ಉಡುಪಿ: ನಾಳೆ ಭಾರತ್ ಬಂದ್‍ಗೆ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದು, ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಕ್ರಮ ಕೈಗೊಂಡಿದ್ದೇವೆ. ಎಲ್ಲಾ ಬಂದೋಬಸ್ತ್ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದರು.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಐಟಿಯು ಅಧ್ಯಕ್ಷ ಅನಂತ್ ಸುಬ್ಬರಾವ್ ಮುಷ್ಕರ ಮಾಡೋದಾಗಿ ಹೇಳಿದ್ದಾರೆ. ಪ್ರತಿಭಟನೆಗೆ ಅವಕಾಶ ಕಲ್ಪಿಸಲಾಗಿದೆ, ಮೆರವಣಿಗೆಗೆ ಅವಕಾಶ ಇಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ದಿನನಿತ್ಯದ ಚಟುವಟಿಕೆಗೆ ಸಮಸ್ಯೆ ಇಲ್ಲ ಎಂದು ತಿಳಿಸಿದರು.
ಬಂದ್ ಇರೋದಿಲ್ಲ, ಅಗತ್ಯ ವಸ್ತುಗಳು ಸಿಗುತ್ತವೆ. ಶಾಲಾ ಕಾಲೇಜುಗಳು ತೆರೆದಿರುತ್ತದೆ. ರಾಜ್ಯದ ಜನ ಗಾಬರಿಯಾಗುವುದು ಬೇಡ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭೆ ಮಾಡಿದ್ದೇವೆ. ಪ್ರತಿಭಟನೆಗೆ ಅವಕಾಶ ಕೊಡಲಾಗಿದೆ. ಮೆರವಣಿಗೆ, ಬಂದ್ ಮಾಡಿಸಲು ಅವಕಾಶ ಇಲ್ಲ ಎಂದು ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.