಅಂತ ಸಲೀಂ ಹೇಳುತ್ತಾರೆ. ಬ್ಯಾನರ್, ವಾಟ್ಸಪ್ ಮೂಲಕ ಪ್ರಚಾರ ಮಾಡಿ ಯುವಕರನ್ನ ತರಬೇತಿಗೆ ಆಹ್ವಾನಿಸುತ್ತಿದ್ದಾರೆ. ಮೊದಲೆಲ್ಲಾ ಕೇವಲ ಬೆರಳೆಣಿಕೆಯಷ್ಟು ಯುವಕರಿಂದ ಆರಂಭವಾದ ತರಬೇತಿಗೆ ಈಗ 45 ಯುವಕರು ಬರುತ್ತಿದ್ದಾರೆ.

RCR Public Hero 1 1

ಮೈದಾನ, ವಸತಿ ಹಾಗೂ ತರಬೇತಿ ಸಾಮಗ್ರಿಗಳ ಕೊರತೆಯ ಮಧ್ಯೆಯೂ ಮೊಹಮದ್ ಸಲೀಂ ತಮ್ಮ ಕೈಲಾದ ಮಟ್ಟಿಗೆ ಸ್ವಂತ ಖರ್ಚಿನಲ್ಲೆ ಉಚಿತ ಸೇನಾ ತರಬೇತಿಯನ್ನ ನೀಡುತ್ತಿದ್ದಾರೆ. ನವೆಂಬರ್ 5 ರಿಂದ 16ರ ವರೆಗೆ ಕೊಪ್ಪಳದಲ್ಲಿ ನಡೆಯಲಿರುವ ಸೇನಾ ಭರ್ತಿ ರ್ಯಾಲಿಗೆ ಭರ್ಜರಿ ತಯಾರಿ ನಡೆಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಯುವಕರು ಆಯ್ಕೆಯಾಗುವ ನಿರೀಕ್ಷೆಯಲ್ಲಿ ಸಲೀಂ ಇದ್ದಾರೆ. ಸಲೀಂ ಹಾಗೂ ಅವರಲ್ಲಿ ತರಬೇತಿ ಪಡೆಯುತ್ತಿರುವ ಯುವಕರಿಗೆ ಆಲ್ ದಿ ಬೆಸ್ಟ್ ಹೇಳೋಣ.

TAGGED:Army Trainingformer soldierPublic HeroPublic TVraichurಪಬ್ಲಿಕ್ ಟಿವಿಪಬ್ಲಿಕ್ ಹೀರೋಮಾಜಿ ಸೈನಿಕರಾಯಚೂರುಸೇನಾ ತರಬೇತಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

AI Image
Latest

ಅಮೆರಿಕದ ಎಫ್-35 ಸೇರಿ ಜೆಟ್, ಕಾಪ್ಟರ್ ಉಡೀಸ್ – ಓರ್ವ ಪೈಲಟ್ ಸೆರೆ ಅಂತಿದೆ ಇರಾನ್

Public TV
By Public TV
11 minutes ago
Shwetha
Crime

ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ನರ್ಸ್‌ ಆತ್ಮಹತ್ಯೆ – ನಾಲ್ವರು ಅರೆಸ್ಟ್‌

Public TV
By Public TV
45 minutes ago
CRIME
Crime

ನೀರು ಕೇಳುವ ನೆಪದಲ್ಲಿ ಮನೆಗೆ ನುಗ್ಗಿ ಚಾಕು ತೋರಿಸಿ ಮಹಿಳೆಯ ಅತ್ಯಾಚಾರ

Public TV
By Public TV
1 hour ago
Siddaramaiah R Ashok
Bengaluru City

ಅನ್ನರಾಮಯ್ಯ ಅಲ್ಲ ಕನ್ನರಾಮಯ್ಯ, ಕೇಂದ್ರ ಸರ್ಕಾರ ನೀಡುವ ಅಕ್ಕಿಗೆ ಕನ್ನ: ಆರ್.ಅಶೋಕ್‌ ಟೀಕೆ

Public TV
By Public TV
2 hours ago
Ayush Mhatre Rohit Sharma
Cricket

ರೋಹಿತ್ ಭಾಯ್‌ ಟಿಪ್ಸ್‌ನಿಂದ U19 ವಿಶ್ವಕಪ್‌ ಗೆಲ್ಲಲು ಸಾಧ್ಯವಾಯ್ತು – ಆಯುಷ್ ಮ್ಹಾತ್ರೆ

Public TV
By Public TV
2 hours ago
mustafizur rahman 2
Cricket

ಬಾಂಗ್ಲಾ ಆಟಗಾರರಿಗೆ ಐಪಿಎಲ್‌ನಲ್ಲಿ ಆಡಲು ಬಿಸಿಸಿಐ ಗ್ರೀನ್‌ ಸಿಗ್ನಲ್‌?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?