Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಬೆಂಗಳೂರಿಗೆ ವಿಮಾನ ಹಾರಾಟ ಬೇಡ- ಪ್ರಧಾನಿ ಮೋದಿಗೆ ಸಿಎಂ ಬಿಎಸ್‍ವೈ ಸಲಹೆ!

Public TV
Last updated: May 11, 2020 8:57 pm
Public TV
Share
4 Min Read
CM BSY PM MODI
SHARE

ಬೆಂಗಳೂರು: ಕಂಟೈನ್ಮೆಂಟ್ ಝೋನ್‍ಗಳಿಗಷ್ಟೇ ಲಾಕ್‍ಡೌನ್ ಸೀಮಿತ ಮಾಡಿ ಎಂದು ದೇಶದ ಬಹುತೇಕ ಮುಖ್ಯಮಂತ್ರಿಗಳು ಇಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲಹೆ ನೀಡಿದ್ದಾರೆ. ಇತ್ತ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪ್ರಧಾನ ಮಂತ್ರಿಯವರ ವಿಡಿಯೋ ಕಾನ್ಫರೆನ್ಸ್  ನಲ್ಲಿ ಕರ್ನಾಟಕದ ಸಲಹೆಗಳನ್ನು ಮುಂದಿಟ್ಟಿದ್ದು, ಜಿಲ್ಲಾವಾರು ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳನ್ನು ಗುರುತಿಸಬಾರದು. ಕಂಟೈನ್ಮೆಂಟ್ ವಲಯಗಳನ್ನು ಮಾತ್ರ ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು ಎಂಬ ಸಲಹೆಗಳನ್ನು ನೀಡಿದ್ದಾರೆ.

CM BSY PM MODI a

ಸಿಎಂ ಬಿಎಸ್‍ವೈ ಮುಖ್ಯಮಂತ್ರಿಗಳು ಮಂಡಿಸಿದ ಅಂಶಗಳು: ಕನಿಷ್ಠ ಮೇ ಅಂತ್ಯದವರೆಗೆ ದೇಶದಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣಗಳನ್ನು ಪ್ರಾರಂಭಿಸಬಾರದು. ಅಂತರರಾಷ್ಟ್ರೀಯ ಪ್ರಯಾಣಿಕರನ್ನು ಕಡ್ಡಾಯವಾಗಿ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್‍ಗೆ ಒಳಪಡಿಸಬೇಕು. ಅಂತರರಾಜ್ಯ ಪ್ರಯಾಣಿಕರನ್ನು ಸಹ ಕಡ್ಡಾಯವಾಗಿ ಸಾಂಸ್ಥಿಕ ಕ್ವಾರಂಟೈನ್ ಮತ್ತು ಪರೀಕ್ಷೆಗೆ ಒಳಪಡಿಸಬೇಕು. ಅಂತರರಾಜ್ಯ ಪ್ರಯಾಣಿಕರು ತಾವು ಹೊರಡುವ ಸ್ಥಳದಲ್ಲಿ ಆರೋಗ್ಯ ಪ್ರಮಾಣ ಪತ್ರವನ್ನು ಸ್ಥಳೀಯ ಆರೋಗ್ಯ ಅಧಿಕಾರಿಗಳಿಂದ ಪಡೆದುಕೊಳ್ಳಬೇಕು. ಆರೋಗ್ಯ ಪ್ರಮಾಣ ಪತ್ರ ಹೊಂದಿಲ್ಲದವರನ್ನು ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿ ಇರಿಸಬೇಕು.

ಜಿಲ್ಲಾವಾರು ಕೆಂಪು, ಕಿತ್ತಳೆ ಮತ್ತು ಹಸಿರು ವಲಯಗಳನ್ನು ಗುರುತಿಸಬಾರದು. ಕಂಟೈನ್ಮೆಂಟ್ ವಲಯಗಳನ್ನು ಮಾತ್ರ ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಕ್ಲಸ್ಟರ್ ಗಳ ಸುತ್ತಲಿನ 50 ರಿಂದ 100 ಮೀಟರ್ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಘೋಷಿಸಬೇಕು. ಇತರ ಸ್ಥಳಗಳಲ್ಲಿ ವಾಣಿಜ್ಯ ಚಟುವಟಿಕೆಗಳು ಹಾಗೂ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಬೇಕು. ಇದರಿಂದ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಸಾಧ್ಯವಾಗುವುದಲ್ಲದೆ, ರಾಜ್ಯಗಳು ಹಣಕಾಸು ಬಿಕ್ಕಟ್ಟಿನಿಂದ ಹೊರಬರಲು ಸಾಧ್ಯವಾಗುತ್ತದೆ.

