Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಗತ್ತಿನ ಮೊದಲ ಸಂಸತ್ತು ಅನುಭವ ಮಂಟಪ- ದೆಹಲಿಯ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಸ್ತಬ್ಧಚಿತ್ರ ಪ್ರದರ್ಶನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ಜಗತ್ತಿನ ಮೊದಲ ಸಂಸತ್ತು ಅನುಭವ ಮಂಟಪ- ದೆಹಲಿಯ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಸ್ತಬ್ಧಚಿತ್ರ ಪ್ರದರ್ಶನ

Chitradurga

ಜಗತ್ತಿನ ಮೊದಲ ಸಂಸತ್ತು ಅನುಭವ ಮಂಟಪ- ದೆಹಲಿಯ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಸ್ತಬ್ಧಚಿತ್ರ ಪ್ರದರ್ಶನ

Public TV
Last updated: January 26, 2020 8:17 am
Public TV
Share
2 Min Read
ctd anubhava mantapa
SHARE

ಚಿತ್ರದುರ್ಗ: ಇದುವರೆಗೂ ರಾಷ್ಟ್ರೀಯ ನಾಟಕೋತ್ಸವದ ಮೂಲಕ ಎಲ್ಲರ ಗಮನ ಸೆಳೆದಿದ್ದ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಸಾಣೆಹಳ್ಳಿ ತರಳುಭಾಳು ಶಾಖಾ ಮಠದ ಶಿವಕುಮಾರ ರಂಗಪ್ರಯೋಗ ಶಾಲೆಯ ವಿದ್ಯಾರ್ಥಿಗಳು ಇಂದು ದೆಹಲಿಯ ರಾಜಪಥ್‍ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪರೇಡ್‍ನಲ್ಲಿ ಭಾಗಿಯಾಗಲಿದ್ದಾರೆ.

ಇಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪರೇಡ್‍ನಲ್ಲಿ ಜಗತ್ತಿನ ಮೊದಲ ಸಂಸತ್ ಎನಿಸಿದ್ದ 12 ನೇಶತಮಾನದ ಅನುಭವ ಮಂಟಪ ಸ್ತಬ್ಧ ಚಿತ್ರ ಪ್ರದರ್ಶನಗೊಳ್ಳಲಿದ್ದು, ಸಾಣೆಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳ ನೇತೃತ್ವದಲ್ಲಿ ನಡೆದ ‘ಮತ್ತೆ ಕಲ್ಯಾಣ’ ಕಾರ್ಯಕ್ರಮದಲ್ಲಿ ರಾಜ್ಯಾದ್ಯಂತ ಸಂಚಾರ ಮಾಡಿದ್ದ ಈ ಸ್ತಬ್ಧಚಿತ್ರದ ಪ್ರತಿರೂಪ ಇಂದು ರಾಷ್ಟ್ರ ರಾಜಧಾನಿಯಲ್ಲಿ ಪ್ರದರ್ಶನಗೊಳ್ಳಲಿದೆ.

Anubhava Mantapa

ಸಾಣೇಹಳ್ಳಿಯ ಶ್ರೀ ಶಿವಕುಮಾರ ರಂಗಪ್ರಯೋಗ ಶಾಲೆಯ 28 ಜನ ಕಲಾವಿದರು, ವಿದ್ಯಾರ್ಥಿಗಳು ಹಾಗೂ ಈ ಹಿಂದೆ ಶಾಲೆಯಲ್ಲಿ ತರಬೇತಿ ಪಡೆದವರು ಗಣರಾಜ್ಯೋತ್ಸವದ ಪರೇಡ್‍ನಲ್ಲಿ ಭಾಗವಹಿಸಲಿದ್ದಾರೆ. ಅವರೊಂದಿಗೆ ತಂಡದ ಮುಖ್ಯಸ್ಥರಾಗಿ ರಂಗಶಾಲೆಯ ಪ್ರಾಚಾರ್ಯ ಜಗದೀಶ್ ಆರ್ ನೇತೃತ್ವ ವಹಿಸಿದ್ದಾರೆ. ಸ್ತಬ್ಧಚಿತ್ರ ನಿರ್ಮಾಣ ಖ್ಯಾತ ಕಲಾವಿದರಾದ ಶಶಿದರ ಅಡಪ ಅವರದ್ದಾಗಿದ್ದು, ಈ ಸ್ತಬ್ಧ ಚಿತ್ರದ ಪ್ರಾಯೋಜಕತ್ವವನ್ನು ಕರ್ನಾಟಕ ಸರ್ಕಾರವಹಿಸಿಕೊಂಡಿದೆ.

