ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಈ ನಡುವೆ ಕೇಂದ್ರ ಸಚಿವರ ತಂಡ ಸಭೆ ನಡೆಸಲಿದೆ.
ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಸಂಜೆ ಐದು ಗಂಟೆಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ರಾಸಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದಗೌಡ, ವಿದೇಶಾಂಗ ಸಚಿವ ಜೈಶಂಕರ್, ರೈಲ್ವೆ ಸಚಿವ ಪಿಯೂಷ್ ಗೋಯಲ್, ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಪುರಿ ಭಾಗಿಯಾಗಲಿದ್ದಾರೆ.
ಪ್ರಸುತ್ತ ದೇಶದಲ್ಲಿ ಏರಿಕೆಯಾಗುತ್ತಿರುವ ಸೋಂಕು ಮತ್ತು ಲಾಕ್‍ಡೌನ್ ವಿನಾಯತಿಗಳ ಬಗ್ಗೆ ಚರ್ಚೆ ನಡೆಯಲಿದೆ. ರೈಲು ಮತ್ತು ವಿಮಾನ ಸಂಚಾರಕ್ಕೆ ಅವಕಾಶ, ಕೇಂದ್ರದ ವಿಶೇಷ ಆರ್ಥಿಕ ಪ್ಯಾಕೇಜ್ ಅನುಷ್ಠಾನ ಹಾಗೂ ಮುಂಗಾರು ಮಳೆ ಆರಂಭಾಗುತ್ತಿದೆ. ಹೀಗಾಗಿ ದೇಶದಲ್ಲಿ ಭಿತ್ತನೆ ಬೀಜ ಹಾಗೂ ರಸಗೊಬ್ಬರಗಳ ವಿತರಣೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಯಲಿದೆ.