ರಾಮನಗರ: ನಾನು ರೈತ ಬ್ರದರ್ ಈ ಹಿಂದೆ ಹೊಲ ಉಳುಮೆ ಮಾಡುತ್ತಿದ್ದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿ ಟ್ರ್ಯಾಕ್ಟರ್ ಚಾಲನೆ ಮಾಡಿದ್ದಾರೆ.
ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಸುಣ್ಣಘಟ್ಟ ಗ್ರಾಮದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಟ್ರ್ಯಾಕ್ಟರ್ ಚಾಲನೆ ಮಾಡುವ ಮೂಲಕ ಕೃಷಿ ಯಂತ್ರೋಪಕರಣಗಳ ಬಾಡಿಗೆ ಕೇಂದ್ರ ಉದ್ಘಾಟಿಸಿದ್ದಾರೆ.
ಕುಮಾರಸ್ವಾಮಿ ಸ್ವತಃ ಅವರೇ ಟ್ರ್ಯಾಕ್ಟರ್ ಚಾಲನೆ ಮಾಡಿ ಕೃಷಿ ಯಂತ್ರೋಪಕರಣಗಳ ಬಾಡಿಗೆ ಕೇಂದ್ರ ಉದ್ಘಾಟನೆ ಮಾಡಿದ್ದಾರೆ. ಈ ವೇಳೆ “ನಾನು ರೈತ ಬ್ರದರ್ ಈ ಹಿಂದೆ ಹೊಲ ಉಳುಮೆ ಮಾಡುತ್ತಿದ್ದೆ. ಇತ್ತೀಚೆಗೆ ಮರೆತಿದ್ದೇನೆ ಅಷ್ಟೆ” ಎನ್ನುತ್ತಾ ಟ್ರ್ಯಾಕ್ಟರ್ ಚಾಲನೆ ಮಾಡಿದ್ದಾರೆ.
ಈ ವಿಡಿಯೋವನ್ನು ಕುಮಾರಸ್ವಾಮಿ ತಮ್ಮ ಫೇಸ್‍ಬುಕ್ ಪೇಜಿನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಜೊತೆಗೆ “ಚನ್ನಪಟ್ಟಣ ತಾಲೂಕಿನ ಸುಣ್ಣಘಟ್ಟ ಗ್ರಾಮದಲ್ಲಿ ಕೃಷಿ ಇಲಾಖೆಯಿಂದ ಏರ್ಪಡಿಸಿರುವ ಯಂತ್ರದಾರೆ ಕಾರ್ಯಕ್ರಮದಲ್ಲಿ ಟ್ರ್ಯಾಕ್ಟರ್ ಓಡಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದೆ” ಎಂದು ಬರೆದುಕೊಂಡಿದ್ದಾರೆ.
ಇದೇ ವೇಳೆ ಮಾಧ್ಯಮಗಳ ಮಾತನಾಡಿದ ಕುಮಾರಸ್ವಾಮಿ, ನಾನು ಯಾರ ಋಣದಲ್ಲೂ ಸಿಎಂ ಆಗಿರಲಿಲ್ಲ. ಅವರೆ ನನ್ನ ಮನೆ ಬಾಗಿಲಿಗೆ ಬಂದು ನೀವೆ ಸಿಎಂ ಆಗಿ ಅಂತ ಕೇಳಿಕೊಂಡಿದರು. ಕೆಲ ನಾಯಕರು ರಾಮನಗರದಲ್ಲಿ ಕಾಂಗ್ರೆಸ್ ಪಕ್ಷವನ್ನ ಅಧಿಕಾರಕ್ಕೆ ತರಲು ಹೊರಟ್ಟಿದ್ದಾರೆ. ಕುಮಾರಸ್ವಾಮಿ ಅವರನ್ನ ಸಿಎಂ ಮಾಡಿ ಕೆಲವರು ಬಾರಿ ಬೆಂಬಲ ಕೊಟ್ಟಿದ್ದರು. ನಾನು ಯಾರಿಂದ ಅಧಿಕಾರ ಕಳೆದುಕೊಂಡೆ ಅಂತ ನನಗೆ ಗೊತ್ತು. ಕೆಲವರು ಕುಮಾರಸ್ವಾಮಿ ಅವರನ್ನ ಉಳಿಸಿದ್ದೆ ನಾವು ಎಂದು ಪ್ರಚಾರ ಪಡೆದುಕೊಂಡಿದ್ದಾರೆ ಅಂತಾನು ಗೊತ್ತು. ಇದೀಗ ನಮ್ಮ ಪಕ್ಷ ಮುಗಿಸುತ್ತೇವೆ ಎಂದು ಕೆಲವರು ಹೊರಟ್ಟಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ನಾಯಕರ ಹೆಸರೇಳದೆ ವಾಗ್ದಾಳಿ ನಡೆಸಿದರು.
https://www.facebook.com/hdkumaraswamy/videos/251559232966036/