ಬೆಂಬಲ ನೀಡಿ ಎಂದು ಕನ್ನಡದಲ್ಲಿ ಪೋಸ್ಟ್ ಮಾಡಿದ ಪ್ರಿಯಾ ವಾರಿಯರ್

Public TV
2 Min Read
priya varrier

ಬೆಂಗಳೂರು: ‘ಒರು ಆಡಾರ್ ಲವ್’ ಸಿನಿಮಾದಲ್ಲಿ ಕಣ್ಸನ್ನೆಯ ಒಂದೇ ಒಂದು ದೃಶ್ಯದ ಮೂಲಕ ಸಿಕ್ಕಾಪಟ್ಟೆ ಫೇಮಸ್ ಆದ ನಟಿ ಪ್ರಿಯಾ ವಾರಿಯರ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಕನ್ನಡದಲ್ಲಿ ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳ ಮನ ಗೆದ್ದಿದ್ದಾರೆ.

ಹೌದು. ಇನ್‍ಸ್ಟಾಗ್ರಾಮ್‍ನಲ್ಲಿ ಕನ್ನಡದಲ್ಲಿ ಪೋಸ್ಟ್ ಮಾಡಿ ಬೆಂಬಲ ನೀಡಿ ಎಂದು ಪ್ರಿಯಾ ಮನವಿ ಮಾಡಿಕೊಂಡಿದ್ದಾರೆ. ‘ವಿಷ್ಣು ಪ್ರಿಯಾ’ ಚಿತ್ರದ ಮೂಲಕ ಕನ್ನಡದಲ್ಲಿ ಮೊದಲ ಬಾರಿಗೆ ನಟಿಸುತ್ತಿರುವ ಪ್ರಿಯಾ ವಾರಿಯರ್ ತಮ್ಮ ಚಿತ್ರಕ್ಕೆ ಬೆಂಬಲಿಸಿ ಎಂದು ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಚಿತ್ರದಲ್ಲಿ ನಿರ್ಮಾಪಕ ಕೆ. ಮಂಜು ಅವರ ಮಗ ಶ್ರೇಯಸ್ ನಾಯಕರಾಗಿದ್ದು, ಮಲಯಾಳಂ, ತಮಿಳಿನಲ್ಲಿ ಸಿನಿಮಾಗಳನ್ನು ನಿರ್ದೇಶಿಸಿರುವ ವಿ.ಕೆ ಪ್ರಕಾಶ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ.

https://www.instagram.com/p/B-Zw5O8ASHh/

‘ವಿಷ್ಣು ಪ್ರಿಯ’ ಚಿತ್ರದ ಫಸ್ಟ್ ಲುಕ್ ಇದೇ ತಿಂಗಳ 5ರಂದು ಬಿಡುಗಡೆಯಾಗುತ್ತಿದೆ. ಈ ಸಂಗತಿಯನ್ನು ಪ್ರಿಯಾ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡು ಖುಷಿ ವ್ಯಕ್ತಪಡಿಸಿದ್ದಾರೆ. ನನ್ನ ಎಲ್ಲಾ ಕನ್ನಡದ ಪ್ರೀತಿಯ ಅಭಿಮಾನಿಗಳಿಗೆ ಪ್ರಿಯ ಮಾಡುವ ನಮಸ್ಕಾರಗಳು. ನನ್ನ ಮೊದಲನೇ ಕನ್ನಡದ ಸಿನಿಮಾ ” ವಿಷ್ಣು ಪ್ರಿಯ”ದ ಫಸ್ಟ್ ಲುಕ್ ಏಪ್ರಿಲ್ 5ಕ್ಕೆ ಬಿಡುಗಡೆ ಆಗಲಿದೆ, ಎಲ್ಲರೂ ದಯವಿಟ್ಟು ಶೇರ್ ಮಾಡಿ ಹಾಗೂ ಸಪೋರ್ಟ್ ಮಾಡಿ. ನಿಮ್ಮೆಲ್ಲರ ಪ್ರೀತಿ ಹಾಗೂ ಆಶೀರ್ವಾದ ಸದಾ ನನ್ನ ಮೇಲೆ ಮತ್ತು ನಮ್ಮ ಸಿನಿಮಾ ತಂಡದ ಮೇಲೆ ಇರಲಿ’ ಎಂದು ಪ್ರಿಯಾ ಕನ್ನಡದಲ್ಲಿ ಪೋಸ್ಟ್ ಮಾಡಿದ್ದಾರೆ.

priya

ಚಿತ್ರದ ಮುಹೂರ್ತದ ಸಂದರ್ಭದಲ್ಲಿ ಪ್ರಿಯಾ ಮಾತನಾಡುತ್ತಾ ಕನ್ನಡ ಸಿನಿಮಾಗಳ ಬಗ್ಗೆ ನನಗೆ ತಿಳಿದಿದೆ. ಇಲ್ಲಿ ವಿಭಿನ್ನ ಚಿತ್ರಗಳನ್ನು ಮಾಡುತ್ತಿದ್ದಾರೆ. ಆದ್ದರಿಂದ ಕನ್ನಡದಿಂದ ಆಫರ್ ಬಂದಾಗ ಹೆಚ್ಚು ಯೋಚನೆ ಮಾಡದೆ ಒಪ್ಪಿದೆ ಎಂದು ಹೇಳಿಕೊಂಡಿದ್ದರು. ಈಗ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಬಗ್ಗೆ ಕನ್ನಡದಲ್ಲಿಯೇ ಪ್ರಿಯಾ ಪೋಸ್ಟ್ ಮಾಡಿ ಕನ್ನಡ ಅಭಿಮಾನಗಳ ಮೆಚ್ಚುಗೆ ಗಳಿಸಿದ್ದಾರೆ.

priya 1

90ರ ದಶಕದಲ್ಲಿ ನಡೆದ ನೈಜ ಘಟನೆ ಆಧಾರಿತ ಚಿತ್ರ ಇದಾಗಿದ್ದು, ಈ ಕಥೆಯ ಎಳೆಯನ್ನು ನಿರ್ದೇಶಕರಿಗೆ ನಿರ್ಮಾಪಕ ಕೆ. ಮಂಜು ಅವರೇ ಹೇಳಿದ್ದಾರೆ ಎನ್ನಲಾಗಿದೆ. ಚಿತ್ರಕ್ಕೆ ‘ವಿಷ್ಣು ಪ್ರಿಯಾ’ ಹೆಸರಿಡಲು ಸಾಹಸಸಿಂಹ ವಿಷ್ಣುವರ್ಧನ್ ಅವರು ಕಾರಣರಂತೆ. ಹೌದು. ಮಂಜು ಅವರು ವಿಷ್ಣುವರ್ಧನ್ ಅವರ ಮೇಲಿಟ್ಟಿರುವ ಪ್ರೀತಿ, ಅಭಿಮಾನದಿಂದ ತಮ್ಮ ಪುತ್ರನ ಸಿನಿಮಾಕ್ಕೆ ‘ವಿಷ್ಣು ಪ್ರಿಯ’ ಎಂಬ ಹೆಸರನ್ನಿಟ್ಟಿದ್ದಾರೆ. ಈ ಸಿನಿಮಾ ಕನ್ನಡ, ಮಲಯಾಳಂ, ತಮಿಳು ಹಾಗೂ ತೆಲುಗಿನಲ್ಲಿ ಬಿಡುಗಡೆಗೊಳ್ಳಲಿದೆ ಎನ್ನಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *