ಟಗರು ಖ್ಯಾತಿಯ ಡಾಲಿ ಧನಂಜಯ್ ಅಭಿನಯದ ‘ಪಾಪ್ ಕಾರ್ನ್ ಮಂಕಿ ಟೈಗರ್’ ಚಿತ್ರದ ಮಾಸ್ ಟೀಸರ್ ರಿಲೀಸ್ ಆಗಿದೆ. ಸ್ಯಾಂಡಲ್‍ವುಡ್ ನಲ್ಲಿ ಬಾರಿ ನಿರೀಕ್ಷೆಯನ್ನು ಹುಟ್ಟು ಹಾಕಿರುವ ಸಿನಿಮಾಗಳಲ್ಲಿ ಈ ಚಿತ್ರವೂ ಕೂಡ ಒಂದು. ದುನಿಯಾ ಸೂರಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರದಲ್ಲಿ ಡಾಲಿ ಧನಂಜಯ್ ನಾನಾ ಅವತಾರಗಳಲ್ಲಿ ಮಾಸ್ ಲುಕ್ ನಲ್ಲಿ ಕಾಣಸಿಕೊಂಡಿದ್ದಾರೆ. ಟೀಸರ್ ಸಖತ್ ಥ್ರಿಲ್ಲ್ ಆಗಿದ್ದು, ಸುಕ್ಕಾ ಸೂರಿ ಮತ್ತೊಮ್ಮೆ ಈ ಚಿತ್ರದ ಮೂಲಕ ಸಿನಿ ಪ್ರೇಕ್ಷಕರಿಗೆ ಭರ್ಜರಿ ಬೋಜನ ನೀಡೋದು ಪಕ್ಕಾ ಅನ್ನಿಸ್ತಾಯಿದೆ.
ಪಿಆರ್ ಕೆ ಯುಟ್ಯೂಬ್ ಚಾನೆಲ್ ನಲ್ಲಿ ಚಿತ್ರದ ಟೀಸರ್ ರಿಲೀಸ್ ಆಗಿದ್ದು, ಕೆಲವೇ ಗಂಟೆಗಳಲ್ಲಿ ಲಕ್ಕಕ್ಕೂ ಹೆಚ್ಚು ವೀವ್ಸ್ ಪಡೆದುಕೊಂಡಿದ್ದು ಮೆಚ್ಚುಗೆಗೆ ಪಾತ್ರವಾಗಿದೆ. ಮಾಸ್ ಚಿತ್ರಗಳಿಗೆ ಹೇಳಿ ಮಾಡಿಸಿದ ಸಂಗೀತ ನಿರ್ದೇಶಕ ಚರಣ್ ರಾಜ್ ಬ್ಯಾಗ್ರೌಂಡ್ ಸ್ಕೋರ್ ಮತ್ತೊಮ್ಮೆ ಎಲ್ಲರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಟಗರು ಚಿತ್ರದಲ್ಲಿ ಸೂರಿ ಚರಣ್ ರಾಜ್ ಕಾಂಬಿನೇಷನ್ ಸಖತ್ ಸೌಂಡ್ ಮಾಡಿತ್ತು. ಈ ಚಿತ್ರದಲ್ಲೂ ಒಂದಾಗಿರುವ ಇವ್ರ ಕಾಂಬಿನೇಷನ್ ಮತ್ತೊಂದು ಸೂಪರ್ ಹಿಟ್ ಆಲ್ಬಂ ನೀಡೋದ್ರಲ್ಲಿ ಅನುಮಾನವೇ ಇಲ್ಲ.
ಸುದೀರ್.ಕೆ.ಎಂ ಪಾಪ್ ಕಾರ್ನ್ ಮಂಕಿ ಟೈಗರ್ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಶೇಖರ್ ಕ್ಯಾಮೆರಾ ಕೈ ಚಳಕ ಚಿತ್ರಕ್ಕಿದೆ. ಧನಂಜಯ್ ಗೆ ಜೋಡಿಯಾಗಿ ನಿವೇದಿತಾ ಸ್ಕ್ರೀನ್ ಶೇರ್ ಮಾಡಿದ್ದು, ಅಮೃತ ಅಯ್ಯಂಗಾರ್, ಸುಧಿ, ಸಪ್ತಮಿ ಚಿತ್ರದ ತಾರಾ ಬಳಗದಲ್ಲಿದ್ದಾರೆ.
ಪೋಸ್ಟರ್ ಹಾಗೂ ಟೈಟಲ್ ಮೂಲಕ ಕ್ಯೂರಿಯಾಸಿಟಿ ಬಿಲ್ಡ್ ಮಾಡಿದ್ದ ಪಾಪ್ ಕಾರ್ನ್ ಮಂಕಿ ಟೈಗರ್ ಟೀಸರ್ ಮೂಲಕ ಡಾಲಿ ಹಾಗೂ ನಿರ್ದೇಶಕ ಸೂರಿ ಅಭಿಮಾನಿಗಳಲ್ಲಿ ಸಂತಸ ಹೆಚ್ಚು ಮಾಡಿದೆ. ಪೋಸ್ಟ್ ಪ್ರೋಡಕ್ಷನ್ ಕೆಲಸದಲ್ಲಿ ಬ್ಯುಸಿ ಇರೋ ಚಿತ್ರತಂಡ ಸದ್ಯದಲ್ಲೇ ಚಿತ್ರಮಂದಿರಕ್ಕೆ ಬರಲಿದೆ.