ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ನಗರದ ಚನ್ನಪಟ್ಟಣ ಬಡಾವಣೆಯ ಡೈರಿ ಕ್ವಾರ್ಟರ್ಸ್ ನಲ್ಲಿ ನಡೆದಿದೆ.
ರೂಪ (38) ಮೊದಲು ತನ್ನ ಏಳು ವರ್ಷದ ಮಗಳು ಬಿಂದುವನ್ನು ಕೊಲೆ ಮಾಡಿ ನಂತರ ಆತ್ಮಹತ್ಯೆಗೆ ಶರಣಾಗಿದ್ದಾಳೆ. ರೂಪ ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ತನ್ನ ಮಗಳನ್ನು ಮೊದಲು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ನಂತರ ತಾನು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಪತಿ ಮನೆಯಲ್ಲಿ ಇಲ್ಲದಿದ್ದಾಗ ರೂಪ ಆತ್ಮಹತ್ಯೆ ಮಾಡಿಕೊಂಡಿದ್ದು, ನೆರೆಹೊರೆಯವರು ಮನೆಗೆ ಬಂದಾಗ ನೋಡಿ ತಕ್ಷಣ ಪೊಲೀಸರಿಗೆ ಫೋನ್ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಹಾಸನ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಸ್ಥಳದಲ್ಲಿ ಡೆತ್‍ನೋಟ್ ಪತ್ತೆಯಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.