Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಸಗೊಬ್ಬರ, ಕೀಟನಾಶಕ ದಾಸ್ತಾನು ಬೇಕಷ್ಟಿದೆ –  ಡಿವಿಎಸ್ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಸಗೊಬ್ಬರ, ಕೀಟನಾಶಕ ದಾಸ್ತಾನು ಬೇಕಷ್ಟಿದೆ –  ಡಿವಿಎಸ್ ಭರವಸೆ

Bengaluru City

ರಸಗೊಬ್ಬರ, ಕೀಟನಾಶಕ ದಾಸ್ತಾನು ಬೇಕಷ್ಟಿದೆ –  ಡಿವಿಎಸ್ ಭರವಸೆ

Public TV
Last updated: April 8, 2020 7:10 pm
Public TV
Share
2 Min Read
DV SADANANDA GOWDA
SHARE

ನವದೆಹಲಿ: ಕರ್ನಾಟಕವೂ ಸೇರಿದಂತೆ ದೇಶದ ಯಾವುದೇ ಭಾಗದಲ್ಲಿ ರಸಗೊಬ್ಬರ ಅಥವಾ ಕೀಟನಾಶಕಗಳ ಕೊರತೆ ಉಂಟಾಗಿಲ್ಲ. ಕರ್ನಾಟಕದಲ್ಲಿ ಸದ್ಯ 7.3 ಲಕ್ಷ ಟನ್ ರಸಗೊಬ್ಬರವಿದೆ. ಏಪ್ರಿಲ್ ತಿಂಗಳಲ್ಲಿ ರಾಜ್ಯದ ಬೇಡಿಕೆ 2.57 ಲಕ್ಷ ಟನ್. ಹಾಗಾಗಿ ರೈತರು ಈ ಸಲವೂ ಮಾಮೂಲಿಯಾಗಿ ಮುಂಗಾರು ಬಿತ್ತನೆಗೆ ತಯಾರಿ ಮಾಡಿಕೊಳ್ಳಬಹುದು ಎಂದು ಕೇಂದ್ರ ರಾಸಾಯನಿ ಮತ್ತು ರಸಗೊಬ್ಬರ ಸಚಿವ ಸದಾನಂದ ಗೌಡ ಭರವಸೆ ನೀಡಿದ್ದಾರೆ.

ಲಾಕ್‍ಡೌನ್‍ನಿಂದಾಗಿ ಆರಂಭದಲ್ಲಿ ಒಂದೆರಡು ದಿನ ಸರಕು ಸಾಗಣೆಗೆ ತೊಂದರೆಯಾಗಿತ್ತು. ಆದರೆ ರಸಗೊಬ್ಬರ, ಕೀಟನಾಶಕ ಸೇರಿಂತೆ ಕೃಷಿಸಂಬಂಧಿತ ಎಲ್ಲ ಪರಿಕರಗಳನ್ನು ಅತ್ಯವಶ್ಯಕ ವಸ್ತುಗಳ ಪಟ್ಟಿಗೆ ಸೇರಿಸಿ ಉತ್ಪಾದನೆ ಹಾಗೂ ಸಾಗಣೆ ಮೇಲಿನ ನಿರ್ಬಂಧವನ್ನು ಕೇಂದ್ರ ಸರ್ಕಾರವು ಸಂಪೂರ್ಣ ತೆಗೆದುಹಾಕಿತು. ರಸಗೊಬ್ಬರ ಕಾರ್ಖಾನೆಗಳು, ಗೋಡೌನ್‍ಗಳು, ಬಂದರಗಳು, ವಿತರಣಾ ಕೇಂದ್ರಗಳ ಮಧ್ಯೆ ರಸಗೊಬ್ಬರ ಸಾಗಣೆಗೆ ಬೇಡಿಕೆಗೆ ಅನುಗುಣವಾಗಿ ಗೂಡ್ಸ್ ರೈಲುಗಳನ್ನು ಒದಗಿಸುವಂತೆ ರೇಲ್ವೆ ಇಲಾಖೆಗೆ ಕೇಂದ್ರ ಸರ್ಕಾರವು ಕಟ್ಟುನಿಟ್ಟಿನ ಆದೇಶ ನೀಡಿದೆ. ಹಾಗೆಯೇ ಜಲ ಹಾಗೂ ಭೂಸಾರಿಗೆಗೆ ರಸಗೊಬ್ಬರ, ಕೀಟನಾಶಕ ಮತ್ತಿತರ ಕೃಷಿಸಂಬಂಧಿತ ಸರಕುಗಳನ್ನು ಸಾಗಣೆಗೆ ಮುಕ್ತ ಅನುಮತಿ ನೀಡಲಾಗಿದೆ ಎಂದು ಹೇಳಿದ್ದಾರೆ.

fertilizer urea

ದೇಶದ ಬಹುತೇಕ ರಸಗೊಬ್ಬರ ಕಾರ್ಖಾನೆಗಳು ಪೂರ್ಣ ಪ್ರಮಾಣದಲ್ಲಿ ಉತ್ಪಾದನೆಯಲ್ಲಿ ತೊಡಗಿವೆ. ಈ ಸಂದರ್ಭದಲ್ಲಿ ಲಾಕ್‍ಡೌನ್‍ ನಿಯಮಗಳನ್ನು (ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮುಖಗವಸು ಧರಿಸುವುದು ಇವೇ ಮುಂತಾದವು) ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚಿಸಲಾಗಿದೆ. ದೇಶದಲ್ಲಿ ಇನ್ನೂ ಹಲವು ತಿಂಗಳಿಗೆ ಸಾಕಾಗುವಷ್ಟು ರಸಗೊಬ್ಬರ ದಾಸ್ತಾನು ಇದೆ. ಸದ್ಯ 86.87 ಲಕ್ಷ ಮೆಟ್ರಿಕ್ ಟನ್ ಯೂರಿಯಾ ದಸ್ತಾನು ಇದೆ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ 7.57 ಲಕ್ಷ ಟನ್ ಯೂರಿಯಾ ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಲಾಗಿದೆ.

agriculture farmers

ದೇಶಾದ್ಯಂತ ರಸಗೊಬ್ಬರ ಮಳಿಗೆಗಳೂ ತೆರೆದಿದ್ದು ಎಂದಿನಂತೆ ವಹಿವಾಟು ನಡೆಸಿವೆ. ಕರ್ನಾಟಕದಲ್ಲಿ ಸಾಗಣೆ, ಪೂರೈಕೆಗೆ ಸಂಬಂಧಿಸಿದಂತೆ ಸಮಸ್ಯೆಗಳಿದ್ದರೆ ಕೃಷಿ ಸಹಾಯವಾಣಿ 080-22212818 / 22210237 ಗೆ ಕರೆಮಾಡಿ ಬಗೆಹರಿಸಿಕೊಳ್ಳಬಹುದು. ನಾನು ಮತ್ತೆ ಸ್ಪಷ್ಟಪಡಿಸುತ್ತಿದ್ದೇನೆ. ರಸಗೊಬ್ಬರ, ಕೀಟನಾಶಕಗಳ ಕೊರತೆ ಇಲ್ಲ. ದಾಸ್ತಾನು ಸಾಕಷ್ಟಿದೆ. ಬೇಕಾದಷ್ಟು ಗೊಬ್ಬರ ಪೂರೈಸುವ ಜವಾಬ್ದಾರಿ ನಮ್ಮದು. ರೈತಬಾಂಧವರಿಗೆ ನನ್ನ ಮನವಿ. ನೀವು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ. ನಿರಾತಂಕವಾಗಿ ಮುಂಗಾರು ಬಿತ್ತನೆಗೆ ತಯಾರಿಮಾಡಿಕೊಳ್ಳಿ. ನಿಮಗೆ ಶುಭವಾಗಲಿ ಎಂದು ಡಿವಿಎಸ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Women Farmers

ಮನೆ-ಮನೆಗೆ ಜನೌಷಧಿ: ಈ ಮಧ್ಯೆ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಪರಿಯೋಜನೆಯ (PMBJP) ಜನೌಷಧಿ ಕೇಂದ್ರಗಳ ಮೂಲಕ ಮನೆಗೇ ಔಷಧ ಸರಬರಾಜು ಮಾಡುವ ಸೌಲಭ್ಯವನ್ನು ಆರಂಭಿಸಲಾಗಿದೆ. ಅಗತ್ಯವಿರುವವರು ವಿಶೇಷವಾಗಿ ಹಿರಿಯ ನಾಗರಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅದಕ್ಕಾಗಿ ನಿಮ್ಮ ಸ್ಮಾರ್ಟ್ ಫೋನಿನಲ್ಲಿ ನಮ್ಮ ಸರ್ಕಾರವೇ ಅಭಿವೃದ್ಧಿಪಡಿಸಿರುವ ‘ಜನೌಷಧಿ ಸುಗಮ್, ಎಂಬ ಆ್ಯಪ್ ರೂಪಿಸಲಾಗಿದೆ ಎಂದು ಹೇಳಿದ್ದಾರೆ.

Jan Aushadhi stores

ಈ ಆ್ಯಪಿನಲ್ಲಿ ಹತ್ತಿರದ ಜನೌಷಧಿ ಕೇಂದ್ರ (ವಿಳಾಸ ಸಮೇತ), ಆ ಕೇಂದ್ರದ ಲೊಕೇಶನ್ ಮ್ಯಾಪ್, ಕೇಂದ್ರದಲ್ಲಿ ನಿಮಗೆ ಬೇಕಾದ ಔಷಧಿ ಲಭ್ಯತೆ ಇದೆಯೋ ಅಥವಾ ಇಲ್ಲವೋ, ಅಂಗಡಿಯ ದೂರವಾಣಿ ನಂಬರ್ – ಹೀಗೆ ಎಲ್ಲ ವಿವರಗಳು ಲಭ್ಯ. ಲಾಕ್‍ಡೌನ್ ಈ ಸಂದರ್ಭದಲ್ಲಿ ಔಷಧ ಅಂಗಡಿಗಳ ಬಳಿ ಗುಂಪು ಸೇರುವ ಅಗತ್ಯವಿಲ್ಲ. ಇದರಿಂದ ಸಾಮಾಜಿಕ ಅಂತರ ಕಾಯ್ದುಕೊಡಂತೆಯೂ ಆಯಿತು ಎಂದು ತಿಳಿಸಲಾಗಿದೆ.

ಜನೌಷಧಿ ಸುಗಮ್ ಆ್ಯಪ್ ಡೌನ್‍ಲೋಡ್ ಮಾಡಲು ಕ್ಲಿಕ್ ಮಾಡಿ: ಜನೌಷಧಿ ಸುಗಮ್

TAGGED:bengalurufarmersFertilizerJan AushadhiPress releasePublic TVsadananda gowdaಜನೌಷಧಿಪತ್ರಿಕಾ ಪ್ರಕಟಣೆಪಬ್ಲಿಕ್ ಟಿವಿಬೆಂಗಳೂರುರಸಗೊಬ್ಬರರೈತರುಸದಾನಂದ ಗೌಡ
Share This Article
Facebook Whatsapp Whatsapp Telegram

Cinema news

YASH 5
ಮುಂಬೈ ಏರ್‌ಪೋರ್ಟ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ರಾಕಿಭಾಯ್
Cinema Sandalwood
TVK Vijay
ಕರೂರು ಕಾಲ್ತುಳಿತ ಪ್ರಕರಣ – 7 ಗಂಟೆಗೂ ಹೆಚ್ಚು ಕಾಲ ನಟ ವಿಜಯ್‌ಗೆ CBI ಗ್ರಿಲ್
Bengaluru City Cinema Latest Sandalwood Top Stories
Toxic
ಯಶ್ ʻಟಾಕ್ಸಿಕ್ʼ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು!
Bengaluru City Cinema Districts Karnataka Latest Sandalwood Top Stories
Karikaada
ʻಕರಿಕಾಡʼ ಸಿನಿಮಾದ ಮಾದಕ ಸಾಂಗ್‌ಗೆ ಸೊಂಟ ಬಳುಕಿಸಿದ ಕೃತಿ ವರ್ಮಾ
Cinema Latest Sandalwood

You Might Also Like

Bangladesh
Latest

ಬಾಂಗ್ಲಾದಲ್ಲಿ ಮುಂದುವರಿದ ಹಿಂದೂಗಳ ಹತ್ಯೆ ಸರಣಿ – ಆಟೋ ಡ್ರೈವರ್‌, ಗಾಯಕ ಪ್ರೊಲೊಯ್ ಚಾಕಿ ಹತ್ಯೆ

Public TV
By Public TV
6 hours ago
Dharwad 2
Dharwad

ಹಾಡಹಗಲೇ ಇಬ್ಬರು ಮಕ್ಕಳ ಅಪಹರಣ – ಮರಳಿ ಪಾಲಕರ ಮಡಿಲು ಸೇರಿದ ಪುಟಾಣಿಗಳು!

Public TV
By Public TV
7 hours ago
01 10
Big Bulletin

ಬಿಗ್‌ ಬುಲೆಟಿನ್‌ 12 January 2026 ಭಾಗ-1

Public TV
By Public TV
7 hours ago
02 10
Big Bulletin

ಬಿಗ್‌ ಬುಲೆಟಿನ್‌ 12 January 2026 ಭಾಗ-2

Public TV
By Public TV
7 hours ago
03 10
Big Bulletin

ಬಿಗ್‌ ಬುಲೆಟಿನ್‌ 12 January 2026 ಭಾಗ-3

Public TV
By Public TV
7 hours ago
RCB
Cricket

WPL 2026 | ರಾಯಲ್‌ ಆಗಿ ವಾರಿಯರ್ಸ್‌ ಚಾಲೆಂಜ್‌ ಗೆದ್ದ ಬೆಂಗಳೂರು – ನಂ.1 ಪಟ್ಟಕ್ಕೆ ಜಿಗಿದ ಆರ್‌ಸಿಬಿ

Public TV
By Public TV
7 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?