ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಇಂದು ಹೊಸದಾಗಿ 4 ಮಂದಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು ದೃಢವಾಗಿದೆ ಎಂದು ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯು ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಹೇಳಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಾನು ಮಾತನಾಡಿದ್ದು, ಅವರ ತಿಳಿಸಿರುವ ಪ್ರಕಾರ ಬೆಂಗಳೂರಿನ ಮೂವರು ಹಾಗೂ ಗೌರಿಬಿದನೂರಿನ ಒಬ್ಬರಿಗೆ ಸೋಂಕು ದೃಢವಾಗಿದೆ. ಹೀಗಾಗಿ ರಾಜ್ಯದಲ್ಲಿ 15 ಇದ್ದ ಕೊರೊನಾ ಪೀಡಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.
- Advertisement 2-
- Advertisement 3-
ಇದಕ್ಕೂ ಮುನ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ವ್ಯಕ್ತಿಗೆ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಿ, ನಂತರ ಅವರ ತಾಯಿಗೂ ಸೋಂಕು ಇರವ ಬಗ್ಗೆ ಅನುಮಾನವಿದೆ. ಈಗ ಬಂದಿರುವ ಬೆಂಗಳೂರಿನ ಲ್ಯಾಬ್ ವರದಿ ಅವರಿಗೆ ಪ್ರಕಾರ ಪಾಸಿಟಿವ್ ಇದ್ದು, ಪುಣೆಯ ಲ್ಯಾಬ್ ವರದಿಗಾಗಿ ಕಾಯುತ್ತಿದ್ದೇವೆ. ಈ ವರದಿ ಸಂಜೆ ವೇಳೆಗೆ ಸಿಗಲಿದೆ. ಒಂದು ವೇಳೆ ಅವರ ತಾಯಿಗೂ ಸೋಂಕು ದೃಢವಾದರೆ ಕೊರೊನಾ ಪೀಡಿತರ ಸಂಖ್ಯೆ 20ಕ್ಕೆ ಏರಿಕೆಯಾಗಬಹುದು ಎಂದು ಹೇಳಿದರು.