ಕಳೆದ ಹನ್ನೊಂದು ವರ್ಷಗಳಿಂದ ರಾಜಪಥ್ ಪರೇಡ್‍ನಲ್ಲಿ ಕರ್ನಾಟಕದ ಸ್ತಬ್ಧ ಚಿತ್ರ ಭಾಗಿಯಾಗುತ್ತಿದ್ದು, ಈ ಬಾರಿ ಅನುಭವ ಮಂಟಪ ವಿಷಯ ವಸ್ತುವಿಗೆ ಕೇಂದ್ರ ರಕ್ಷಣಾ ಇಲಾಖೆ ಒಪ್ಪಿಗೆ ಸೂಚಿಸಿತ್ತು. 2020ರ ಗಣರಾಜೋತ್ಸವ ಹಿನ್ನೆಲೆ ಲಕ್ಕುಂಡಿ ದೇವಾಲಯ, ಹಾಲಕ್ಕಿ ಒಕ್ಕಲಿಗರು, ಮೆಕ್ಕಿಕಟ್ಟಿ, ಅನುಭವ ಮಂಟಪದ ವಿಷಯ ವಸ್ತುವನ್ನು ಆಯ್ಕೆ ಸಮಿತಿಗೆ ನೀಡಲಾಗಿತ್ತು. ಈ ಪೈಕಿ 12ನೇ ಶತಮಾನದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಕ್ರಾಂತಿ ಸೃಷ್ಟಿಸಿದ್ದ ಅನುಭವ ಮಂಟಪ ಸ್ತಬ್ಧ ಚಿತ್ರ ಪ್ರದರ್ಶನಕ್ಕೆ ರಕ್ಷಣಾ ಇಲಾಖೆ ಒಪ್ಪಿಗೆ ಸೂಚಿಸಿತ್ತು.

Anubhava Mantapa B

ಪ್ರದರ್ಶನಗೊಳ್ಳುತ್ತಿರುವ ಅನುಭವ ಮಂಟಪ ಸ್ತಬ್ಧ ಚಿತ್ರ ಕಾಯಕವೇ ಕೈಲಾಸ, ದೇಹವೇ ದೇಗುಲ, ದಯವೇ ಧರ್ಮದ ಮೂಲವಯ್ಯ ಎನ್ನುವ ಮೂರು ಅಂಶಗಳನ್ನು ಒಳಗೊಂಡಿದೆ. ಸ್ತಬ್ಧ ಚಿತ್ರದ ಮುಂಭಾಗದಲ್ಲಿ ಬಸವಣ್ಣನವರ ಪ್ರತಿಕೃತಿ ನಿರ್ಮಿಸಲಾಗಿದೆ. ಹಿಂಭಾಗದಲ್ಲಿ ಅನುಭವ ಮಂಟಪ, ಅದರೊಳಗೆ ಅಕ್ಕಮಹಾದೇವಿ, ಅಲ್ಲಮ ಪ್ರಭು ಸೇರಿ ಕೆಲವು ಪಾತ್ರಗಳನ್ನ ಕಲಾವಿದರು ಅಭಿನಯಿಸಲಿದ್ದಾರೆ.

