– ಸಿಎಂಗೆ ನಿಜ ಗೊತ್ತಿದ್ದರೆ ಸ್ಥಳಾಂತರ ಮಾಡ್ತಿರಲಿಲ್ಲ
ಬೆಂಗಳೂರು: ದೊಡ್ಡವರ ನ್ಯಾಯ ನನಗೆ ಬೇಡ. ನನ್ನ ಲೆವೆಲ್‍ನ ವಿಚಾರ ಮಾತ್ರ ನಾನು ಮಾತನಾಡುತ್ತೇನೆ. ಇಲ್ಲಿನ ಜಂಜಾಟವೇ ನನಗೆ ಸಾಕಾಗಿದೆ ಎಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಸದಾಶಿವನಗರದಲ್ಲಿಂದು ಹೆಚ್‍ಡಿಕೆ ಮತ್ತು ಸಿದ್ದರಾಮಯ್ಯ ನಡುವಿನ ವಾಕ್ಸಮರ ವಿಚಾರ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಕನಕಪುರ ಬಂಡೆ, ದೊಡ್ಡವರ ನ್ಯಾಯದ ವಿಚಾರ ನನಗೆ ಬೇಡ. ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಏನೇನು ಹೇಳಿಕೆಗಳನ್ನು ನೀಡಿದ್ದಾರೆ ಎಂದು ನನಗೆ ಗೊತ್ತಿಲ್ಲ ಎಂದರು.
ದೊಡ್ಡವರ ನ್ಯಾಯ ನನಗೆ ಬೇಡ. ನನ್ನ ಲೆವೆಲ್‍ನ ವಿಚಾರ ಮಾತ್ರ ಮಾತನಾಡುತ್ತೇನೆ. ಇಲ್ಲಿನ ಜಂಜಾಟವೇ ಸಾಕಾಗಿದೆ. ಆರೋಗ್ಯ ಸಮಸ್ಯೆಯನ್ನೇ ಮೊದಲು ಸರಿ ಮಾಡಿಕೊಳ್ಳಬೇಕಾಗಿದೆ. ಆಸ್ಪತ್ರೆಗೆ ಹೋಗೋದಕ್ಕೂ ನನಗೆ ಆಗುತ್ತಿಲ್ಲ. ಏನು ಪಾಲಿಟಿಕ್ಸ್ ಆಗಿದೆಯೋ ಗೊತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬಿಎಸ್‍ವೈ-ಎಚ್‍ಡಿಕೆ ನಡುವೆ ಒಳ ಒಪ್ಪಂದ: ಸಿದ್ದರಾಮಯ್ಯ ಆರೋಪ
ಇದೇ ವೇಳೆ ಮೆಡಿಕಲ್ ಕಾಲೇಜು ಸ್ಥಳಾಂತರ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಯಡಿಯೂರಪ್ಪಗೆ ನಿಜ ಸಂಗತಿ ಗೊತ್ತಿಲ್ಲ. ಗೊತ್ತಿದ್ದರೆ ಮೆಡಿಕಲ್ ಕಾಲೇಜ್ ಸ್ಥಳಾಂತರ ಮಾಡುತ್ತಿರಲಿಲ್ಲ. ನಾನು ಸುಧಾಕರ್ ವಿಚಾರದಲ್ಲಿ ಟೀಕೆ ಮಾಡೋದಿಲ್ಲ. ಚಿಕ್ಕಬಳ್ಳಾಪುರಕ್ಕಲ್ಲ, ಬೇರೆ ನೂರು ಕಡೆ ಬೇಕಾದ್ರೂ ಕೊಡಲಿ. ಆದರೆ ನಮಗೆ ಹಂಚಿಕೆಯಾಗಿದ್ದನ್ನ ಕಿತ್ತುಕೊಂಡಿದ್ದು ಸರಿಯಲ್ಲ. ನಾನು ಸಚಿವನಾಗಿದ್ದಾಗ ಒಂದೇ ಒಂದು ಕೆಲಸ ಮಾಡಿಸಿಕೊಳ್ಳಲೂ ಸಾಧ್ಯವಾಗಲಿಲ್ಲ. ಎಷ್ಟು ಕಷ್ಟಪಟ್ಟು ನನ್ನ ಕ್ಷೇತ್ರಕ್ಕೆ ಮೆಡಿಕಲ್ ಕಾಲೇಜು ತೆಗೆದುಕೊಂಡು ಹೋದೆ ಎಂದು ಬೇಸರಗೊಂಡರು.
ಕಾವೇರಿ ನೀರಿನ ವಿಚಾರದಲ್ಲೂ ಹೀಗೇ ಆಗಿದ್ದು. ಮೇಕೆದಾಟು ಯೋಜನೆ ಜಾರಿಗೆ ಬಂದರೆ ಹೆಚ್ಚು ತೊಂದರೆ ಆಗೋದು ನಮ್ಮ ಕ್ಷೇತ್ರಕ್ಕೆ ಆದರೂ ನಾವು ಬೆಂಗಳೂರಿಗಾಗಿ ತ್ಯಾಗಕ್ಕೆ ಸಿದ್ಧರಿದ್ದೇವೆ. ಇಂತಹ ಪರಿಸ್ಥಿತಿಯಲ್ಲಿ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡಲೇ ಬಾರದು ಸಿಎಂಗೆ ಪತ್ರ ಬರೆಯುತ್ತೇನೆ.