ಮಂಗ್ಳೂರು ಗೋಲಿಬಾರ್‌ನಲ್ಲಿ ಮೃತಪಟ್ಟವರಿಗೆ ಸರ್ಕಾರದಿಂದ ಅವಮಾನ: ರಿಜ್ವಾನ್ ಅರ್ಷದ್

Public TV
1 Min Read
Rizwan Arshad

ಮಂಗಳೂರು: ಪೌರತ್ವ ಮಸೂದೆಯ ವಿರುದ್ಧ ಮಂಗಳೂರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಗೋಲಿಬಾರ್‌ಗೆ ಬಲಿಯಾದ ಅಬ್ದುಲ್ ಜಲೀಲ್ ಮತ್ತು ನೌಶೀನ್ ಮನೆಗೆ ಬೆಂಗಳೂರಿನ ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ಇಂದು ಭೇಟಿ ನೀಡಿದರು.

ಶಾಸಕ ರಿಜ್ವಾನ್ ಅವರು ಮೃತ ಯುವಕರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಈ ವೇಳೆ ಎರಡೂ ಕುಟುಂಬದವರಿಗೆ ತಲಾ 2.5 ಲಕ್ಷ ರೂಪಾಯಿ ಪರಿಹಾರ ನೀಡಿದರು. ಬಳಿಕ ಮಾತನಾಡಿದ ಅವರು, ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಿಸಿ ನಂತರ ವಾಪಸ್ ಪಡೆದಿದ್ದು ಸರಿಯಾದ ಕ್ರಮವಲ್ಲ. ಸರ್ಕಾರದ ಈ ನಡೆ ಮೃತಪಟ್ಟವರಿಗೆ ಅವಮಾನ ಮಾಡಿದಂತೆ ಎಂದು ಹೇಳಿದರು. 

MNG Protest death

ರಾಜ್ಯ ಸರ್ಕಾರ ಈಗ ನಡೆಸುತ್ತಿರುವ ಸಿಐಡಿ ತನಿಖೆಯಿಂದ ಮೃತಪಟ್ಟವರ ಕುಟುಂಬಕ್ಕೆ ಖಂಡಿತವಾಗಿಯೂ ನ್ಯಾಯ ಸಿಗುವುದಿಲ್ಲ. ಹೀಗಾಗಿ ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಶಾಸಕರು ಸರ್ಕಾರವನ್ನು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಹರೀಶ್ ಕುಮಾರ್, ಐವನ್ ಡಿಸೋಜ, ಮಿಥುನ್ ರೈ ಮತ್ತಿತರರು ಜೊತೆಗಿದ್ದರು.

Share This Article
Leave a Comment

Leave a Reply

Your email address will not be published. Required fields are marked *