ಫ್ರೀ ಕಾಶ್ಮೀರ ಪೋಸ್ಟರ್ – ವಿಡಿಯೋ ಮೂಲಕ ಕ್ಷಮೆಯಾಚಿಸಿ ಸ್ಪಷ್ಟನೆ ನೀಡಿದ ಯುವತಿ

Public TV
1 Min Read
collage Mysuru university

ಮೈಸೂರು: ಮೈಸೂರು ವಿವಿಯ ಕ್ಯಾಂಪಸ್‍ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಫ್ರೀ ಕಾಶ್ಮೀರ ಪೋಸ್ಟರ್ ಹಿಡಿದಿದ್ದ ಯುವತಿ ನಳಿನಿ ಇವತ್ತು ಪೋಷಕರ ಸಮೇತ ಪೊಲೀಸರ ಮುಂದೆ ಹಾಜರಾಗಿದ್ದಾರೆ.

ಶುಕ್ರವಾರ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಪಡೆದಿದ್ದ ನಳಿನಿ, ಜಾಮೀನು ಪ್ರತಿಯನ್ನು ಠಾಣೆಗೆ ನೀಡಿ, ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮ್ಮ ಹೇಳಿಕೆ ದಾಖಲಿಸಲು ಜಯಲಕ್ಷೀಪುರಂ ಠಾಣೆಗೆ ಹಾಜರಾದರು. ಜಯಲಕ್ಷೀಪುರಂ ಠಾಣೆಯಲ್ಲಿ ನಳಿನಿ ವಿಚಾರಣೆ ನಡೆಸಿದ ಎಸಿಪಿ ಶಿವಶಂಕರ್, ಹಲವು ಕಾಲ ನಳಿನಿ ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡರು.

Mysuru University Students Protest 2 1

ಮೈಸೂರು ವಿವಿ ಕ್ಯಾಂಪಸ್ ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣ ಸಂಬಂಧ ಪ್ಲೇ ಕಾರ್ಡ್ ಪ್ರದರ್ಶಿಸಿದ್ದ ನಳಿನಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಪತ್ರಿಕಾ ಹೇಳಿಕೆಯಲ್ಲಿ. ನಾನು ಪ್ರತಿಭಟನೆಯಲ್ಲಿ ಸ್ವಯಂಪ್ರೇರಿತವಾಗಿ ಭಾಗವಹಿಸಿದ್ದೆ. ನಾನು ಯಾವುದೇ ಸಂಯೋಜಕರ ಒತ್ತಡಕ್ಕೆ ಮಣಿದು ಅವರ ಪ್ರೇರಣೆಯಿಂದ ಹೋರಾಟಕ್ಕೆ ಬಂದಿರಲಿಲ್ಲ. ನಾನು ಪತ್ರಿಕೋದ್ಯಮದ ವಿದ್ಯಾರ್ಥಿಯಾಗಿದ್ದು, ನನಗೆ ದೇಶದ ಬಗ್ಗೆ ನಮ್ಮ ದೇಶದ ಜನರ ಬಗ್ಗೆ ಅತ್ಯಂತ ಕಾಳಜಿ ಮತ್ತು ಗೌರವವಿರುತ್ತದೆ ಎಂದು ತಿಳಿಸಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕಾಶ್ಮೀರ ಬಿಡುಗಡೆಗೊಳಿಸಿ ಎಂಬುದನ್ನು ನಾನು ಖುದ್ದಾಗಿ ಬರೆದು ಹಿಡಿದುಕೊಂಡಿದ್ದೆ. ಇತರ ರಾಜ್ಯಗಳಲ್ಲಿ ಹೇಗೆ ಜನರು ನಿರ್ಭಯವಾಗಿ ಮತ್ತು ಸ್ವತಂತ್ರವಾಗಿ ಇದ್ದಾರೆ ಅದೇ ರೀತಿ ಜಮ್ಮು-ಕಾಶ್ಮೀರದಲ್ಲಿ ಸಹ ಆಗಬೇಕು. ಈ ಒಂದೇ ಒಂದು ಭಾವನೆಯಿಂದ ಕಾಶ್ಮೀರ ಬಿಡುಗಡೆಗೊಳಿಸಿ ಪೋಸ್ಟರ್ ಅನ್ನು ಹಿಡಿದುಕೊಂಡಿದ್ದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ನಳಿನಿ ಸ್ಪಷ್ಟನೆ ನೀಡಿದ್ದಾರೆ.

Mysuru University Students Protest 3

ಜೊತೆಗೆ ಮೈಸೂರು ವಿವಿ ಕ್ಯಾಂಪಸ್ ನಲ್ಲಿ ನಡೆದ ಪ್ರತಿಭಟನೆಯಲ್ಲಿ ಫ್ರೀ ಕಾಶ್ಮೀರ ನಾಮಫಲಕ ವಿಚಾರ ಸಂಬಂಧ ಪ್ಲೇ ಕಾರ್ಡ್ ಹಿಡಿದಿದ್ದ ನಳಿನಿ, ಮಾಧ್ಯಮಕ್ಕೆ ವಿಡಿಯೋ ಬಿಡುಗಡೆ ಮಾಡಿರುವ ನಳಿನಿ ವಿಡಿಯೋ ಮೂಲಕ ಸಾರ್ವಜನಿಕರು ಪೊಲೀಸರ ಕ್ಷಮೆಯಾಚಿಸಿದ್ದಾರೆ. ಪ್ಲೇ ಕಾರ್ಡ್ ಪ್ರದರ್ಶಿಸಿದ ಉದ್ದೇಶ ಕಾಶ್ಮೀರದಲ್ಲಿ ಇಂಟರ್ನೆಟ್ ಸೇವೆ ಸೇರಿ ರದ್ದಾಗಿರುವ ಸೇವೆಗಳ ಆರಂಭಿಸಿ ಎಂಬುದಾಗಿತ್ತು. ಅದಕ್ಕೆ ಫ್ರೀ ಕಾಶ್ಮೀರ ಎಂದು ಬರೆದುಕೊಂಡಿದ್ದೇ ಅದರಿಂದ ಉಂಟಾದ ಗೊಂದಲಕ್ಕಾಗಿ ಕ್ಷಮೆ ಯಾಚಿಸುತ್ತೇನೆ ಎಂದು ವಿಡಿಯೋದಲ್ಲಿ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *