ಮಹಾ ಶಿವರಾತ್ರಿಗೆ ತೆರೆಗೆ ಬರಲಿದೆ ರಮೇಶ್ ಅರವಿಂದ್ ನಟನೆಯ ‘ಶಿವಾಜಿ ಸುರತ್ಕಲ್’?

Public TV
1 Min Read
Ramesh Aravind Shivaji Surathkal 11

ಮಹಾ ಶಿವರಾತ್ರಿಯಂದು ರಮೇಶ್ ಅರವಿಂದ್ ಡಿಟೆಕ್ಟಿವ್ ಪಾತ್ರದಲ್ಲಿ ಅಭಿನಯಿಸಿರುವ ‘ಶಿವಾಜಿ ಸುರತ್ಕಲ್’ ಚಿತ್ರ ಥ್ರಿಲ್ ನೀಡಲು ಬರ್ತಿದೆ. ಫೆಬ್ರವರಿ 21ರ ಮಹಾ ಶಿವರಾತ್ರಿಗೆ ‘ಶಿವಾಜಿ ಸುರತ್ಕಲ್’ ಚಿತ್ರ ಬಿಡುಗಡೆಯಾಗುತ್ತಿದೆ. ‘ಶಿವಾಜಿ ಸುರತ್ಕಲ್’ ಪತ್ತೇದಾರಿ ಕಥಾನಕ ಸಬ್ಜೆಕ್ಟ್ ಇರೋ ಸಿನಿಮಾ. ರಣಗಿರಿಯಲ್ಲಿ ಅನುಮಾನಾಸ್ಪದವಾಗಿ ನಡಿಯೋ ಕೊಲೆ ರಹಸ್ಯವನ್ನು ಭೇದಿಸುವ ಪಾತ್ರದಲ್ಲಿ ರಮೇಶ್ ಮಿಂಚಿದ್ದಾರೆ. ಸಸ್ಪೆನ್ಸ್ ,ಥ್ರಿಲ್ಲರ್ ಮತ್ತು ಹಾರಾರ್ ಸಬ್ಜೆಕ್ಟ್ ಚಿತ್ರದಲ್ಲಿದೆ. ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ‘ಶಿವಾಜಿ ಸುರತ್ಕಲ್’ ಚಿತ್ರ ಮೂಡಿಬಂದಿದ್ದು ಆರಂಭದಿಂದ ಕುತೂಹಲ ಮೂಡಿಸಿದ್ದ ಈ ಚಿತ್ರ, ಟ್ರೈಲರ್ ಮೂಲಕ ಆ ಕೌತುಕವನ್ನು ದುಪ್ಪಟ್ಟು ಮಾಡಿದೆ.

Ramesh Aravind Shivaji Surathkal 3

ರಮೇಶ್ ಅರವಿಂದ್ ಮೂರು ದಶಕಗಳ ಸಿನಿ ಜೀವನದಲ್ಲಿ ಇದೆ ಮೊದಲ ಬಾರಿ ಡಿಟೆಕ್ಟಿವ್ ಪಾತ್ರದಲ್ಲಿ ಬಣ್ಣಹಚ್ಚಿರೋದು ಈ ಚಿತ್ರದ ವಿಶೇಷ. ಚಿತ್ರದಲ್ಲಿ ನಾಯಕಿಯರಾಗಿ ರಾಧಿಕಾ ನಾರಾಯಣ್, ಆರೋಹಿ ಅಭಿನಯಿಸಿದ್ದಾರೆ. ಅವಿನಾಶ್, ರಮೇಶ್ ಪಂಡಿತ್, ರೋಹಿತ್ ಭಾನುಪ್ರಕಾಶ್, ರಾಘು ರಮಣಕೊಪ್ಪ ಸೇರಿದಂತೆ ಹಲವು ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಜ್ಯೂಡಾ ಸ್ಯಾಂಡಿ ಸಂಗೀತ, ಗುರುಪ್ರಸಾಧ್ ಎಂ.ಜಿ ಕ್ಯಾಮೆರಾ ವರ್ಕ್ ‘ಶಿವಾಜಿ ಸುರತ್ಕಲ್’ ಚಿತ್ರಕ್ಕಿದೆ.

Ramesh Aravind Shivaji Surathkal 6

ಅಂಜನಾದ್ರಿ ಸಿನಿ ಕ್ರಿಯೇಷನ್ಸ್ ಬ್ಯಾನರ್ ನಡಿ ಚಿತ್ರ ನಿರ್ಮಾಣವಾಗಿದ್ದು, ರೇಖಾ.ಕೆ.ಎನ್, ಅನೂಪ್ ಗೌಡ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಸಾಕಷ್ಟು ಕುತೂಹಲ ಮೂಡಿಸಿರುವ ‘ಶಿವಾಜಿ ಸುರತ್ಕಲ್’ ಚಿತ್ರ ಫೆಬ್ರವರಿ 21ಕ್ಕೆ ಚಿತ್ರಮಂದಿರಕ್ಕೆ ಬರಲಿದೆ.

Share This Article
Leave a Comment

Leave a Reply

Your email address will not be published. Required fields are marked *