Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಎಲ್ಲೆಂದರಲ್ಲಿ, ಡಾಕ್ಟರ್ ಮೇಲೆ ಉಗುಳುತ್ತಿದ್ದಾರೆ ದೆಹಲಿ ಮಸೀದಿಯ ಕ್ವಾರಂಟೈನ್‍ಗಳು

Public TV
Last updated: April 1, 2020 11:08 pm
Public TV
Share
4 Min Read
Spitting
SHARE

– ವೈದ್ಯರ ಜೊತೆ ಕೊರೊನಾ ಶಂಕಿತರ ಅಸಭ್ಯ ವರ್ತನೆ

ನವದೆಹಲಿ: ಚಿಕಿತ್ಸೆ ನೀಡಲು ಬಂದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯೊಂದಿಗೆ ದೆಹಲಿ ಮಸೀದಿಯ ಕ್ವಾರಂಟೈನ್‍ಗಳು ಅಸಭ್ಯ ವರ್ತಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ.

ದೆಹಲಿಯ ಮರ್ಕಜ್ ಮಸೀದಿಯಲ್ಲಿ ನಡೆದಿದ್ದ ಕಾರ್ಯಕ್ರಮವು ಇಡೀ ದೇಶವನ್ನೇ ತಲ್ಲಣಗೊಳಿಸಿದೆ. ತಮಿಳುನಾಡು, ಕರ್ನಾಟಕ, ಕೇರಳ ಸೇರಿದಂತೆ ಅನೇಕ ರಾಜ್ಯದ ಸಾವಿರಾರು ಜನರು ಸಭೆಯಲ್ಲಿ ಭಾಗವಹಿಸಿದ್ದರು. ಈ ಪೈಕಿ 300ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಜೊತೆಗೆ ಕೆಲವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.

corona 14

ನಿಜಾಮುದ್ದೀನ್‍ನ ತಬ್ಲಘಿ ಜಮಾತ್ ಸಭೆಯಲ್ಲಿ ಭಾಗವಹಿಸಿದ್ದ 167 ಜನರನ್ನು ತುಘಲಕಾಬಾದ್‍ನಲ್ಲಿ 2,140 ಗಂಟೆಗಳ ಕಾಲ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ. ಈ ಪೈಕಿ 97 ಜನರನ್ನು ಡೀಸೆಲ್ ಶೆಡ್ ತರಬೇತಿ ಶಾಲೆಯ ಹಾಸ್ಟೆಲ್ ಕ್ಯಾರೆಂಟೈನ್ ಸೆಂಟರ್ ಮತ್ತು 70 ಜನರಿಗೆ ಆರ್‍ಪಿಎಫ್ ಬ್ಯಾರಕ್ ಕ್ಯಾರಂಟೈನ್ ಸೆಂಟರ್ ನಲ್ಲಿ ಇರಿಸಲಾಗಿದೆ ಎಂದು ಎಎನ್‍ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಆದರೆ ಕ್ವಾರಂಟೈನ್‍ನಲ್ಲಿರುವ ಕೆಲವರು ಬೆಳಗ್ಗೆಯಿಂದ ಅಶಿಸ್ತಿನಿಂದ ವರ್ತಿಸುತ್ತಿದ್ದಾರೆ. ಆಹಾರ ಪದಾರ್ಥಗಳಿಗೆ ಅಸಮಂಜಸ ಬೇಡಿಕೆ ಇಡುತ್ತಿದ್ದಾರೆ. ಅಷ್ಟೇ ಅಲ್ಲದೆ ಕ್ಯಾರೆಂಟೈನ್ ಸೆಂಟರ್ ನಲ್ಲಿರುವ ಸಿಬ್ಬಂದಿ, ವೈದ್ಯರೊಂದಿಗೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದು, ಅವರ ಮೇಲೆ ಉಗಿಯುತ್ತಿದ್ದಾರೆ. ಜೊತೆಗೆ ಹಾಸ್ಟೆಲ್ ಕಟ್ಟಡದ ಸುತ್ತಲೂ ತಿರುಗಾಟ ನಡೆಸಿದ್ದಾರೆ ಎಂದು ವರದಿಯಾಗಿದೆ.

Occupants were unruly since morning&made unreasonable demand for food items. They misbehaved&abused staff at Quarantine Centre.Also they started spitting all over&on persons working/attending them incl doctors.They also started roaming around hostel building:CPRO Northern Railway https://t.co/mKLP1UQgJg

— ANI (@ANI) April 1, 2020

ಮಸೀದಿಯಲ್ಲಿ ನಡೆದ ಕಾರ್ಯಕ್ರಮ ಏನು?
ತಬ್ಲಿಘಿ-ಎ-ಜಮಾತ್ ಎಂಬ ಧಾರ್ಮಿಕ ಸಂಸ್ಥೆ ಮಾರ್ಚ್ 1ರಿಂದ ಮಾರ್ಚ್ 15ರವರೆಗೂ ದೆಹಲಿ ಹೊರವಲಯದಲ್ಲಿರುವ ನಿಜಾಮುದ್ದೀನ್ ಪ್ರಾಂತ್ಯದ ಮರ್ಕಜ್ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಿತ್ತು. ವಿವಿಧ ರಾಜ್ಯಗಳಿಂದ 2,500ಕ್ಕೂ ಹೆಚ್ಚು ಮಂದಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಂಡೋನೇಷಿಯಾ, ಮಲೇಷಿಯಾ, ಥಾಯ್ಲೆಂಡ್, ಸೌದಿ ಅರೇಬಿಯಾ, ಕಜಕಿಸ್ತಾನ ಸೇರಿದಂತೆ ಒಟ್ಟು 16 ದೇಶಗಳ ಧರ್ಮಗುರುಗಳಿಂದ ಉಪನ್ಯಾಸವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅವಧಿಯಲ್ಲಿ ಮರ್ಕಜ್ ಮಸೀದಿಯಲ್ಲೇ 280 ಧರ್ಮಗುರುಗಳು ಉಳಿದುಕೊಂಡಿದ್ದರು. 8 ಸಾವಿರಕ್ಕೂ ಹೆಚ್ಚು ಭಾರತೀಯ ಮುಸ್ಲಿಮರಿಂದಲೂ ಅದೇ 6 ಅಂತಸ್ತಿನ ಮಸೀದಿಯಲ್ಲಿ ವಾಸ್ತವ್ಯ ಹೂಡಿದ್ದರು. ಈ ವೇಳೆ ಧಾರ್ಮಿಕ ಕಾರ್ಯಕ್ರಮದಲ್ಲಿ ಕೊರೋನಾ ವೈರಸ್ ಪಾಲ್ಗೊಂಡವರಿಗೆ ಕೊರೊನಾ ವೈರಸ್ ಹಬ್ಬಿದೆ.

Nizamuddin A

ಉಲ್ಲಂಘನೆ ಯಾಕೆ?
ಈ ಕಾರ್ಯಕ್ರಮದ ಆಯೋಜಕರು ಮತ್ತು ಬೆಂಬಲಿಸುವ ವ್ಯಕ್ತಿಗಳು ಯಾವುದೇ ಉಲ್ಲಂಘನೆ ಆಗಿಲ್ಲ. ಜನತಾ ಕಫ್ರ್ಯೂ ಮತ್ತು 21 ದಿನಗಳ ಲಾಕ್‍ಡೌನ್ ಘೋಷಣೆಯಾಗಿದ್ದರಿಂದ ಅಲ್ಲಿದ್ದ ಮಂದಿಗೆ ಊರಿಗೆ ತೆರಳಲು ಸಾಧ್ಯವಾಗಿಲ್ಲ ಎಂದು ವಾದಿಸುತ್ತಿದ್ದಾರೆ. ಆದರೆ ಈ ಕಾರ್ಯಕ್ರಮ ಕಾನೂನು ಮತ್ತು ನಿಯಮಗಳನ್ನು ಉಲ್ಲಂಘಿಸಿ ನಡೆಸಲಾಗಿದೆ ಎನ್ನುವುದಕ್ಕೆ ಹಲವು ಸಾಕ್ಷ್ಯಗಳು ಸಿಗುತ್ತಿವೆ.

ಉಲ್ಲಂಘನೆ -1: ಪ್ರವಾಸಿ ವೀಸಾದಡಿ ಬಂದವರು ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ. ಆದರೆ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಉದ್ದೇಶದಿಂದ ಸುಳ್ಳು ಮಾಹಿತಿ ನೀಡಿ ಪ್ರವಾಸಿ ವೀಸಾ ಪಡೆದುಕೊಂಡಿದ್ದರು. ಈಗ ಈ ವೀಸಾ ಪಡೆದು ಬಂದವನ್ನು ಬಂದವರನ್ನು ಕಪ್ಪು ಪಟ್ಟಿಗೆ ಸೇರಿಸಲು ಗೃಹ ಇಲಾಖೆ ಮುಂದಾಗಿದೆ ಎಂದು ವರದಿಯಾಗಿದೆ.

Tabligh e Jamaat Nizamuddin Markaz Delhi Corona 1

ಕಳೆದ 2 ದಿನಗಳಿಂದ ಈ ಜಾಗದಲ್ಲಿ 281 ವಿದೇಶಿ ಪ್ರಜೆಗಳನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ನೇಪಾಳ 19, ಮಲೇಷ್ಯಾ 20, ಅಫ್ಘಾನಿಸ್ಥಾನ 1, ಮ್ಯಾನ್ಮಾರ್ 33, ಕಿರ್ಗಿಸ್ಥಾನ 28, ಇಂಡೋನೇಷ್ಯಾ 72, ಥಾಯ್ಲೆಂಡ್ 7, ಶ್ರೀಲಂಕಾ 34, ಬಾಂಗ್ಲಾದೇಶ 19, ಇಂಗ್ಲೆಂಡ್ 3, ಫಿಜಿ 4, ಫ್ರಾನ್ಸ್, ಸಿಂಗಾಪುರ, ಕುವೈತ್, ಅಫ್ಘಾನಿಸ್ಥಾನ, ಅಲ್ಜೀರಿಯಾದಿಂದ ತಲಾ ಒಬ್ಬೊಬ್ಬರು ಭಾಗವಹಿಸಿದ್ದಾರೆ. ಇದು ಪತ್ತೆಯಾದವರ ಸಂಖ್ಯೆ, ಇಲ್ಲಿಂದ ಹಲವು ರಾಜ್ಯಗಳಿಗೆ ವಿದೇಶಿಯರು ಪ್ರಯಾಣಿಸಿದ್ದು ಅದರ ಲೆಕ್ಕ ಸಿಗಬೇಕಿದೆ.

ಉಲ್ಲಂಘನೆ – 2: ವಿದೇಶದಿಂದ ಬಂದಂತಹ ವ್ಯಕ್ತಿಗಳು ಹೋಮ್ ಕ್ವಾರಂಟೈನ್ ನಲ್ಲಿ ಇರುವುದು ಕಡ್ಡಾಯ. ಎಲ್ಲ ರಾಜ್ಯ ಸರ್ಕಾರಗಳು ಈ ವಿಚಾರವನ್ನು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದು ಮನೆಗೆ ತೆರಳಿ ನೋಟಿಸ್ ಅಂಟಿಸಿ ಬರುತ್ತಿದ್ದಾರೆ. ಆದರೆ ಇಲ್ಲಿ ವಿದೇಶದಿಂದ ಬಂದವರು ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಹೀಗಾಗಿ ವಿದೇಶಿ ವ್ಯಕ್ತಿಗಳ ಪೈಕಿ ಎಷ್ಟು ಜನ ಆದೇಶ ಉಲ್ಲಂಘಿಸಿದ್ದಾರೆ ಎನ್ನುವುದು ಮುಂದೆ ತಿಳಿದು ಬರಲಿದೆ. ಈ ಕಾರಣಕ್ಕಾಗಿ ಐಪಿಸಿ ಸೆಕ್ಷನ್ 271(ಸೋಂಕು ಇದ್ದರೂ ಕ್ವಾರಂಟೈನ್ ನಿಯಮ ಉಲ್ಲಂಘನೆ) ಅಡಿ ಪ್ರಕರಣ ದಾಖಲಾಗಿದೆ. ಈ ಹಿಂದೆ ಹಲವು ರಾಜ್ಯ ಸರ್ಕಾರಗಳು ವಿದೇಶದಿಂದ ಪ್ರವಾಸಕ್ಕೆ ಬಂದವರ ಮಾಹಿತಿ ಸಿಗುತ್ತಿಲ್ಲ ಪತ್ತೆ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿಕೆ ನೀಡಿದ್ದವು. ಈಗ ನಾಪತ್ತೆಯಾದ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರಬಹುದೇ ಎನ್ನುವ ಅನುಮಾನ ಎದ್ದಿದೆ.

delhi muslim

ಉಲ್ಲಂಘನೆ – 3: ದೆಹಲಿ ಸರ್ಕಾರ ಫೆ.13 ರಂದು 200ಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ಎಲ್ಲ ಕಾರ್ಯಕ್ರಮಗಳಿಗೆ ನಿಷೇಧ ಹೇರಿತ್ತು. ಅಂದು ಸುದ್ದಿಗೋಷ್ಠಿ ನಡೆಸಿದ್ದ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಐಪಿಎಲ್ ಸೇರಿದಂತೆ ಎಲ್ಲ ಸಭೆ ಸಮಾರಂಭಗಳಿಗೆ ಸರ್ಕಾರ ನಿಷೇಧ ಹೇರಿದೆ ಎಂದು ತಿಳಿಸಿದ್ದರು. ನಿಷೇಧ ಹೇರಿದ್ದರೂ ಈ ಕಾರ್ಯಕ್ರಮ ಮಾ.15 ರವರೆಗೆ ಹೇಗೆ ನಡೆಯಿತು ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.

ಉಲ್ಲಂಘನೆ – 4: 1897ರ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಸೆಕ್ಷನ್ 3 ಉಲ್ಲಂಘನೆಯಾಗಿದೆ. ಈ ಕಾಯ್ದೆ ಅಡಿ ಸಾಂಕ್ರಾಮಿಕ ರೋಗವನ್ನು ಹರಡಿದರೆ ಅವರ ವಿರುದ್ಧ ಕ್ರಮ ಕೈಗೊಳ್ಳಬಹುದಾಗಿದೆ. ಕೊರೊನಾ ಪ್ರಕರಣಗಳು ದೇಶದಲ್ಲಿ ಹೆಚ್ಚಾಗುತ್ತಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಾರ್ಚ್ 13 ರಂದು ಈ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕೆಂದು ರಾಜ್ಯ ಸರ್ಕಾರಗಳಿಗೆ ಸೂಚಿಸಿತ್ತು.

Tabligh e Jamaat Nizamuddin Markaz Delhi Corona 4

ಉಲ್ಲಂಘನೆ – 5 : ಈ ಕಾರ್ಯಕ್ರಮದ ಆಯೋಜಕರು ಐಪಿಸಿ ಸೆಕ್ಷನ್ ಗಳನ್ನು ಸಹ ಉಲ್ಲಂಘನೆ ಮಾಡಿದ್ದಾರೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 269(ನಿರ್ಲಕ್ಷ್ಯದಿಂದ ಪ್ರಾಣಕ್ಕೆ ಅಪಾಯಕಾರಿಯಾದ ರೋಗದ ಸೋಂಕನ್ನು ಹರಡಿರುವುದು), 270(ಉದ್ದೇಶಪೂರ್ವಕವಾಗಿ ಪ್ರಾಣಕ್ಕೆ ಅಪಾಯಕಾರಿಯಾದ ಸೋಂಕನ್ನು ಹರಡಿರುವುದು) ಮತ್ತು 120 ಬಿ(ಕ್ರಿಮಿನಲ್ ಒಳಸಂಚು) ಉಲ್ಲಂಘಿಸಿದ್ದು ದೆಹಲಿ ಪೊಲೀಸರು ಈಗ 1897ರ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ ಮತ್ತು ಈ ಮೇಲೆ ತಿಳಿಸಿದ ಐಪಿಸಿ ಸೆಕ್ಷನ್ ಅಡಿ ಆಯೋಜಕರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.

TAGGED:doctorsNizamuddinPublic TVQuarantine CentreSpittingTabligi JamaatTughalakabadಕ್ವಾರಂಟೈನ್ದೆಹಲಿನಿಜಾಮುದ್ದೀನ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories

You Might Also Like

big bulletin 05 August 2025 part 2
Big Bulletin

ಬಿಗ್‌ ಬುಲೆಟಿನ್‌ 05 August 2025 ಭಾಗ-2

Public TV
By Public TV
6 hours ago
big bulletin 05 August 2025 part 3
Big Bulletin

ಬಿಗ್‌ ಬುಲೆಟಿನ್‌ 05 August 2025 ಭಾಗ-3

Public TV
By Public TV
6 hours ago
Uttarakhand Cloudburst
Districts

ಉತ್ತಾರಾಖಂಡದಲ್ಲಿ ಪ್ರವಾಹ – ಕಲಬುರಗಿ ಜಿಲ್ಲಾಡಳಿತದಿಂದ ಸಹಾಯವಾಣಿ ಕೇಂದ್ರ ಆರಂಭ

Public TV
By Public TV
7 hours ago
ARMY
Districts

ಗಡಿಯಲ್ಲಿ ಯಾವುದೇ ಕದನ ವಿರಾಮ ಉಲ್ಲಂಘನೆಯಾಗಿಲ್ಲ: ಭಾರತೀಯ ಸೇನೆ

Public TV
By Public TV
7 hours ago
IndianArmy
Latest

ಆಪರೇಷನ್‌ ಸಿಂಧೂರ ಬಳಿಕ ಮೊದಲ ಬಾರಿಗೆ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ

Public TV
By Public TV
7 hours ago
Uttarakashi Cloudburst army camp
Latest

ಉತ್ತರಕಾಶಿಯಲ್ಲಿ ಮೇಘಸ್ಫೋಟ – ಆರ್ಮಿ ಕ್ಯಾಂಪ್‌ನಲ್ಲಿದ್ದ 10ಕ್ಕೂ ಅಧಿಕ ಸೈನಿಕರು ನಾಪತ್ತೆ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?