ಚಿಕ್ಕಮಗಳೂರು: ಮೂರು ವರ್ಷದ ಮಗು ಮೂತ್ರ ಮಾಡಿದ್ದಕ್ಕೆ ಅಂಗನವಾಡಿ ಶಿಕ್ಷಕಿ ಹಾಗೂ ಆಯಾ ಮಗುವಿನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಕೆರೆಮಕ್ಕಿ ಗ್ರಾಮದಲ್ಲಿ ನಡೆದಿದೆ.
ಅಂಗನವಾಡಿಯಲ್ಲಿ ಮಗು ಚಡ್ಡಿಯಲ್ಲಿ ಮೂತ್ರ ವಿಸರ್ಜನೆ ಮಾಡಿದೆ ಎಂಬ ಕಾರಣಕ್ಕೆ ಕೋಪಗೊಂಡ ಆಯಾ ಮಂಜುಳಾ ಮತ್ತು ಶಿಕ್ಷಕಿ ಮಾಲ ಮಗುವಿನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ. ಪರಿಣಾಮ ಮಗುವಿಗೆ ಗಂಭೀರ ಗಾಯವಾಗಿದ್ದು, ಮಗುವನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಹಲ್ಲೆಯಿಂದ ಮಗುವಿನ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಮೂರು ಹೊಲಿಗೆ ಹಾಕಲಾಗಿದೆ. ಈ ಸಂಬಂಧ ಶಿಕ್ಷಕಿ ಮಾಲ ಹಾಗೂ ಆಯಾ ಮಂಜುಳಾ ವಿರುದ್ಧ ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಕ್ಷಕಿ ಹಾಗೂ ಸಹಾಯಕಿ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ.