Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೆಚ್ಚಿದ ಕೊರೊನಾ ಭೀತಿ- ರಾಜ್ಯ ರಾಜಕೀಯದಲ್ಲಿ ಶುರುವಾಯ್ತು ಕೆಸರೆರಚಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೆಚ್ಚಿದ ಕೊರೊನಾ ಭೀತಿ- ರಾಜ್ಯ ರಾಜಕೀಯದಲ್ಲಿ ಶುರುವಾಯ್ತು ಕೆಸರೆರಚಾಟ

Bengaluru City

ಹೆಚ್ಚಿದ ಕೊರೊನಾ ಭೀತಿ- ರಾಜ್ಯ ರಾಜಕೀಯದಲ್ಲಿ ಶುರುವಾಯ್ತು ಕೆಸರೆರಚಾಟ

Public TV
Last updated: March 15, 2020 6:14 pm
Public TV
Share
2 Min Read
HDK K Sudhakar Sriramulu
SHARE

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಇದಕ್ಕೆ ಪರಿಹಾರ ಕೈಗೊಳ್ಳಬೇಕಾದ ರಾಜಕೀಯ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಾಲೆಳೆಯುವ, ಟಾಂಗ್ ಕೊಡುವಲ್ಲಿ ಫುಲ್ ಆ್ಯಕ್ಟಿವ್ ಆಗಿದ್ದಾರೆ.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮಾಡಿ, ಕೊರೊನಾ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ ಎಂದು ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದರು.

#coronavirus ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ. ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ.
3/4

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) March 15, 2020

ಕೊರೊನಾ ಸೋಂಕಿತರಿಗೆ ಪ್ರತ್ಯೇಕವಾಗಿ ಚಿಕಿತ್ಸೆ ನೀಡುವುದೇ ಮುಂಜಾಗ್ರತಾ ಕ್ರಮ. ಇದಕ್ಕಾಗಿ ಕೆಲ ಆಸ್ಪತ್ರೆಗಳಲ್ಲಿ ಪ್ರತ್ಯೇಕ ವಿಭಾಗ ತೆರೆದಿರುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಇತರ ರೋಗಿಗಳ ಜೊತೆ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುವುದು ಸರಿಯೇ? ಇದರ ಬದಲು ಖಾಲಿ ಉಳಿದಿರುವ ಸರ್ಕಾರಿ ಕಟ್ಟಡಗಳನ್ನು ಇದಕ್ಕಾಗಿ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದ್ದರು.

ರಾಜ್ಯದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳು ಖಾಲಿ ಉಳಿದಿವೆ. ಅವುಗಳನ್ನು ಕೊರೊನಾ ವೈರಸ್ ಸೋಂಕಿತರಿಗೆ ಕ್ವಾರಂಟೈನ್ ಕೇಂದ್ರಗಳಾಗಿ ಪರಿವರ್ತಿಸಬೇಕು. ಜನನಿಬಿಡ ಪ್ರದೇಶಗಳಿಂದ ದೂರದಲ್ಲಿ ಕ್ವಾರಂಟೈನ್ ಕೇಂದ್ರ ತರೆಯಬೇಕು. ಸೋಂಕಿತರ ರಕ್ತ ಮಾದರಿ ಸಂಗ್ರಹಕ್ಕೆ ಅವರಿರುವಲ್ಲಿಯೇ ವ್ಯವಸ್ಥೆಯಾಗಬೇಕು ಎಂದಿದ್ದರು.

HDK Dr. Sudhakar 1

ಇದಕ್ಕೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು, ಕೊರೊನಾ ನಿರ್ವಹಣೆ ವಿಚಾರದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಬಾಲಿಶ ಹೇಳಿಕೆ ನೀಡಿದ್ದನ್ನು ಗಮನಿಸಿದ್ದೇನೆ. ವಿಪತ್ತನ್ನು ಎದುರಿಸಲು ಸಿಎಂ ಯಡಿಯೂರಪ್ಪ ಅವರ ಆದೇಶದಂತೆ ರಾಜ್ಯಸರ್ಕಾರ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು ಆರೋಗ್ಯ ಸಚಿವ ಶ್ರೀರಾಮುಲು ಮತ್ತು ನಾನು ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುತ್ತದ್ದೇವೆ ಎಂದು ತಿರುಗೇಟು ನೀಡಿದ್ದಾರೆ.

ಜನರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸುವುದು, ಸೋಂಕಿತರ ಪತ್ತೆಗೆ ಸರ್ವ ಪ್ರಯತ್ನ, ಸೋಂಕಿತರ ಚಿಕಿತ್ಸೆಗೆ ಎಲ್ಲ ಸೌಕರ್ಯ, ಪ್ರತ್ಯೇಕ ನಿಗಾ ಘಟಕಗಳು, ತಜ್ಞ ವೈದ್ಯರ ಮತ್ತು ಇತರ ಸಿಬ್ಬಂದಿ ಹಗಲಿರುಳು ಕೆಲಸ ಮಾಡುತ್ತಿದ್ದಾರೆ. ಎಲ್ಲ ಮುಂಜಾಗ್ರತಾ ಕ್ರಮಗಳನ್ನು ರಾಜ್ಯಸರ್ಕಾರ ತೆಗೆದುಕೊಂಡಿದೆ. ಇದನ್ನು ಜನರೂ ಮೆಚ್ಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಸನ್ಮಾನ್ಯ ಮಾಜಿ ಮುಖ್ಯಮಂತ್ರಿಗಳಲ್ಲಿ ನನ್ನ ವಿನಂತಿಯೆಂದರೆ, ಈ ಸೂಕ್ಷ್ಮ ಪರಿಸ್ಥಿತಿಗಳಲ್ಲಿ ರಾಜಕೀಯ ಬದಿಗಿಟ್ಟು, ಜಾಗೃತಿ ಮೂಡಿಸುವ ಕೆಲಸದಲ್ಲಿ ಆದಷ್ಟು ಸಹಕರಿಸಿ. ತಾವು ಕೂಡ ಎಚ್ಚರಿಕೆಯಿಂದ ಇದ್ದು ಸುರಕ್ಷಿತವಾಗಿರಿ, ಇಂತಹ ಸಂದರ್ಭಗಳಲ್ಲಿ ಜನರಲ್ಲಿ ಆತಂಕ ಹೆಚ್ಚಿಸುವ ಯಾವುದೇ ಪ್ರಯತ್ನ ಅಪೇಕ್ಷಣೀಯವಲ್ಲ. @CMofKarnataka (3/3)

— Dr Sudhakar K (@DrSudhakar_) March 15, 2020

ಮಾಜಿ ಮುಖ್ಯಮಂತ್ರಿಗಳಲ್ಲಿ ನನ್ನ ವಿನಂತಿಯೆಂದರೆ, ಈ ಸೂಕ್ಷ್ಮ ಪರಿಸ್ಥಿತಿಗಳಲ್ಲಿ ರಾಜಕೀಯ ಬದಿಗಿಟ್ಟು, ಜಾಗೃತಿ ಮೂಡಿಸುವ ಕೆಲಸದಲ್ಲಿ ಆದಷ್ಟು ಸಹಕರಿಸಿ. ತಾವು ಕೂಡ ಎಚ್ಚರಿಕೆಯಿಂದ ಇದ್ದು ಸುರಕ್ಷಿತವಾಗಿರಿ. ಇಂತಹ ಸಂದರ್ಭಗಳಲ್ಲಿ ಜನರಲ್ಲಿ ಆತಂಕ ಹೆಚ್ಚಿಸುವ ಯಾವುದೇ ಪ್ರಯತ್ನ ಅಪೇಕ್ಷಣೀಯವಲ್ಲ ಎಂದು ಗುಡುಗಿದ್ದಾರೆ.

ಕೊರೋನಾ ನಿರ್ವಹಣೆ ವಿಚಾರದಲ್ಲಿ ಶ್ರೀ @hd_kumaraswamy ರವರ ಬಾಲಿಶ ಹೇಳಿಕೆ ಗಮನಿಸಿದ್ದೇನೆ. ವಿಪತ್ತನ್ನು ಎದುರಿಸಲು ಮುಖ್ಯಮಂತ್ರಿ ಶ್ರೀ @BSYBJPರವರ ಆದೇಶದಂತೆ ರಾಜ್ಯಸರ್ಕಾರ ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದ್ದು ಆರೋಗ್ಯ ಸಚಿವ ಶ್ರೀ @sriramulubjp ಮತ್ತು ನಾನು ಪರಸ್ಪರ ಸಮನ್ವಯದಿಂದ ಕರ್ತವ್ಯ ನಿರ್ವಹಿಸುತ್ತದ್ದೇವೆ. (1/3)

— Dr Sudhakar K (@DrSudhakar_) March 15, 2020

ಅಷ್ಟೇ ಅಲ್ಲದೆ ಆರೋಗ್ಯ ಸಚಿವ ಶ್ರೀರಾಮುಲು ಅವರು ಕೂಡ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರೇ, ನಾನು ಹಾಗೂ ಸುಧಾಕರ್ ಅವರು ಜೊತೆಜೊತೆಗೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ. ತಮ್ಮ ಗೊಂದಲದಲ್ಲಿ ಯಾವುದೇ ಹುರುಳಿಲ್ಲ. ಇತ್ತೀಚೆಗೆ ಹೆಚ್ಚಾಗಿ ಗೊಂದಲದಲ್ಲಿರುವ ತಾವು, ಜನರನ್ನು ಗೊಂದಲಕ್ಕೆ ದೂಡುವ ಕೆಲಸಕ್ಕೆ ಕೈಹಾಕದಿರಿ ಎಂದು ವಿನಂತಿಸುತ್ತೇನೆ ಎಂದು ಕುಟುಕಿದ್ದಾರೆ.

ಕುಮಾರಸ್ವಾಮಿಯವರೇ, ನಾನು ಹಾಗೂ ಶ್ರೀ. ಸುಧಾಕರ್ ಅವರು ಜೊತೆಜೊತೆಗೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ. ತಮ್ಮ ಗೊಂದಲದಲ್ಲಿ ಯಾವುದೇ ಹುರುಳಿಲ್ಲ. ಇತ್ತೀಚೆಗೆ ಹೆಚ್ಚಾಗಿ ಗೊಂದಲದಲ್ಲಿರುವ ತಾವು, ಜನರನ್ನು ಗೊಂದಲಕ್ಕೆ ದೂಡುವ ಕೆಲಸಕ್ಕೆ ಕೈಹಾಕದಿರಿ ಎಂದು ವಿನಂತಿಸುತ್ತೇನೆ

— B Sriramulu (@sriramulubjp) March 15, 2020

TAGGED:B. SriramuluCoronavirushd kumaraswamyK SudhakarpoliticsPublic TVState Leadersಎಚ್ ಡಿ ಕುಮಾರಸ್ವಾಮಿಕೆ.ಸುಧಾಕರ್ಕೊರೊನಾ ವೈರಸ್ಪಬ್ಲಿಕ್ ಟಿವಿರಾಜಕೀಯಶ್ರೀರಾಮುಲು
Share This Article
Facebook Whatsapp Whatsapp Telegram

Cinema news

TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories

You Might Also Like

Bengaluru B.Tech Student Missing
Bengaluru City

ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬೆಂಗಳೂರಿನಲ್ಲಿ ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

Public TV
By Public TV
25 minutes ago
big bulletin 20 april 2026 part 1
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-1

Public TV
By Public TV
51 minutes ago
big bulletin 20 april 2026 part 2
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-2

Public TV
By Public TV
52 minutes ago
big bulletin 20 april 2026 part 3
Big Bulletin

ಬಿಗ್‌ ಬುಲೆಟಿನ್‌ 20 April 2026 ಭಾಗ-3

Public TV
By Public TV
54 minutes ago
COURT
Bengaluru City

ಬೆಂಗಳೂರಿನಲ್ಲಿ ಜೀವಂತ ಗ್ರೆನೇಡ್ ಪತ್ತೆ ಕೇಸ್‌ – ಆರೋಪಿಗಳಿಗೆ ಇಂದು ಶಿಕ್ಷೆ ಪ್ರಕಟ

Public TV
By Public TV
1 hour ago
Dandeli Car Accident
Crime

ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?