ಬೆಳಗಾವಿ: ಕುಂದಾ ನಗರಿಯ ಗೋಕಾಕ್ ಉಪ ಸಮರ ಕಾವೇರಿದೆ. ಬಿಜೆಪಿ ಸೇರಿರುವ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಇವತ್ತು ಶಕ್ತಿ ಪ್ರದರ್ಶನಕ್ಕೆ ಸಜ್ಜಾಗಿದ್ದಾರೆ. ಆದರೆ ಕಾಂಗ್ರೆಸ್‍ನಲ್ಲಿ ಗೊಂದಲ ಮುಂದುವರಿದಿದೆ. ರಮೇಶ್ ವಿರುದ್ಧ ಅಖಾಡ ಸಿದ್ಧಗೊಳಿಸಿಕೊಂಡಿರುವ ಲಖನ್ ಮತ್ತು ಕಾಂಗ್ರೆಸ್ ಟಿಕೆಟ್‍ಗಾಗಿ ಕಾದಿರೋ ಬಿಜೆಪಿಯ ಅಶೋಕ್ ಪೂಜಾರಿಗೆ ಇಲ್ಲೂ ಟಿಕೆಟ್ ತಪ್ಪಿದ ಟೆನ್ಷನ್. ಹಾಗಾಗಿ ಇಬ್ಬರು ನಾಯಕರು ಸಭೆಗಳನ್ನು ನಡೆಸುತ್ತಿದ್ದಾರೆ.
ಇಂದು ಗೋಕಾಕ್‍ನ ಕೇಸರಿ ಕಾರ್ಯಕರ್ತರು ರಮೇಶ್ ಜಾರಕಿಹೊಳಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಜ್ಜಾಗಿದ್ದಾರೆ. ರಮೇಶ್ ಜಾರಕಿಹೊಳಿ ಅವರ ಮನೆ ಮುಂಭಾಗ ಮೈದಾನದಲ್ಲಿ ಸಂಕಲ್ಪ ಸಮಾವೇಶ ಆಯೋಜಿಸಿದ್ದಾರೆ. ಇದಕ್ಕಾಗಿ ಎಲ್ಲಾ ಗ್ರಾಮದ ಪಂಚಾಯಿತಿ ಸದಸ್ಯರು ತಲಾ 10ರಿಂದ 15 ಸಾವಿರ ಕಾರ್ಯಕರ್ತರನ್ನು ಸೇರಿಸುವ ಹೊಣೆ ಒಪ್ಪಿಸಿದ್ದಾರೆ.
ಬಿಜೆಪಿಯಲ್ಲಿ ಅಭ್ಯರ್ಥಿ ಘೋಷಣೆಯಾದ್ರೆ, ಕಾಂಗ್ರೆಸ್‍ನಲ್ಲಿ ಇನ್ನೂ ಟಿಕೆಟ್ ಗೊಂದಲ ಮಾತ್ರ ಬಗೆ ಹರಿಯುತ್ತಿಲ್ಲ. ಅಶೋಕ್ ಪೂಜಾರಿಗೆ ಟಿಕೆಟ್ ಕೈತಪ್ಪಿದ್ದು ಈ ಕಾರಣಕ್ಕಾಗಿ ದಿಢೀರನೇ ಶನಿವಾರ ಕಾರ್ಯಕರ್ತರ ಸಭೆ ಕರೆದಿದ್ದಾರೆ.
ಅಶೋಕ್ ಪೂಜಾರಿಗೆ ಟಿಕೆಟ್ ಕೊಡದಂತೆ ಈಗಾಗಲೇ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ವರಿಷ್ಠರಿಗೆ ತಾಕೀತು ಮಾಡಿದ್ದಾರೆ ಎನ್ನಲಾಗಿದೆ,, ಲಖನ್ ಜಾರಕಿಹೊಳಿಗೆ ಟಿಕೆಟ್ ಕೊಡೋದು ಬೇಡ ಡಿಕೆಶಿ-ಲಕ್ಷ್ಮಿ ಹೆಬ್ಬಾಳ್ಕರ್ ಅಂಡ್ ಟೀಮ್ ವಿರೋಧ ಮಾಡುತ್ತಿದೆದೆ. ಸಿದ್ದರಾಮಯ್ಯರನ್ನು ಭೇಟಿಯಾಗಿರೋ ಸತೀಶ್ ಸಹೋದರ ಲಖನ್‍ಗೆ ಟಿಕೆಟ್ ಕನ್ಫರ್ಮ್ ಮಾಡಿಸಿದ್ದಾರೆ ಎಂದು ತಿಳಿದು ಬಂದಿದೆ.