ಸರ್ಕಾರದ ವಿರುದ್ಧ ಅಧಿವೇಶನದಲ್ಲಿ ಕಾಂಗ್ರೆಸ್‍ನಿಂದ ಸಪ್ತಾಸ್ತ್ರ ಪ್ರಯೋಗ

Public TV
1 Min Read
congress CLP Leaders

ಬೆಂಗಳೂರು: ನಾಳೆಯಿಂದ ವಿಧಾನ ಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ನಾಳೆ ಎರಡು ಸದನಗಳನ್ನ ಉದ್ದೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಈ ಮೂಲಕ ವಿಧಾನ ಮಂಡಲದ ಅಧಿವೇಶನಕ್ಕೆ ರಾಜ್ಯಪಾಲ ವಿ.ಆರ್.ವಾಲಾ ಚಾಲನೆ ನೀಡಿಲಿದ್ದಾರೆ. ಇತ್ತ ವಿಪಕ್ಷ ಕಾಂಗ್ರೆಸ್ ಅಧಿವೇಶನದಲ್ಲಿ ಬಿಜೆಪಿ ಸರ್ಕಾರವನ್ನ ತರಾಟೆಗೆ ತೆಗೆದುಕೊಳ್ಳಲು ಸಪ್ತಾಸ್ತ್ರ ಪ್ರಯೋಗಕ್ಕೆ ಮುಂದಾಗಿದೆ.

ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಅಧಿವೇಶನದಲ್ಲಿ ಚರ್ಚೆ ಮಾಡಬೇಕಾದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಯ್ತು. ಪ್ರಮುಖ 7 ವಿಷಯಗಳನ್ನ ಅಧಿವೇಶನದಲ್ಲಿ ಪ್ರಸ್ತಾಪ ಮಾಡಿ ಸರ್ಕಾರವನ್ನ ಇಕ್ಕಟ್ಟಗೆ ಸಿಲುಕಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ನಿನ್ನೆಯಷ್ಟೆ ಪೊಲೀಸ್ ವ್ಯವಸ್ಥೆ ದುರ್ಬಳಕೆ ಆಗ್ತಿದೆ. ಕಾನೂನು ಸುವ್ಯವಸ್ಥೆ ಸರಿಯಿಲ್ಲ ಅಂತ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಇದೇ ವಿಷಯವನ್ನ ಅಧಿವೇಶನದಲ್ಲಿ ಪ್ರಸ್ತಾಪ ಮಾಡಲು ಕಾಂಗ್ರೆಸ್ ನಿರ್ಧಾರ ಮಾಡಿದೆ.

ಇನ್ನು ನಾಳಿನ ರಾಜ್ಯಪಾಲರ ಭಾಷಣಕ್ಕೆ ಅಡ್ಡಿಪಡಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ರಾಜ್ಯಪಾಲರ ಭಾಷಣದಲ್ಲಿ ಸಿಎಎ ಪರ ವಿಷಯ ಪ್ರಸ್ತಾಪ ಮಾಡಿದ್ರೆ ಕೂಡಲೇ ಭಾಷಣಕ್ಕೆ ಅಡ್ಡಿಪಡಿಸಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ಮಂಗಳೂರು ಗೋಲಿಬಾರ್ ವಿಷಯ ಪ್ರಸ್ತಾಪಕ್ಕೂ ಕಾಂಗ್ರೆಸ್ ನಿರ್ಧಾರ ಮಾಡಿದ್ದು, ಪೊಲೀಸರ ವರ್ತನೆ, ಇಬ್ಬರು ಮೃತ ವಿಚಾರ ಮುಂದಿಟ್ಟುಕೊಂಡು ಸರ್ಕಾರಕ್ಕೆ ತರಾಟೆ ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದಾರೆ.

ಭಾರೀ ವಿವಾದಕ್ಕೆ ಕಾರಣವಾಗಿರೋ ಸಚಿವ ಆರ್.ಅಶೋಕ್ ಪುತ್ರನ ಅಪಘಾತ ಪ್ರಕರಣವನ್ನು ಪ್ರಸ್ತಾಪ ಮಾಡಲು ಕಾಂಗ್ರೆಸ್ ನಿರ್ಧಾರ ಮಾಡಿದೆ. ಅಶೋಕ್ ಪುತ್ರನ ಅಪಘಾತ ಪ್ರಕರಣದ ಕುರಿತು ತನಿಖೆ ಆಗಬೇಕು ಅಂತ ಕಾಂಗ್ರೆಸ್ ಒತ್ತಾಯ ಮಾಡಲಿದೆ. ಅಲ್ಲದೇ ಪ್ರಾಮಾಣಿಕ ತನಿಖೆಗೆ ಸರ್ಕಾರವನ್ನ ಒತ್ತಾಯಿಸಲಿದೆ. ಇದರ ಜೊತೆಗೆ ನೆರೆ ಸಂತ್ರಸ್ಥರ ಪರಿಹಾರ ವಿಚಾರ, ಹುಬ್ಬಳ್ಳಿ ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದವರನ್ನ ಬಿಡುಗಡೆ ಮಾಡಿದ ವಿಚಾರ. ಬೀದರ್ ದೇಶದ್ರೋಹಿ ಪ್ರಕರಣ ಮತ್ತು ಎಸ್.ಸಿ. ಎಸ್.ಟಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಹಕ್ಕಿಲ್ಲ ಅನ್ನೊ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಬೇಕು ಅಂತ ಕಾಂಗ್ರೆಸ್ ಅಧಿವೇಶನದಲ್ಲಿ ಸರ್ಕಾರವನ್ನ ಒತ್ತಾಯಿಸಲಿದೆ.

Share This Article
Leave a Comment

Leave a Reply

Your email address will not be published. Required fields are marked *