ಚಿಕ್ಕೋಡಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮೀತ್ ಶಾ ವಿರುದ್ಧ ಅವಹೇಳನಕಾರಿ ಟಿಕ್ ಟಾಕ್ ವಿಡಿಯೋ ಮಾಡಿದ್ದ ಯುವಕನನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿವಾಸಿ ಅಮನ ವಾಹಿದ ಅವಟೆ ಬಂಧಿತ ಯುವಕ. ಬಂಧಿತ ಆರೋಪಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಅವಹೇಳನಕಾರಿ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದ.
ಆರೋಪಿಯ ಸಾಮಾಜಿಕ ಜಾಲತಾಣಗಳಲ್ಲಿ ಮಾಡುತ್ತಿದ್ದ ಪೋಸ್ಟ್ ಗಳ ಮೇಲೆ ನಿಗಾ ಇಟ್ಟಿದ್ದ ಸಂಕೇಶ್ವರ ಪೊಲೀಸರು ಯುವಕನ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಬಂಧಿಸಿದ್ದಾರೆ. ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 153, 505 (1)ರ (ಸಮಾಜದ ಸಾಮರಸ್ಯ ಹಾಳು ಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.