ಮಂಗಳೂರು: 2020ನೇ ಸಾಲಿನ ಪದ್ಮ ಪ್ರಶಸ್ತಿಗಳಲ್ಲಿ ಕರಾವಳಿಯ 3 ಸಾಧಕರನ್ನು ಗುರುತಿಸಿ ಗೌರವಿಸಿದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ್ ಕಾಮತ್ ಅವರು ಧನ್ಯವಾದ ತಿಳಿಸಿದ್ದಾರೆ.
ಪೇಜಾವರ ಶ್ರೀ ಹಾಗೂ ಮಾಜಿ ಕೇಂದ್ರ ಸಚಿವ ಜಾರ್ಜ್ ಫೆರ್ನಾಂಡೀಸ್ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಹಾಗೂ ಅಕ್ಷರ ಸಂತ ಹರೇಕಳ ಹಾಜಬ್ಬ ಅವರಿಗೆ ದೊರೆತಿರುವ ಪದ್ಮಶ್ರೀ ಪ್ರಶಸ್ತಿ ಕರಾವಳಿಯ ಘನತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಅವರ ಸಾಧನೆಯಿಂದ ಕರಾವಳಿಯ ಹಿರಿಮೆಗೆ ಮತ್ತೊಂದು ಗರಿ ಸೇರ್ಪಡೆಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಪೇಜಾವರ ಶ್ರೀ, ಜೇಟ್ಲಿ, ಸುಷ್ಮಾ ಸ್ವರಾಜ್, ಫರ್ನಾಂಡಿಸ್‍ಗೆ ಪದ್ಮ ವಿಭೂಷಣ
ಸಾಮಾಜಿಕ ಕ್ರಾಂತಿಯ ಮೂಲಕ ಸಮಾಜದ ಗಟ್ಟಿಧ್ವನಿಯಾಗಿದ್ದ ಪೂಜ್ಯ ಪೇಜಾವರ ಶ್ರೀಗಳು, ಕಿತ್ತಳೆ ಹಣ್ಣು ವ್ಯಾಪಾರದಿಂದ ಅಕ್ಷರ ದೇಗುಲ ನಿರ್ಮಿಸಿದ ಹಾಜಬ್ಬ ಹಾಗೂ ಸಾಧಾರಣ ವ್ಯಕ್ತಿಯಿಂದ ಈ ದೇಶದ ರಕ್ಷಣಾ ಸಚಿವನಾಗಿ ಸಾಧನೆ ಮಾಡಿದ ಜಾರ್ಜ್ ಫೆರ್ನಾಂಡೀಸ್ ಅವರಿಗೆ ಪ್ರಶಸ್ತಿ ದೊರಕಿರುವುದು ಅತ್ಯಂತ ಹರ್ಷ ತಂದಿದೆ. ಅರ್ಹ ವ್ಯಕ್ತಿಗಳನ್ನು ಗುರುತಿಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳನ್ನು ಅರ್ಪಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಗೌರವ