– ಖಿನ್ನತೆಗೊಳಗಾಗದಂತೆ ಕ್ರಮ
– ಪೊಲೀಸರ ಕಾರ್ಯಕ್ಕೆ ಭಾರೀ ಮೆಚ್ಚುಗೆ
ಮುಂಬೈ: ಕೊರೊನಾ ವೈರಸ್ ನಿಂದಾಗಿ ಲಾಕ್‍ಡೌನ್ ಮಾಡಲಾಗಿದೆ. ಅಲ್ಲದೆ ಮಹಾರಾಷ್ಟ್ರದಲ್ಲಿ ದೇಶದಲ್ಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿರುವುದರಿಂದ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಇದರ ಮಧ್ಯೆ ನಾಗ್ಪುರ ಪೊಲೀಸರು ನಿರಾಶ್ರಿತ ಕೇಂದ್ರಗಳಲ್ಲಿ ಮನರಂಜನೆಗಾಗಿ ಉತ್ತಮ ವ್ಯವಸ್ಥೆ ಕಲ್ಪಿಸಿದ್ದಾರೆ.
ನಿರಾಶ್ರಿತರು ಒಂದೇ ಸ್ಥಳದಲ್ಲಿದ್ದು ಆತಂಕಕ್ಕೊಳಗಾಗಿದ್ದು, ಅವರ ಆತಂಕವನ್ನು ಕಡಿಮೆ ಮಾಡಿ ಮನರಂಜನೆ ನೀಡಲು ನಾಗ್ಪುರ ಪೊಲೀಸರು ಹೊಸ ಐಡಿಯಾ ಹುಡುಕಿದ್ದು, ನಿರಾಶ್ರಿತ ಕೇಂದ್ರಗಳಲ್ಲಿ ಓಪನ್ ಥಿಯೇಟರ್ ವ್ಯವಸ್ಥೆ ಕಲ್ಪಿಸಿದ್ದಾರೆ.
Watching a film redirects the attention and it’s an excellent way to decrease anxiety.
Nagpur Police has set up an open theatre at the Shelter Homes.#NagpurPolice#alwaysthere4u @ajaydevgn pic.twitter.com/YSDTbj149g
— Nagpur City Police (@NagpurPolice) April 20, 2020
ಈ ಸೋಮವಾರ ಟ್ವೀಟ್ ಮಾಡುವ ಮೂಲಕ ಪೊಲೀಸ್ ಇಲಾಖೆ ಮಾಹಿತಿ ಬಹಿರಂಗಪಡಿಸಿದ್ದು, ಈ ಕುರಿತು ವಿಡಿಯೋ ಅಪ್ಲೋಡ್ ಮಾಡುವ ಮೂಲಕ ಗಮನಸೆಳೆದಿದ್ದಾರೆ. ಓಪನ್ ಥಿಯೇಟರ್ನಲ್ಲಿ ಮೊದಲ ಸಿನಿಮಾ ಅಜಯ್ ದೇವಗನ್ ಹಾಗೂ ಕಾಜಲ್ ಅಭಿನಯದ ತಾನಾಜಿ ಸಿನಿಮಾ ಪ್ರಸಾರವಾಗಿದೆ. ಅಲ್ಲಿರುವ ಜನ ಸಹ ಮುಖಕ್ಕೆ ಮಾಸ್ಕ್ ಹಾಕಿ ಸಾಮಾಜಿಕ ಅಂತರ ಕಾಪಾಡಿಕೊಂಡು ಸಿನಿಮಾವನ್ನು ಎಂಜಾಯ್ ಮಾಡಿದ್ದಾರೆ.
ಒಂದೇ ಕಡೆ ಕೂತವರು ಚಲನಚಿತ್ರ ನೋಡುವುದರಿಂದಾಗಿ ಅವರ ಗಮನವನ್ನು ಬೇರೆಡೆ ಸೆಳೆಯುತ್ತದೆ. ಇದರಿಂದಾಗಿ ಆತಂಕ ಹಾಗೂ ಖಿನ್ನತೆಯಿಂದ ದೂರವಾಗಬಹುದು. ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ನಿರಾಶ್ರಿತರ ಕೇಂದ್ರಗಳಲ್ಲಿ ಓಪನ್ ಥಿಯೇಟರ್ ವ್ಯವಸ್ಥೆ ಮಾಡಲಾಗಿದೆ ಎಂದು ನಾಗ್ಪುರ ಸಿಟಿ ಪೊಲೀಸ್ ಕಾತೆಯಿಂದ ಟ್ವೀಟ್ ಮಾಡಲಾಗಿದೆ.
ಪೊಲೀಸರ ಈ ಕ್ರಮಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಕಮೆಂಟ್ ಹಾಗೂ ಲೈಕ್ ಮಾಡುವ ಮೂಲಕ ಪ್ರಶಂಸಿದ್ದಾರೆ. ಮಾನಸಿಕ ಖಿನ್ನತೆ ಕುರಿತು ಸಹ ಪೊಲೀಸರು ಯೋಚಿಸಿರುವುದು ತುಂಬಾ ಒಳ್ಳೆಯ ಬೆಳವಣಿಗೆ. ಪೊಲೀಸರಿಂದ ಉತ್ತಮ ಕಾರ್ಯವಾಗಿದೆ ಎಂದು ಕಮೆಂಟ್ ಮಾಡುತ್ತಿದ್ದಾರೆ. ಮತ್ತೊಬ್ಬರು ಈ ಕರಿತು ಪ್ರತಿಕ್ರಿಯಿಸಿ, ತುಂಬಾ ಒಳ್ಳೆಯ ನಿರ್ಧಾರ ಎಂದು ತಿಳಿಸಿದ್ದಾರೆ. ಹೀಗೆ ನಾಗ್ಪುರ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.