ಮಂಡ್ಯ: ರಾಜ್ಯದಲ್ಲಿ ಕೊರೊನಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಇದೀಗ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿನ ಖಾಸಗಿ ಶಾಲೆಗಳ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಮೌಕಿಕ ಆದೇಶ ಹೊರಡಿಸಿದೆ.
ಕೊರೊನಾ ವೈರಸ್ ಭೀತಿ ಇರುವ ಕಾರಣ ಶಾಲೆಯ ಆಡಳಿತ ಮಂಡಳಿ ಈ ರೀತಿಯ ಆದೇಶ ಹೊರಡಿಸಿದೆ. ಶಾಲೆಯ ಆಡಳಿತ ಮಂಡಳಿಯ ಈ ಆದೇಶಕ್ಕೆ ಕಂಗಾಲಾಗಿದ್ದು, ತಮ್ಮ ಮಕ್ಕಳಿಗೆ ಮಾಸ್ಕ್ ಹಾಕಿ ಶಾಲೆಗೆ ಕಳಿಸುತ್ತಿದ್ದಾರೆ. ವಿದ್ಯಾರ್ಥಿಗಳು ಮಾಸ್ಕ್ ಹಾಕಿಕೊಂಡೆ ಶಾಲೆಗೆ ಹೋಗುತ್ತಿದ್ದಾರೆ. ಈಗಾಗಲೇ ಕೆಲ ಶಾಲೆಗಳಲ್ಲಿ ಪರೀಕ್ಷೆಗಳು ಪ್ರಾರಂಭವಾಗಿರುವ ಕಾರಣ ವಿದ್ಯಾರ್ಥಿಗಳು ಮಾಸ್ಕ್ ಹಾಕಿಕೊಂಡು ಪರೀಕ್ಷೆ ಬರೆಯುತ್ತಿದ್ದಾರೆ.
ಈ ಬಗ್ಗೆ ಜನರಿಗೆ ಮಂಡ್ಯ ಜಿಲ್ಲಾಧಿಕಾರಿ ವೆಂಕಟೇಶ್ ಅವರು ಮನವಿಯನ್ನು ಸಹ ಮಾಡಿದ್ದಾರೆ. ಜನರು ಕೊರೊನಾ ವೈರಸ್‍ಗೆ ಹೆದರುವ ಅವಶ್ಯಕತೆ ಇಲ್ಲ. ನಮ್ಮ ವಾತಾವರಣದಲ್ಲಿ ಕೊರೊನಾ ವೈರಸ್ ಬದುಕುವುದಿಲ್ಲ. ಜನರು ಮಾಂಸವನ್ನು ಚೆನ್ನಾಗಿ ಬೇಯಿಸಿ ಸೇವನೆ ಮಾಡಿ. ಜೊತೆಗೆ ಕಿತ್ತಳೆ, ನಿಂಬೆ, ಸೀಬೆಹಣ್ಣುಗಳನ್ನು ಹೆಚ್ಚಾಗಿ ಸೇವಿಸಿ. ಇದರ ಜೊತೆಗೆ ಆಸ್ಪತ್ರೆಯ ಆವರಣದಲ್ಲಿ ಮಾಸ್ಕ್ ಧರಿಸಿ ಎಂದು ಮನವಿ ಮಾಡಿದ್ದಾರೆ.