ಕೆಜಿಎಫ್ ನರಾಚಿ ಸೆಟ್ ದಿನಗಳನ್ನು ನೆನೆದ ಪ್ರಶಾಂತ್ ನೀಲ್

Public TV
2 Min Read
prashanth neel e1609760924735

ಬೆಂಗಳೂರು: ಕೆಜಿಎಫ್-2 ಚಿತ್ರದ ಕುರಿತು ಭಾರೀ ಕುತೂಹಲಗಳು ಮೂಡುತ್ತಿರುವ ಬೆನ್ನಲ್ಲೇ ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರು ಸೆಟ್‍ನಲ್ಲಿನ ಸಂದರ್ಭವನ್ನು ನೆನೆಪು ಮಾಡಿಕೊಂಡಿದ್ದಾರೆ. ಈ ವಿಡಿಯೋವನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದು, ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ.

EC thKWUUAAduAR

ಕೆಜಿಎಫ್ ಚಾಪ್ಟರ್-2 ಚಿತ್ರದ ಶೂಟಿಂಗ್ ಬಹುತೇಕ ಪೂರ್ಣಗೊಂಡಿದ್ದು, ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಅಕ್ಟೋಬರ್‍ನಲ್ಲಿ ತಿಂಗಳಲ್ಲಿ ಸಿನಿಮಾ ಬಿಡುಗಡೆಯಾಗಲಿದೆ ಎಂದು ಈಗಾಗಲೇ ಚಿತ್ರತಂಡ ಹೇಳಿಕೊಂಡಿದೆ. ಕೆಜಿಎಫ್ ಹಿಟ್ ಆದ ಬಳಿಕ ಇದೀಗ ಚಾಪ್ಟರ್-2 ಬಗ್ಗೆ ಕುತೂಹಲ ಹೆಚ್ಚಿದೆ. ಸಿನಿಮಾ ಬಿಡುಗಡೆಗಾಗಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಅದೇ ರೀತಿ ಪ್ರೇಕ್ಷಕರ ನಿರೀಕ್ಷೆಗೆ ತಕ್ಕಂತೆ ಚಾಪ್ಟರ್ 1ಕ್ಕಿಂತಲೂ ಅದ್ಭುತವಾಗಿ ಕಟ್ಟಿಕೊಡಲು ಚಿತ್ರತಂಡ ಶ್ರಮಿಸುತ್ತಿದೆ.

download

ಇದೆಲ್ಲದರ ಮಧ್ಯೆ ಪ್ರಶಾಂತ್ ನೀಲ್ ಅವರು ಇದೀಗ ಇನ್‍ಸ್ಟಾಗ್ರಾಮ್‍ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದು, ನರಾಚಿ ಸೆಟ್‍ನಲ್ಲಿ ತಾವು ಹೇಗೆಲ್ಲ ಮಜಾ ಮಾಡಿಕೊಂಡು ಚಿತ್ರೀಕರಣ ನಡೆಸಿದ್ದಾರೆ ಎಂಬುದನ್ನು ತಿಳಿಸಿದ್ದಾರೆ. ಕ್ರಿಕೆಟ್ ಆಡುತ್ತಿರುವ ವಿವಿಧ ಭಂಗಿಗಳ ವಿಡಿಯೋವನ್ನು ಅವರು ಹಂಚಿಕೊಂಡಿದ್ದು, ಇದರಲ್ಲಿ ಪ್ರಶಾಂತ್ ನೀಲ್ ಕೇವಲ ಬ್ಯಾಟ್‍ನ್ನು ಭರ್ಜರಿಯಾಗಿಯೇ ಬೀಸಿದ್ದಾರೆ. ಮೂರು ವಿಡಿಯೋ ತುಣುಕುಗಳನ್ನು ಹಾಕಿದ್ದು, ಒಂದು ವಿಡಿಯೋದಲ್ಲಿ ಬಾಲ್ ಎಸೆಯುತ್ತಿದ್ದರೆ, ಇನ್ನೊಂದು ವಿಡಿಯೋದಲ್ಲಿ ಬ್ಯಾಟಿಂಗ್ ಪ್ರದರ್ಶನ ತೋರಿಸಿದ್ದಾರೆ.

DrjU6ICVAAE8dSb

ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಮೂರು ವಿಡಿಯೋ ಕ್ಲಿಪ್‍ಗಳನ್ನು ಪೋಸ್ಟ್ ಮಾಡಿ ಬರೆದುಕೊಂಡಿರುವ ಅವರು, ನರಾಚಿ ಗ್ರೌಂಡ್‍ನಲ್ಲಿ ಕ್ರಿಕೆಟ್ ಆಡುತ್ತಿರುವುದು. ನೀಲ್ ಅವರಿಗೆ ಕ್ರಿಕೆಟ್ ಎಂದರೆ ಪಂಚಪ್ರಾಣ ಎಂಬುದು ತಿಳಿದೇ ಇದೆ. ಶಾಟ್ಸ್‍ಗಳ ಮಧ್ಯೆ ನೀಲ್ ಅವರ ಟೈಮ್ ಪಾಸ್. ಧೂಳು ಸಹ ಅವರು ಆಡುವುದನ್ನು ತಡೆಯಲಿಲ್ಲ ಎಂದಿದ್ದಾರೆ. ಅಲ್ಲದೆ ವಿಡಿಯೋ ಸೆರೆಹಿಡಿದಿರುವ ಕೊಂಡಾ ರೆಡ್ಡಿ ಅವರಿಗೆ ಥ್ಯಾಂಕ್ಯೂ ಎಂದಿದ್ದಾರೆ. ಹ್ಯಾಶ್‍ಟ್ಯಾಗ್‍ನೊಂದಿಗೆ ಕೆಜಿಎಫ್ ಶೂಟ್ ಡೈರೀಸ್ ಎಂದು ಬರೆದುಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಬಹುನಿರೀಕ್ಷಿತ ಕೆಜಿಎಫ್-2 ಸಿನಿಮಾ ಅಕ್ಟೋಬರ್ ತಿಂಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ತಿಳಿಸಿದೆ. ಯಶ್ ಅಭಿನಯದ ಈ ಚಿತ್ರದ ಭಾರೀ ನಿರೀಕ್ಷೆ ಮೂಡಿಸಿದ್ದು, ದೇಶ ವಿದೇಶಗಳಲ್ಲಿ ಚಿತ್ರದ ಕುರಿತು ಕುತೂಹಲ ಹೆಚ್ಚಿದೆ. ಬಾಲಿವುಡ್ ನಟರಾದ ಸಂಜಯ್ ದತ್ ಹಾಗೂ ರವೀನಾ ಟಂಡನ್ ಅವರು ಚಿತ್ರ ತಂಡ ಸೇರಿರುವುದು ಇನ್ನೂ ಕುತೂಹಲ ಹೆಚ್ಚಿಸದೆ. ಚಿತ್ರದ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *