ಬೆಂಗಳೂರು: ಸ್ಯಾಂಡಲ್‍ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಟೀಸರ್ ಮೂಲಕ ತಮ್ಮ ಮಗನ ಹೆಸರನ್ನು ರಿವೀಲ್ ಮಾಡಿದ್ದಾರೆ.
ರಿಷಬ್ ತಮ್ಮ ಮಗನ ವಿಡಿಯೋ ಮಾಡುವ ಮೂಲಕ ಮನೆಯ ಹೀರೋನನ್ನು ಪರಿಚಯಿಸಿದ್ದಾರೆ. ರಿಷಬ್ ಶೆಟ್ಟಿ ತಮ್ಮ ಮಗನಿಗೆ ರಣ್‍ವಿತ್ ಶೆಟ್ಟಿ ಎಂದು ನಾಮಕರಣ ಮಾಡಿದ್ದಾರೆ. ಮೊದಲಿಗೆ ರಿಷಬ್ ಶೆಟ್ಟಿ ಟೀಸರಿನಲ್ಲಿ ಡಿಟೆಕ್ಟಿವ್ ಆಗಿ ಕಾಣಿಸಿಕೊಂಡಿದ್ದು, ನಂತರ ಮಗನಿಗೆ ಬೇರೆ ಬೇರೆ ಗೆಟಪಿನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ.
ಗುರುವಾರ ಮಕ್ಕಳ ದಿನಾಚರಣೆ ಇದ್ದ ಹಿನ್ನೆಲೆಯಲ್ಲಿ ರಿಷಬ್ ತಮ್ಮ ಟ್ವಿಟ್ಟರಿನಲ್ಲಿ ಈ ಟೀಸರ್ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ, “ನಮ್ಮನೆ ಮುದ್ದು ಮಗುವನ್ನು ನಿಮಗೆ ಪರಿಚಯ ಮಾಡಿಕೊಡುತ್ತಿದ್ದೀವಿ” ಎಂದು ಬರೆದು ಟ್ವೀಟ್ ಮಾಡಿದ್ದಾರೆ.
ಏಪ್ರಿಲ್ 7ರಂದು ರಿಷಬ್ ಅವರ ಪತ್ನಿ ಪ್ರಗತಿ ಶೆಟ್ಟಿ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಬಗ್ಗೆ ಸ್ವತಃ ರಿಷಬ್ ಶೆಟ್ಟಿ ತಮ್ಮ ಟ್ವಿಟ್ಟರಿನಲ್ಲಿ, “Yes?? it’s a Hero” ಎಂದು ಬರೆದ ಹುಡುಗನ ಎಮೋಜಿ ಹಾಕಿದ್ದರು. ಜೊತೆಗೆ ಆಸ್ಪತ್ರೆಯ ಬೆಡ್ ಮೇಲಿರುವ ಪತ್ನಿಯ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದರು.
ರಿಷಬ್ ಶೆಟ್ಟಿ ಅವರು ಫ್ರೆಬವರಿ 9 ರಂದು 2017 ರಲ್ಲಿ ಮೂಲತಃ ಶಿವಮೊಗ್ಗದ ರಿಪ್ಪನ್ ಪೇಟೆಯ ಪ್ರಗತಿ ಅವರನ್ನು ಮದುವೆಯಾಗಿದ್ದರು.
ನಮ್ಮನೆ ಮುದ್ದು ಮಗುವನ್ನ ನಿಮಗೆ ಪರಿಚಯ ಮಾಡಿಕೊಡ್ತಿದೀವಿ.
ಮರಿ ಡಿಟೆಕ್ಟೀವ್ ಕಡೆಯಿಂದ ಎಲ್ರಿಗೂ ಹ್ಯಾಪಿ ಮಕ್ಕಳ ದಿನಾಚರಣೆ..! ????
Seeking your blessings & wishes we introduce our bundle of joy Ranvit Shettyhttps://t.co/UJlGKtid1p
— Rishab Shetty (@shetty_rishab) November 14, 2019