ಕೆಳಭಾಗದಲ್ಲಿ ಅಕ್ಕನಾಗಮ್ಮ, ಶರಣೆ ಸತ್ಯಕ್ಕ, ಅಂಬಿಗರ ಚೌಡಯ್ಯ, ಮೊಳಿಗೆ ಮಾರಯ್ಯ, ಕಲ್ಯಾಣಮ್ಮ, ಹರಳಯ್ಯ, ಕುಂಬಾರ ಗುಂಡಣ್ಣ ಸಿದ್ಧಾರಾಮೇಶ್ವರ, ಬಾಚಿ ಕಾಯಕದ ಬಸಪ್ಪ ಅವರ ಪ್ರತಿಕೃತಿಗಳನ್ನು ಕಾಣಬಹುದು. ಕಲಾ ನಿರ್ದೇಶಕ ಶಶಿಧರ್ ಹಡಪದ ಅವರ ನೇತೃತ್ವದಲ್ಲಿ 20 ಮಂದಿ ವಿನ್ಯಾಸರು ಸುಮಾರು 45 ದಿನಗಳ ಕಾಲದಲ್ಲಿ ಈ ಸ್ತಬ್ಧ ಚಿತ್ರ ತಯಾರಿಸಿದ್ದಾರೆ. ರಾಜಪಥ್ ಪರೇಡ್‍ನಲ್ಲಿ ಕರ್ನಾಟಕವು ಈವರೆಗೂ ಒಮ್ಮೆ ಪ್ರಥಮ, ಎರಡು ಬಾರಿ ದ್ವಿತೀಯ ಹಾಗೂ ಎರಡು ತೃತೀಯ ಬಹುಮಾನ ಗೆದ್ದುಕೊಂಡಿದೆ.

TAGGED:Anubhava MantapaChitradurgaPublic TVRajpathRepublic day Paradeshivakumara rangaprayoga schoolಅನುಭವ ಮಂಟಪಗಣರಾಜ್ಯೋತ್ಸವದ ಪರೇಡ್ಚಿತ್ರದುರ್ಗಪಬ್ಲಿಕ್ ಟಿವಿರಾಜಪಥ್
Share This Article
Facebook Whatsapp Whatsapp Telegram

Cinema news

Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories

You Might Also Like

kea
Bengaluru City

CET-2026ರ ಪ್ರವೇಶ ಪತ್ರ ಬಿಡುಗಡೆ: ಕೆಇಎ

Public TV
By Public TV
36 seconds ago
Ramesh Kumar
Districts

63 ಎಕ್ರೆ ಅರಣ್ಯ ಭೂಮಿ ಒತ್ತುವರಿ ಪ್ರಕರಣ – ಮಾಜಿ ಸ್ಪೀಕರ್ ರಮೇಶ್ ಕುಮಾರ್‌ಗೆ ಹಿನ್ನಡೆ

Public TV
By Public TV
7 minutes ago
CRIME
Districts

ಸರ್ಕಾರಿ ಕಚೇರಿಯಲ್ಲಿ ದಲಿತ ಮಹಿಳೆಯ ವಿವಸ್ತ್ರಗೊಳಿಸಿ ವಿಕೃತಿ – 8 ಗಂಟೆ ನಿಲ್ಲಿಸಿದ್ದ ಅಧಿಕಾರಿಗಳ ವಿರುದ್ಧ ದೂರು

Public TV
By Public TV
26 minutes ago
ಸಾಂದರ್ಭಿಕ ಚಿತ್ರ
Bagalkot

ಇನ್ಮುಂದೆ ಬುಕ್‌ ಮಾಡಿದ ದಿನವೇ ಗೃಹ ಬಳಕೆ ಸಿಲಿಂಡರ್ ವಿತರಣೆ – ಗ್ಯಾಸ್ ಏಜೆನ್ಸಿಗಳಿಗೆ ಸೂಚನೆ

Public TV
By Public TV
40 minutes ago
MQ 4C Triton
Latest

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ 1,859 ಕೋಟಿ ಮೌಲ್ಯದ MQ-4C ಟ್ರೈಟಾನ್ ಡ್ರೋನ್ ನಾಪತ್ತೆ

Public TV
By Public TV
1 hour ago
kalaburagi train
Kalaburagi

ಪಂಢರಪುರ-ತಿರುಪತಿ, ಬೆಂಗಳೂರು ಕಂಟೋನ್ಮೆಂಟ್-ಕಲಬುರಗಿ, SMVT ಬೆಂಗಳೂರು-ಬೀದರ್ ವಿಶೇಷ ರೈಲುಗಳ ಸೇವೆ ಮುಂದುವರಿಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?