ಮಡಿಕೇರಿ: ಪೌರತ್ವ ಕಾಯ್ದೆಯನ್ನು ವಿರೋಧಿಸಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಗೋಲಿಬಾರ್ ನಡೆಸಿ ಇಬ್ಬರು ಅಮಾಯಕರನ್ನು ಬಲಿ ತೆಗೆದುಕೊಂಡಿರುವ ಘಟನೆಗೆ ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಖಂಡನೆ ವ್ಯಾಕ್ತವಾಗುತ್ತಿದೆ.
ಪೋಲಿಸರ ಕ್ರಮ ಖಂಡಿಸಿ ಕೊಡಗು ಜಿಲ್ಲೆಯ ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕಿನ ಸಿದ್ದಾಪುರ, ನೆಲ್ಯಹುದಿಕೇರಿ ಸೇರಿದಂತೆ ಹಲವೆಡೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡುವ ಮೂಲಕ ಪೊಲೀಸರ ನಡೆಯನ್ನ ಖಂಡಿಸಿದ್ದಾರೆ.
ಅಲ್ಲದೇ ಸೂಕ್ಮ ಪ್ರದೇಶಗಳಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಹೆಚ್ಚು ಪೊಲೀಸರನ್ನು ನೀಯೋಜನೆ ಮಾಡಲಾಗಿದೆ. ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ವೃತದ ಬಳಿಯು ಕೆಎಸ್ ಆರ್ ಪಿ ತುಕಡಿಯನ್ನು ನೀಯೋಜನೆ ಮಾಡಲಾಗಿದ್ದು, ಮಡಿಕೇರಿ ನಗರದಲ್ಲಿ ಎಂದಿನಂತೆ ಜನ ಸಾಮಾನ್ಯರು ಓಡಾಡುತ್ತಿದ್ದಾರೆ.
ಕೊಡಗು ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.