ದಾವಣಗೆರೆ: ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಶಾಸಕ ಎಂ.ಪಿ ರೇಣುಕಾಚಾರ್ಯ ಅವರಿಗೆ ಹೋರಿಯೊಂದು ಡಿಚ್ಚಿ ಹೊಡೆದಿರುವ ಘಟನೆ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ದೊಡ್ಡೇರಿ ಗ್ರಾಮದಲ್ಲಿ ನಡೆದಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ಹೋರಿ ಬೆದರಿಸುವ ಕಾರ್ಯಕ್ರಮವನ್ನು ದೊಡ್ಡೇರಿ ಗ್ರಾಮಸ್ಥರು ಆಯೋಜನೆ ಮಾಡಿದ್ದರು. ಇದಕ್ಕೆ ಮುಖ್ಯ ಅತಿಥಿಯಾಗಿ ಶಾಸಕ ರೇಣುಕಾಚಾರ್ಯ ಅವರನ್ನು ಕರೆಯಾಲಾಗಿತ್ತು. ಈ ಕಾರ್ಯಕ್ರಮಕ್ಕೆ ಹೋಗಿದ್ದ ರೇಣುಕಾಚಾರ್ಯ ಅವರಿಗೆ ಹೋರಿಯೊಂದು ವೇಗವಾಗಿ ಓಡಿಬಂದು ಡಿಚ್ಚಿ ಹೊಡೆದಿದೆ.
ತಮ್ಮ ನೆಚ್ಚಿನ ನಾಯಕ ಊರ ಕಾರ್ಯಕ್ರಮಕ್ಕೆ ಬಂದಿದ್ದಾರೆ ಎಂದು ರೇಣುಕಾಚಾರ್ಯ ಅವರ ಅಭಿಮಾನಿಗಳು ಅವರನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡುತ್ತಿದ್ದರು. ಈ ಸಮಯದಲ್ಲಿ ಜನರ ಕಿರುಚಾಟಕ್ಕೆ ಹೆದರಿ ಓಡಿಬಂದ ಹೋರಿ ಶಾಸಕ ರೇಣುಕಾಚಾರ್ಯ ಅವರಿಗೆ ಗುದ್ದಿದೆ. ಹೋರಿ ಹೊಡೆದ ರಭಸಕ್ಕೆ ರೇಣುಕಾಚಾರ್ಯ ಅವರು ಕೆಳಗೆ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿದೇ ಸಣ್ಣ ಪುಟ್ಟ ಗಾಯಗೊಂಡು ಅಪಾಯದಿಂದ ಪಾರಾಗಿದ್ದಾರೆ.
https://www.youtube.com/watch?v=Bf4nYpwylFQ