ವಿದ್ಯಾರ್ಥಿಗಳ ಎದುರೇ ವೇದಿಕೆಯಲ್ಲಿ ಶಿಕ್ಷಕಿಗೆ ಕಿಸ್ ಕೊಟ್ಟು ನಕ್ಕ ಶಿಕ್ಷಕ

Public TV
2 Min Read
school teacher 2

– ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್

ಜೈಪುರ: ವಿದ್ಯಾರ್ಥಿಗಳ ಮುಂದೆಯೇ ವೇದಿಕೆ ಮೇಲೆ ಶಿಕ್ಷಕಿಗೆ ಶಿಕ್ಷಕನೋರ್ವ ಮುತ್ತಿಟ್ಟ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಾಜಸ್ಥಾನದ ಕರೌಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕರೌಲಿಯ ಶಾಲೆಯೊಂದರಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ವೇದಿಕೆ ಮೇಲೆ ಕುಳಿತ್ತಿದ್ದ ಶಿಕ್ಷಕನೋರ್ವ ತನ್ನ ಪಕ್ಕದಲ್ಲಿದ್ದ ಶಿಕ್ಷಕಿಯ ಕೆನ್ನೆಗೆ ಮುತ್ತು ಕೊಟ್ಟಿದ್ದಾನೆ. ವಿದ್ಯಾರ್ಥಿಗಳ ಎದುರೇ ಶಿಕ್ಷಕಿಗೆ ಶಿಕ್ಷಕ ಮುತ್ತಿಟ್ಟ ದೃಶ್ಯವನ್ನು ಕಾರ್ಯಕ್ರಮದಲ್ಲಿ ನೆರೆದಿದ್ದವರು ವಿಡಿಯೋ ಮಾಡಿದ್ದಾರೆ. ಅಷ್ಟೇ ಅಲ್ಲದೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ತರಗತಿಯಲ್ಲೇ 8ನೇ ತರಗತಿ ಹುಡ್ಗ-ಹುಡ್ಗಿ ಕಿಸ್ಸಿಂಗ್

school teacher 3

ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು, ಈ ಬಗ್ಗೆ ರಾಜಸ್ಥಾನದ ಶಿಕ್ಷಣ ಸಚಿವರನ್ನು ಪ್ರಶ್ನಿಸಿದರೆ ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದುರ್ವರ್ತನೆ ತೋರಿದ ಶಿಕ್ಷಕನ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಸಚಿವರು ತಲೆಕೆಡಿಸಿಕೊಂಡಿಲ್ಲ. ಸಚಿವರ ಈ ನಡೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಿಕ್ಷಕನ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಮಟಮಟ ಮಧ್ಯಾಹ್ನವೇ ವಿದ್ಯಾರ್ಥಿಗಳಿಬ್ಬರ ಲಿಪ್ ಲಾಕ್

ವೈರಲ್ ವಿಡಿಯೋದಲ್ಲಿ, ವೇದಿಕೆ ಮೇಲೆ ಓರ್ವ ಶಿಕ್ಷಕ, ಒಬ್ಬರು ಶಿಕ್ಷಕಿ ಕೂತಿರುವಾಗ ಏಕಾಏಕಿ ಶಿಕ್ಷಕ ಪಕ್ಕದಲ್ಲಿದ್ದ ಶಿಕ್ಷಕಿ ಕೆನ್ನೆಗೆ ಮುತ್ತು ಕೊಟ್ಟಿದ್ದಾನೆ. ಈ ವೇಳೆ ವೇದಿಕೆ ಎದುರಿಗಿದ್ದ ವಿದ್ಯಾರ್ಥಿಗಳು ಜೋರಾಗಿ ಕೂಗುತ್ತಾ, ಶಿಕ್ಷಕನಿಗೆ ರೇಗಿಸಿದ ದೃಶ್ಯಗಳು ಸೆರೆಯಾಗಿದೆ.

social media

ಈ ಹಿಂದೆ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ವಿದ್ಯಾರ್ಥಿಗಳು ಸಾರ್ವಜನಿಕವಾಗಿಯೇ ಕಿಸ್ ಮಾಡುತ್ತಿರುವ ವಿಡಿಯೋವೊಂದು ಸಖತ್ ವೈರಲ್ ಆಗಿತ್ತು. ಆ ಬಳಿಕ ಗುಜರಾತಿನಲ್ಲಿ 8ನೇ ತರಗತಿಯ ವಿದ್ಯಾರ್ಥಿ, ವಿದ್ಯಾರ್ಥಿನಿ ತರಗತಿಯಲ್ಲೇ ಕಿಸ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡಿತ್ತು.

ಗುಜರಾತ್‍ನ ಪಂಚಮಹಲ್ ಜಿಲ್ಲೆಯ ಗೋದ್ರಾ ಸಮೀಪವಿರುವ ಮೊರ್ವಾ ಹಡಾಫ್‍ನ ಕ್ರುಶಿಕರ್ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿ ಕಿಸ್ ಮಾಡಿದ್ದರು. 8ನೇ ತರಗತಿ ಓದುತ್ತಿರುವ ವಿದ್ಯಾರ್ಥಿ, ವಿದ್ಯಾರ್ಥಿನಿ ಕ್ಲಾಸ್ ರೂಮಿನಲ್ಲಿಯೇ ಒಬ್ಬರಿಗೊಬ್ಬರು ಕಿಸ್ ಕೊಡುತ್ತಿರುವ ವಿಡಿಯೋ ಸದ್ಯ ಸಖತ್ ವೈರಲ್ ಆಗಿತ್ತು. ವಿದ್ಯಾರ್ಥಿ, ವಿದ್ಯಾರ್ಥಿನಿ ಕಿಸ್ ಮಾಡುತ್ತಿರುವ ವಿಡಿಯೋವನ್ನು ಯಾರೋ ಸೆರೆಹಿಡಿದು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು.

Share This Article
Leave a Comment

Leave a Reply

Your email address will not be published. Required fields are marked *