– ತಪ್ಪಿದ ಭಾರೀ ಅನಾಹುತ, ನಾಲ್ವರಿಗೆ ಗಾಯ
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವಕನೊಬ್ಬ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ.
ರಿಂಗ್ ರಸ್ತೆಯ ಲಗ್ಗೆರೆ ಬ್ರಿಡ್ಜ್ ಬಳಿ ನವೀನ್ (23) ಎಂಬ ಯುವಕನಿಂದ ಅಡ್ಡಾದಿಡ್ಡಿ ಕಾರು ಚಾಲನೆ ಮಾಡಿದ್ದಾನೆ. ನವೀನ್ ತನ್ನ ಸ್ನೇಹಿತರ ಹಳೆಯ ಕಾರು ಚಾಲನೆ ಮಾಡಿಕೊಂಡು ಬರುತ್ತಿದ್ದಾಗ ಘಟನೆ ನಡೆದಿದೆ.
ನವೀನ್ ಮೊದಲಿಗೆ ಒಂದು ಸ್ಕೂಟರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ. ಬಳಿಕ ಮೂರು ಜನರಿದ್ದ ಬೈಕ್‍ಗೆ ಗುದ್ದಿದ್ದಾನೆ. ಅಷ್ಟೇ ಅಲ್ಲದೆ ಪಾದಚಾರಿ ಮಾರ್ಗದಲ್ಲಿ ನುಗ್ಗಿಸಿ ಮತ್ತೊಬ್ಬರಿಗೆ ಗುದ್ದಿದ್ದಾನೆ. ಘಟನೆಯಲ್ಲಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಾರು ಚಾಲಕ ನವೀನ್‍ನನ್ನ ಬಂಧಿಸಿರುವ ರಾಜಾಜಿಗರ ಸಂಚಾರಿ ಪೊಲೀಸರು, ವಿಚಾರಣೆ ಆರಂಭಿಸಿದ್ದಾರೆ.