ಬೆಂಗಳೂರು: ಸಣ್ಣ ಪುಟ್ಟ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸುವುದನ್ನು ಪೊಲೀಸರು ಕೈಬಿಟ್ಟಿದ್ದಾರೆ ಎನ್ನಲಾಗುತ್ತಿದೆ.
ಹೌದು. ಇಲ್ಲಿಯವರೆಗೆ ಸಣ್ಣ ಪುಟ್ಟ ಹೊಡೆದಾಟದ ಆರೋಪಿಗಳನ್ನು ಪೊಲೀಸರು ಬಂಧಿಸುತ್ತಿದ್ದರು. ಆದರೆ ಈಗ ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸುತ್ತಿಲ್ಲ. ನೈಟ್ ಬೀಟ್ ಅಲ್ಲಿ ಕೂಡ ಅನಾವಶ್ಯಕವಾಗಿ ಆರೋಪಿಗಳನ್ನು ಠಾಣೆಗೆ ಎಳೆದು ತರುತ್ತಿಲ್ಲ.
ಪದೇ ಪದೇ ಆರೋಪಿಗಳಿಗೆ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಪೊಲೀಸರೇ ಸ್ವಯಂ ಪ್ರೇರಿತವಾಗಿ ಈ ಮಾರ್ಗ ಅನುಕರಣೆ ಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಪೊಲೀಸರೇ ಸ್ವಯಂ ಪ್ರೇರಿತವಾಗಿ ಸಣ್ಣ ಪುಟ್ಟ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ.
7 ವರ್ಷ ಮೇಲ್ಪಟ್ಟ ಶಿಕ್ಷೆಯ ಆರೋಪಿಗಳ ಬಂಧನಕ್ಕೆ ಮಾತ್ರ ಪೊಲೀಸರು ಒಲವು ವ್ಯಕ್ತಪಡಿಸುತ್ತಿದ್ದಾರೆ. ದೊಡ್ಡ ಪ್ರಕರಣಗಳಲ್ಲಿ ಬಂಧಿಸಿದ್ರೆ ಅವರನ್ನು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗುತ್ತದೆ. ಕೊಲೆ, ಕೊಲೆ ಯತ್ನ, ರಾಬರಿ, ಇಂತಹ ದೊಡ್ಡ ಪ್ರಕರಣಗಳಲ್ಲಿ ಮಾತ್ರ ಈಗ ಆರೋಪಿಗಳ ಬಂಧನವಾಗುತ್ತಿದೆ.
ಮೊಬೈಲ್ ಆ್ಯಪ್ ಮೂಲಕ ನಕಲಿ ಜಿಪಿಎಸ್ ಸೃಷ್ಟಿಸಿ ಗ್ರಾಹಕರ ಸೋಗಿನಲ್ಲಿ ಕ್ಯಾಬ್ ಬುಕ್ಕಿಂಗ್ ಮಾಡಿ ಓಲಾ ಕಂಪನಿಯನ್ನು ವಂಚಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ಪೈಕಿ ಒಬ್ಬನಿಗೆ ಕೊರೊನಾ ಇರುವುದು ದೃಢಪಟ್ಟಿತ್ತು. ಹೀಗಾಗಿ ಸಿಸಿಬಿ ಕಚೇರಿಯನ್ನು ತಾತ್ಕಾಲಿಕವಾಗಿ ಸೀಲ್‌ಡೌನ್ ಮಾಡಲಾಗಿತ್ತು.