ಚಾಮರಾಜನಗರ: ಮಗುವನ್ನು ಕೊಂದು ತಾಯಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದಲ್ಲಿ ನಡೆದಿದೆ.
ಪಾಳ್ಯ ಗ್ರಾಮದ ಸಂಗೀತಾ(23) ಮೃತ ದುರ್ದೈವಿ. ಸಂಗೀತಾ ತನ್ನ ಮೂರು ವರ್ಷದ ಮಗ ಕರಣ್‍ನನ್ನು ಸಾಯಿಸಿ ನೀರಿಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ಸಂಗೀತಾ ಬೆಂಗಳೂರು ನಿವಾಸಿಯಾಗಿದ್ದು, ಕಳೆದ 6 ವರ್ಷದ ಹಿಂದೆ ಮಂಜು ಎಂಬಾತನೊಂದಿಗೆ ಪ್ರೇಮ ವಿವಾಹವಾಗಿದ್ದಳು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಗ್ರಾಮದ ಮಹದೇಶ್ವರ ದೇಗುಲಕ್ಕೆ ತೆರಳುತ್ತೇನೆಂದು ಹೇಳಿ ಬೆಳಗ್ಗೆ ಮನೆಯಿಂದ ಬಂದಿದ್ದಳು ಎನ್ನಲಾಗಿದ್ದು, ಸಾವಿಗೆ ಕಾರಣ ನಿಗೂಢವಾಗಿದೆ. ಸದ್ಯ ಕೊಳ್ಳೇಗಾಲ ಗ್ರಾಮಾಂತರ ಠಾಣೆಯ ಸಿಪಿಐ ಶ್ರೀಕಾಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತ ಸಂಗೀತಾ ಹಾಗೂ ಮಗುವಿ ದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದಾರೆ.
ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.