Participated in the Video Conference held by PM Shri @NarendraModi with Chief Ministers of all states. Strategy to tackle #Covid19 & measures to be taken for relaxation of lockdown were discussed. My cabinet colleagues and senior officials were present. pic.twitter.com/phTQTcAUKP

— B.S. Yediyurappa (@BSYBJP) May 11, 2020

ಕೋವಿಡ್-19ರ ಹಿನ್ನೆಲೆಯಲ್ಲಿ ಇತರ ವೈದ್ಯಕೀಯ ಚಿಕಿತ್ಸೆಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಖಾಸಗಿ ಆಸ್ಪತ್ರೆಗಳು, ಚಿಕಿತ್ಸಾಲಯಗಳು ನಾನ್ ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಕಾರ್ಯನಿರ್ವಹಿಸುವ ಕುರಿತು ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು. ಪರೀಕ್ಷೆ ನಡೆಸುವ ಕುರಿತು ಒಂದು ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಬೇಕು. ಪ್ರತಿ 10 ಲಕ್ಷಕ್ಕೆ ಕನಿಷ್ಠ ಎಷ್ಟು ಪರೀಕ್ಷೆ ನಡೆಸಬೇಕು ಎಂದು ಈ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಬೇಕು. ಕೇವಲ ಸೋಂಕಿನ ಲಕ್ಷಣ ಹೊಂದಿರುವವರು ಮತ್ತು ಆಸ್ಪತ್ರೆಗೆ ದಾಖಲಾಗುವ ಅಗತ್ಯ ಹೊಂದಿರುವವರಿಗೆ ಮಾತ್ರ ಪರೀಕ್ಷೆ ನಡೆಸಬೇಕು.

ಈ ಸೋಂಕಿಗೆ ಚಿಕಿತ್ಸೆ ನೀಡಲು ಟೆಲಿ-ಮೆಡಿಸಿನ್ ಅನ್ನು ವ್ಯಾಪಕವಾಗಿ ಬಳಸಬೇಕು. ತೀವ್ರ ರೋಗ ಲಕ್ಷಣ ಹೊಂದಿರುವವರನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಬೇಕು. ಸಾಮಾಜಿಕ ಅಂತರ, ಮಾಸ್ಕ್ ಬಳಕೆ, ಕೈತೊಳೆಯವುದು, ವೈಯಕ್ತಿಕ ಮತ್ತು ಸಾಮುದಾಯಿಕ ಶುಚಿತ್ವ ಕಾಪಾಡಿಕೊಳ್ಳುವುದು ಮೊದಲಾದ ಅಭ್ಯಾಸಗಳ ಮೂಲಕ ಹೊಸ ಜೀವನ ಶೈಲಿಯನ್ನು ರೂಢಿಸಿಕೊಳ್ಳುವುದು.

PM MODI

ಮೀಡಿಯಾ ಬುಲೆಟಿನ್‍ಗಳಲ್ಲಿ ಸಕ್ರಿಯ ಪ್ರಕರಣಗಳು ಮತ್ತು ಗುಣಮುಖರಾದ ಪ್ರಕರಣಗಳ ವಿವರ ಇರಬೇಕು. ಒಟ್ಟಾರೆ ಪ್ರಕರಣಗಳ ಸಂಖ್ಯೆಯ ಮಾಹಿತಿ ಜನರಲ್ಲಿ ಆತಂಕ ಸೃಷ್ಟಿಸುವ ಸಾಧ್ಯತೆ ಇದೆ. ಮಧ್ಯಮ ಮತ್ತು ತೀವ್ರ ಸೋಂಕಿನ ಲಕ್ಷಣ ಹೊಂದಿರುವ ರೋಗಿಗಳನ್ನು ಮಾತ್ರ ಆಸ್ಪತ್ರೆಗೆ ದಾಖಲಿಸಬೇಕು. ರೋಗ ಲಕ್ಷಣಗಳಿಲ್ಲದ ಅಥವಾ ತೀವ್ರವಲ್ಲದ ಪ್ರಕರಣಗಳಲ್ಲಿ ಮನೆಯಲ್ಲಿಯೇ ಕಟ್ಟು ನಿಟ್ಟಿನ ಐಸೋಲೇಷನ್ ನಲ್ಲಿರುವ ಮೂಲಕ ಹಾಗೂ ಟೆಲಿ-ಮೆಡಿಸಿನ್ ಮೂಲಕ ಚಿಕಿತ್ಸೆ ಪಡೆಯಲು ಸಲಹೆ ನೀಡಬಹುದು. 60 ವರ್ಷಕ್ಕೂ ಮೇಲ್ಪಟ್ಟವರು ಮತ್ತು 10 ವರ್ಷದೊಳಗಿನವರು ಮನೆಯೊಳಗೇ ಸುರಕ್ಷಿತವಾಗಿರುವಂತೆ ಸಲಹೆ ನೀಡಬೇಕು.

ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಾಲ್ಕು ಟಿ ಗಳು (ಟ್ರೇಸಿಂಗ್, ಟ್ರಾಕಿಂಗ್, ಟೆಸ್ಟಿಂಗ್ ಅಂಡ್ ಟ್ರೀಟಿಂಗ್) ಪ್ರಮುಖ ಪಾತ್ರ ವಹಿಸಿವೆ. ರಾಜ್ಯದಲ್ಲಿ ಪ್ರಸ್ತುತ 35 ಪ್ರಯೋಗಾಲಯಗಳಲ್ಲಿ ದಿನಕ್ಕೆ 6 ಸಾವಿರ ಪರೀಕ್ಷೆ ನಡೆಸುವ ಸಾಮರ್ಥ್ಯ ಹೊಂದಿದೆ. ರಾಜ್ಯದಲ್ಲಿ 1 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ ತಿಂಗಳ ಅಂತ್ಯದಲ್ಲಿ 60 ಪ್ರಯೋಗಾಲಯಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ.

PM MODI a

ರಾಜೀವ್ ಗಾಂಧಿ ಆರೋಗ್ಯ ವಿವಿ ವತಿಯಿಂದ 93,723 ಆರೋಗ್ಯ ಕಾರ್ಯಕರ್ತರಿಗೆ ಆನ್‍ಲೈನ್ ತರಬೇತಿ ನೀಡಲಾಗಿದೆ. ರಾಜ್ಯದಲ್ಲಿ 58 ಲಕ್ಷಕ್ಕೂ ಹೆಚ್ಚು ಜನರು ಆರೋಗ್ಯ ಸೇತು ಆ್ಯಪ್‍ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಜನರನ್ನು ಹೊಸ ಜೀವನ ಶೈಲಿ ಅಳವಡಿಸಲು ಜಾಗೃತಿ ಮೂಡಿಸಿ, ಮನ ಒಲಿಸಬೇಕು. ಕೋವಿಡ್-19 ಕುರಿತು ಜನರ ಪೂರ್ವಾಗ್ರಹಗಳನ್ನು ತೊಡೆಯಲು ಇದು ಫ್ಲೂ ನಂತೆಯೇ ಒಂದು ವೈರಲ್ ಸೋಂಕು, ಆದರೆ ಇತರ ದೀರ್ಘಕಾಲಿಕ ಕಾಯಿಲೆಯಿಂದ ಬಳಲುತ್ತಿರುವವರಿಗೆ ಅಪಾಯಕಾರಿ ಎಂಬ ಅರಿವು ಮೂಡಿಸಬೇಕು.

ಪ್ರಧಾನಿ ಮೋದಿ ಸಲಹೆ ಏನು?: ಕೇಂದ್ರ, ರಾಜ್ಯ ಸರ್ಕಾರಗಳು ಒಟ್ಟಾಗಿ ಕೆಲಸ ಮಾಡಬೇಕಿದೆ. ರಾಜ್ಯಗಳ ಕಾರ್ಯದರ್ಶಿಗಳ ಜೊತೆ ಕ್ಯಾಬಿನೆಟ್ ಕಾರ್ಯದರ್ಶಿ ನಿರಂತರ ಸಂಪರ್ಕದಲ್ಲಿದ್ದಾರೆ. ಕೊರೊನಾ ಹರಡದಂತೆ ತೀವ್ರ ನಿಗಾ ಇಡಿ. ಸ್ಥಗಿತಗೊಳಿಸಿರುವ ಕೆಲಸ ಕಾರ್ಯಗಳನ್ನು ಆರಂಭಿಸಿ. ಸಮತೋಲಿತ ಕಾರ್ಯತಂತ್ರದೊಂದಿಗೆ ಮುಂದುವರಿಯಿರಿ. ಯಾವ ಹಾದಿಯಲ್ಲಿ ಕೆಲಸ ಮಾಡಬೇಕೆಂಬುದನ್ನು ನಿರ್ಧರಿಸಿ.

ಎಲ್ಲರ ಸಲಹೆಗಳಿಂದ ಮಾರ್ಗಸೂಚಿಯನ್ನು ರೂಪಿಸಲಾಗುತ್ತೆ. ಈ ಬಿಕ್ಕಟ್ಟಿನಿಂದ ರಕ್ಷಿಸಿಕೊಳ್ಳುವಲ್ಲಿ ಭಾರತ ಬಹಳಮಟ್ಟಿಗೆ ಯಶಸ್ವಿಯಾಗಿದೆ. 2 ಮೀಟರ್ ಅಡಿ ನಿಯಮ ಸಡಿಲವಾಗಿದ್ದರೆ ಬಿಕ್ಕಟ್ಟು ಹೆಚ್ಚಾಗ್ತಿತ್ತು. ವಲಸೆ ಕಾರ್ಮಿಕರು ಸ್ವಗ್ರಾಮಗಳಿಗೆ ಹೋಗಬಯಸೋದು ಸ್ವಾಭಾವಿಕ. ವಲಸೆ ಕಾರ್ಮಿಕರು ಇದ್ದಲ್ಲೇ ಅವರಿಗೆ ವ್ಯವಸ್ಥೆ ಕಲ್ಪಿಸಬೇಕಿತ್ತು. ಸಾಮಾಜಿಕವಾಗಿ ಈ ಪಾಸಿಟಿವ್ ಕುಟುಂಬಗಳನ್ನು ಹೀನಾಯವಾಗಿ ನೋಡಲಾಗುತ್ತಿದೆ. ಗ್ರಾಮೀಣ ಪ್ರದೇಶಕ್ಕೆ ವೈರಸ್ ಹರಡದಂತೆ ಎಚ್ಚರಿಕೆ ವಹಿಸಿ ಎಂದು ಪ್ರಧಾನಿ ಮೋದಿ ಸಲಹೆ ನೀಡಿದ್ದಾರೆ.

TAGGED:bengaluruCM BS YeddyurappaPM ModiPublic TVಪಬ್ಲಿಕ್ ಟಿವಿಪ್ರಧಾನಿ ಮೋದಿಬೆಂಗಳೂರುಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Is Dhanush Dating Mrunal Thakur
ಧನುಶ್ ಜೊತೆ ಮೃಣಾಲ್ ಠಾಕೂರ್ ಡೇಟಿಂಗ್?
Cinema Karnataka Latest
Actress Sumalatha condoles the death of Malayalam Actor Shanawas
ʼಕೇರಂ, ಬ್ಯಾಡ್ಮಿಂಟನ್ ಆಡುವಾಗ ಸೆಕೆಂಡ್‍ನಲ್ಲಿ ಸೋಲಿಸುತ್ತಿದ್ದರು’- ಸುಮಲತಾ ನೆನಪು ಹಂಚಿಕೊಂಡಿದ್ದು ಯಾರ ಬಗ್ಗೆ?
Cinema Latest South cinema Top Stories
janaki vs state of kerala
ಜಾನಕಿ V v/s ಸ್ಟೇಟ್ ಆಫ್ ಕೇರಳ ಚಿತ್ರ ಸ್ಟ್ರೀಮಿಂಗ್: ಸ್ವಾತಂತ್ರ್ಯ ದಿನಕ್ಕೆ ಗಿಫ್ಟ್
Cinema Latest South cinema Top Stories
Santhosh balaraj 1
ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ನಿಧನ
Cinema Latest Sandalwood Top Stories
Ramya Prajwal Devaraj
ರಮ್ಯಾಗೆ ಅಶ್ಲೀಲ ಮೆಸೇಜ್ ಕೇಸ್: ಪ್ರಜ್ವಲ್ ಕಿಡಿ
Cinema Latest Sandalwood Top Stories

You Might Also Like

big bulletin 05 August 2025 part 2
Big Bulletin

ಬಿಗ್‌ ಬುಲೆಟಿನ್‌ 05 August 2025 ಭಾಗ-2

Public TV
By Public TV
27 minutes ago
big bulletin 05 August 2025 part 3
Big Bulletin

ಬಿಗ್‌ ಬುಲೆಟಿನ್‌ 05 August 2025 ಭಾಗ-3

Public TV
By Public TV
30 minutes ago
Uttarakhand Cloudburst
Districts

ಉತ್ತಾರಾಖಂಡದಲ್ಲಿ ಪ್ರವಾಹ – ಕಲಬುರಗಿ ಜಿಲ್ಲಾಡಳಿತದಿಂದ ಸಹಾಯವಾಣಿ ಕೇಂದ್ರ ಆರಂಭ

Public TV
By Public TV
39 minutes ago
ARMY
Districts

ಗಡಿಯಲ್ಲಿ ಯಾವುದೇ ಕದನ ವಿರಾಮ ಉಲ್ಲಂಘನೆಯಾಗಿಲ್ಲ: ಭಾರತೀಯ ಸೇನೆ

Public TV
By Public TV
39 minutes ago
IndianArmy
Latest

ಆಪರೇಷನ್‌ ಸಿಂಧೂರ ಬಳಿಕ ಮೊದಲ ಬಾರಿಗೆ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ

Public TV
By Public TV
41 minutes ago
Uttarakashi Cloudburst army camp
Latest

ಉತ್ತರಕಾಶಿಯಲ್ಲಿ ಮೇಘಸ್ಫೋಟ – ಆರ್ಮಿ ಕ್ಯಾಂಪ್‌ನಲ್ಲಿದ್ದ 10ಕ್ಕೂ ಅಧಿಕ ಸೈನಿಕರು ನಾಪತ್ತೆ

Public TV
By Public TV
50 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?