ಬಿಜೆಪಿಯಿಂದ ನನ್ನ ಸ್ಪರ್ಧೆ, ಬೇರೆಯವರದ್ದು ಗೊತ್ತಿಲ್ಲ: ರಮೇಶ್ ಜಾರಕಿಹೊಳಿ

Public TV
1 Min Read
ramesh

-ನಾನು ಅನರ್ಹ ಶಾಸಕರ ನಾಯಕನಲ್ಲ

ನವದೆಹಲಿ: ನಾನು ಮಾತ್ರ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತೇನೆ. ಬೇರೆಯವರ ವಿಚಾರ ನನಗೆ ಗೊತ್ತಿಲ್ಲ. ನಾನು ರಾಜೀನಾಮೆ ನೀಡಿರುವ ಶಾಸಕರ ಗುಂಪಿನ ನಾಯಕನೂ ಅಲ್ಲ ಎಂದು ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

Ramesh Jarkiholi

ನಮ್ಮ ರಾಜೀನಾಮೆ ಸ್ಪೀಕರ್ ಅಂಗೀಕರಿಸಬೇಕಿತ್ತು ಎಂದು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ. ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸುತ್ತೇನೆ. ಗೋಕಾಕ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪಡೆದು ನಾನು ಸ್ಪರ್ಧೆ ಮಾಡಲಿದ್ದೇನೆ. ಬೇರೆ ಶಾಸಕರ ವಿಚಾರಕ್ಕೆ ನಾನು ಪ್ರತಿಕ್ರಿಯಿಸಲ್ಲ ಎಂದು ರಮೇಶ್ ಜಾರಕಿಹೊಳಿ ತಿಳಿಸಿದರು. ಇದನ್ನೂ ಓದಿ: ಗೆದ್ದ ಸ್ಪೀಕರ್, ಗೆದ್ದ ಅನರ್ಹರು – ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅನುಮತಿ

ಸುಪ್ರೀಂಕೋರ್ಟ್ ತೀರ್ಪು ನಮ್ಮ ಪರವಾಗಿ ಬಂದಿದ್ದರಿಂದ ಕ್ಷೇತ್ರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಚುನಾವಣೆಯಲ್ಲಿ ಗೆಲುವು ದಾಖಲಿಸಿದಂತೆ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ರಾಜೀನಾಮೆ ನೀಡಿದ ದಿನದಿಂದಲೂ ಕ್ಷೇತ್ರದ ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಪ್ರಚಾರ ನಡೆಸಿದ್ದೇನೆ ಎಂದರು. ಇದನ್ನೂ ಓದಿ: ಎರಡು ದಿನಗಳಲ್ಲಿ ಅನರ್ಹರು ಬಿಜೆಪಿಗೆ ಸೇರ್ಪಡೆ

ಪ್ರಕರಣ ಸುಪ್ರೀಂಕೋರ್ಟ್ ನಲ್ಲಿದ್ದರಿಂದ ಯಾವ ವಿಚಾರವನ್ನು ಬಹಿರಂಗಗೊಳಿಸಿರಲಿಲ್ಲ. ಬಿಜೆಪಿ ಟಿಕೆಟ್ ನಮಗೆ ಸಿಗಲಿದೆ ಎಂಬುವುದು ಮೊದಲೇ ಖಚಿತವಾಗಿತ್ತು. ಇಂದು ಸಂಜೆ ಬೆಂಗಳೂರಿಗೆ ತೆರಳಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿ ಚುನಾವಣೆಗೆ ನಾಮಪತ್ರ ಸಲ್ಲಿಸುತ್ತೇವೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸುಭದ್ರವಾಗಿರಲಿದೆ. ಅವರ ನಾಯಕತ್ವದಲ್ಲಿಯೇ ನಾವು ಮುಂದುವರಿದು ಅಭಿವೃದ್ಧಿ ಕೆಲಸಗಳತ್ತ ಗಮನ ನೀಡುತ್ತೇವೆ. ಮುಂದಿನ ಮೂರು ವರ್ಷ ಯಡಿಯೂರಪ್ಪನವರೇ ಸಿಎಂ ಆಗಿರಲಿದ್ದಾರೆ ಎಂದು ರಮೇಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಭಾಗಶ: ತೃಪ್ತಿ, ಅನರ್ಹತೆ ಎನ್ನುವುದೇ ಒಂದು ಕಳಂಕ – ರಮೇಶ್ ಕುಮಾರ್

Share This Article
Leave a Comment

Leave a Reply

Your email address will not be published. Required fields are marked *