ಹೆಚ್‍ಡಿಕೆ ಪರ ಬ್ಯಾಟ್ ಬೀಸಿ ಬಿಜೆಪಿ ವಿರುದ್ಧ ಕಿಡಿ – ನ್ಯಾಯಕ್ಕೆ ಸಂದ ಜಯ ಎಂದ ಸಿದ್ದರಾಮಯ್ಯ

Public TV
1 Min Read
images 3

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರು ಪರವಾಗಿ ಟ್ವೀಟ್ ಮಾಡುವ ಮೂಲಕ ಅಡಳಿತ ಪಕ್ಷ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ 14 ಗಣ್ಯರಿಗೆ ಕೊಲೆ ಬೆದರಿಕೆ ಪತ್ರ ಬರೆದಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಇದರ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರನ್ನು ಶಿಕ್ಷಿಸಬೇಕು. ಭಯದ ವಾತಾವರಣ ಸೃಷ್ಟಿಸಿ ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ದಮನಗೊಳಿಸುವ ಯಾವುದೇ ಶಕ್ತಿಗಳಾದರೂ ಸರಿ ಅಂಥವರಿಗೆ ತಕ್ಕ ಶಿಕ್ಷೆಯಾಗಲೇಬೇಕು ಎಂದು ಟ್ವೀಟ್ ಮಾಡಿ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಫ್ರೀ ಕಾಶ್ಮೀರ ಫಲಕ ಹಿಡಿದಿದ್ದ ಯುವತಿಯ ಪರ ನಾನು ವಕಾಲತ್ತು ವಹಿಸುತ್ತಿಲ್ಲ. ನನ್ನ ಲೈಸೆನ್ಸ್ ಅನ್ನು ಹಿಂದೆ ಅಮಾನತು ಮಾಡಿದ್ದರು. ಅಮಾನತು ತೆಗೆಯುವಂತೆ ಅರ್ಜಿ ಸಲ್ಲಿಸಿದ್ದೇನೆ. ಯುವತಿಯ ಪರ ಯಾರೇ ವಕಾಲತ್ತು ವಹಿಸಿದರೂ ಅವರಿಗೆ ಬೆಂಬಲ ನೀಡುತ್ತೇನೆ. ಈ ಬಗ್ಗೆ ಗೊಂದಲ ಬೇಡ. ಬಿಜೆಪಿಯವರು ಸಂವಿಧಾನ ವಿರೋಧಿಗಳು. ಸ್ವಾತಂತ್ರ್ಯ ನಂತರ ಸಂಸತ್‍ನಲ್ಲಿ ಸಂವಿಧಾನ ಮಂಡನೆಯಾದಾಗ ಆಗಿನ ಜನಸಂಘ ಅದನ್ನು ವಿರೋಧಿಸಿತ್ತು. ಆರ್‍ಎಸ್‍ಎಸ್ ಮತ್ತು ಜನಸಂಘಗಳು ಸಂವಿಧಾನದ ಮೇಲೆ ನಂಬಿಕೆಯಿಟ್ಟವರಲ್ಲ. ಅವರಿಗೆ ಮನುವಾದ, ಮನುಸ್ಮೃತಿ ಮೇಲಷ್ಟೇ ನಂಬಿಕೆ ಎಂದು ಸರಣಿ ಟ್ವೀಟ್ ಮಾಡಿ ಬಿಜೆಪಿ ಅವರ ಮೇಲೆ ಕಿಡಿಕಾರಿದ್ದಾರೆ.

ಈ ವೇಳೆ ಅನರ್ಹ ಶಾಸಕರ ಬಗ್ಗೆಯೂ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಪಕ್ಷಕ್ಕೆ ಹಾಗೂ ಜನರ ನಂಬಿಕೆಗೆ ದ್ರೋಹ ಮಾಡಿ, ಬಿಜೆಪಿ ಸೇರಿ ಚುನಾವಣೆಯಲ್ಲಿ ಸೋತು, ಅತ್ತ ಸಚಿವ ಸ್ಥಾನವೂ ಸಿಗದೆ, ಇತ್ತ ಶಾಸಕರೂ ಅಲ್ಲದೆ ಅತಂತ್ರ ಸ್ಥಿತಿಯಲ್ಲಿರುವವರಿಗೆ ತಕ್ಕ ಶಿಕ್ಷೆಯಾಗುತ್ತಿದೆ. ಇದು ನ್ಯಾಯಕ್ಕೆ ಸಂದ ಜಯ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *