– ಕರ್ನಾಟಕದಲ್ಲಿ ಸಾವಿನ ಸಂಖ್ಯೆ ಏಳಕ್ಕೆ ಏರಿಕೆ
ಕಲಬುರಗಿ: ಮಹಾಮಾರಿ ಕೊರೊನಾಗೆ ಕಲಬುರಗಿಯಲ್ಲಿ 55 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ.
ರೋಗಿ ನಂಬರ್ 205 ಇಂದು ಚಿಕಿತ್ಸೆ ಫಲಕಾರಿಯಾಗದೇ ಕಲಬುರಗಿ ನಗರದ ಇಎಸ್‍ಐ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ವ್ಯಕ್ತಿ ನಗರದ ಮೋಮಿನಪುರ ಬಡಾವಣೆಯ ನಿವಾಸಿಯಾಗಿದ್ದು, ತಬ್ಲಿಘಿ ಜೊತೆ ಸಂಪರ್ಕ ಹೊಂದಿದ್ದರು. ಏಪ್ರಿಲ್ 10ರಂದು ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದರಿಂದ ಇಎಸ್‍ಐ ಆಸ್ಪತ್ರೆಯಲ್ಲಿ ಪ್ರತ್ಯೇಕಗೊಳಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.
ಕಲಬುರಗಿ ಜಿಲ್ಲೆಯಿಂದ ಒಟ್ಟು 26 ಜನರು ದೆಹಲಿಯ ನಿಜಾಮುದ್ದೀನ್ ಮರ್ಕಜ್ ಗೆ ಹೋಗಿ ಬಂದಿದ್ದರು. ಈ 26 ಜನರ ವೈದ್ಯಕೀಯ ವರದಿ ನೆಗೆಟಿವ್ ಬಂದಿದೆ. ಸದ್ಯ ಮೃತಪಟ್ಟ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯನ್ನು ಜಿಲ್ಲಾಡಳಿತ ಕಲೆ ಹಾಕುತ್ತಿದೆ. ಕಲಬುರಗಿಯಲ್ಲಿ ಕೊರೊನಾಗೆ ಇದು ಮೂರನೇ ಸಾವಾಗಿದ್ದು, ಜಿಲ್ಲೆಯ ಜನತೆಯಲ್ಲಿ ಆತಂಕ ಮನೆ ಮಾಡಿದೆ.