ಲಾಕ್‍ಡೌನ್ ಉಲ್ಲಂಘನೆ – 118 ಮಂದಿ ವಿರುದ್ಧ ರೌಡಿಶೀಟ್ ಓಪನ್

Public TV
1 Min Read
glb sp iada

ಕಲಬುರಗಿ: ಮಹಾಮಾರಿ ಕೊರೊನಾ ವೈರಸ್ ಸೋಂಕು ಹರಡದಂತೆ ಮುಂಜಾಗ್ರತ ಕ್ರಮವಾಗಿ ಲಾಕ್‍ಡೌನ್ ಜಾರಿಗೊಳಿಸಲಾಗಿದೆ. ಆರಂಭದಿಂದ ಇಲ್ಲಿಯವರೆಗೆ ಲಾಕ್‍ಡೌನ್ ಉಲ್ಲಂಘಿಸಿದ ಜಿಲ್ಲೆಯ 118 ಮಂದಿ ವಿರುದ್ಧ ರೌಡಿಶೀಟ್ ತೆರೆಯಲಾಗಿದೆ ಎಂದು ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ತಿಳಿಸಿದ್ದಾರೆ.

ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿ ಹೊರತುಪಡಿಸಿ ಜಿಲ್ಲೆಯ ಆಳಂದ, ಅಫಜಲಪೂರ, ಜೇವರ್ಗಿ, ಚಿತ್ತಾಪೂರ, ಶಹಾಬಾದ, ಸೇಡಂ, ಮತ್ತು ಚಿಂಚೋಳಿ ತಾಲೂಕುಗಳ ವ್ಯಾಪ್ತಿಯಲ್ಲಿ ಲಾಕ್‍ಡೌನ್ ಉಲ್ಲಂಘಿಸಿದವರ ವಿರುದ್ಧ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇಲ್ಲಿಯವರೆಗೆ ಒಟ್ಟು 38 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

glb notice

ಈ ಪ್ರಕರಣಗಳಿಗೆ ಸಂಬಂಧಿಸಿದಂತೆ 122 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ರಸ್ತೆಯಲ್ಲಿ ಅನಾವಶ್ಯಕವಾಗಿ ಸಂಚರಿಸುತ್ತಿದ್ದ 659 ವಾಹನಗಳನ್ನು ವಶಕ್ಕೆ ಪಡೆದು 92,700 ರೂ. ದಂಡವನ್ನು ಸಹ ವಿಧಿಸಲಾಗಿದೆ ಎಂದು ಎಸ್.ಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಇಂದು ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *