Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ರಾಮದಲ್ಲಿ ಕೊರೊನಾ ಸೋಂಕಿತ- ಹಳ್ಳಿ ಬಿಟ್ಟು ಜಮೀನು ಸೇರಿದ ಜನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಗ್ರಾಮದಲ್ಲಿ ಕೊರೊನಾ ಸೋಂಕಿತ- ಹಳ್ಳಿ ಬಿಟ್ಟು ಜಮೀನು ಸೇರಿದ ಜನ

Corona

ಗ್ರಾಮದಲ್ಲಿ ಕೊರೊನಾ ಸೋಂಕಿತ- ಹಳ್ಳಿ ಬಿಟ್ಟು ಜಮೀನು ಸೇರಿದ ಜನ

Public TV
Last updated: June 17, 2020 7:38 am
Public TV
Share
2 Min Read
ygr villagers
SHARE

– ಹೊಲಗಳಲ್ಲಿ ತಾತ್ಕಾಲಿಕ ಶೆಡ್ ನಿರ್ಮಿಸಿ ವಾಸ
– ಕೊರೊನಾಗೆ ಸೆಡ್ಡು ಹೊಡೆದ ಗ್ರಾಮಸ್ಥರು

ಯಾದಗಿರಿ: ರಾಜಕಾರಣಿಗಳು ಬೇಕಾಬಿಟ್ಟಿಯಾಗಿ ದೊಡ್ಡ ಸಮಾರಂಭದಲ್ಲಿ ಭಾಗವಹಿಸುವ ಮೂಲಕ ಲಾಕ್‍ಡೌನ್ ನಿಯಮ ಉಲ್ಲಂಘಿಸಿ, ಸಾಮಾಜಿಕ ಅಂತರ ಕಾಪಾಡುವುದು, ಮಾಸ್ಕ್ ಧರಿಸುವುದನ್ನು ನಿರ್ಲಕ್ಷಿಸುತ್ತಿದ್ದಾರೆ. ಇನ್ನೊಂದೆಡೆ ಕೊರೊನಾ ತಡೆಗೆ ಲಸಿಕೆ ಸಂಶೋಧನೆಯಾಗಿಲ್ಲ. ಹೀಗಿರುವಾಗ ಸಾಮಾಜಿಕ ಅಂತರವೇ ಮಹಾಮಾರಿ ತಡೆಗೆ ಆಯುಧವಾಗಿದೆ. ಇದನ್ನರಿತ ಗ್ರಾಮಸ್ಥರು ಕೊರೊನಾ ಬಂದ ಹಿನ್ನೆಲೆ ಹಳ್ಳಿ ಬಿಟ್ಟು ಜಮೀನು ಸೇರಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.

vlcsnap 2020 06 17 07h28m13s234

ಕೊರೊನಾಗೆ ಸದ್ಯ ಔಷಧಿ ಇಲ್ಲ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ಅನುಸರಿಸುವುದು ಅನಿವಾರ್ಯವಾಗಿದೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವ ಮೂಲಕ ಕೊರೊನಾ ವಿರುದ್ಧ ಹೋರಾಡಬಹುದಾಗಿದೆ. ಈ ಕುರಿತು ಸರ್ಕಾರ ಸಹ ಸಾರಿ ಸಾರಿ ಹೇಳುತ್ತಿದೆ. ಆದರೆ ಸುಕ್ಷಿತರೂ ಸೇರಿದಂತೆ ಹಲವರು ಈ ಕುರಿತು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಆದರೆ ಜಿಲ್ಲೆಯ ಶಹಪುರ ತಾಲೂಕಿನ ಚಂದಾಪುರತಾಂಡಾದ 40ಕ್ಕೂ ಅಧಿಕ ಕುಟುಂಬಗಳು ತಮ್ಮ ಗ್ರಾಮವನ್ನು ತೊರೆದು, ಕಳೆದ ಒಂದು ತಿಂಗಳಿನಿಂದ ಹೊಲಗಳಲ್ಲಿ ತಾತ್ಕಾಲಿಕ ಶೆಡ್‍ಗಳನ್ನು ನಿರ್ಮಿಸಿಕೊಂಡು ಕುಟುಂಬ ಸಮೇತರಾಗಿ ಅಲ್ಲೇ ವಾಸಿಸುತ್ತಿದ್ದಾರೆ.

ಈ ತಾಂಡದ ವ್ಯಕ್ತಿಗೆ ಮೇ 17 ರಂದು ಕೊರೊನಾ ಪಾಸಿಟಿವ್ ಪತ್ತೆಯಾಗಿತ್ತು. ಇದರಿಂದ ಗ್ರಾಮದಲ್ಲಿ ಕೊರೊನಾ ವ್ಯಾಪಕವಾಗಿ ಹರಡುವ ಭೀತಿ ಉಂಟಾಗಿತ್ತು. ಸ್ಥಳೀಯ ಗ್ರಾ.ಪಂ.ಯಿಂದ ಜನರಲ್ಲಿ ಜಾಗೃತಿ ಮೂಡಿಸಲಾಗಿತ್ತು. ಮಾಸ್ಕ್ ಧರಿಸುವಂತೆ, ಸಾಮಾಜಿಕ ಅಂತರ ಕಾಪಾಡುವಂತೆ ತಿಳಿಸಿತ್ತು. ಇದರಿಂದ ಜಾಗೃತಗೊಂಡ ಗ್ರಾಮದ ಸುಮಾರು 40ಕ್ಕೂ ಹೆಚ್ಚು ಕುಟುಂಬಗಳು ತಮ್ಮ ಜಮೀನಿನಲ್ಲಿ ತಾತ್ಕಾಲಿಕ ಶೆಡ್ ನಿರ್ಮಾಣ ಮಾಡಿಕೊಂಡು, ಜೀವನ ಸಾಗಿಸುತ್ತಿವೆ.

vlcsnap 2020 06 17 07h28m50s84

ಶೆಡ್ ನಲ್ಲಿಯೂ ಮಾಸ್ಕ್ ಧರಿಸುತ್ತಿರುವ ಕುಟುಂಬದ ಸದಸ್ಯರು ಇತರರಿಗೆ ಮಾದರಿಯಾಗಿದ್ದಾರೆ. ಸದ್ಯ ಪಾಸಿಟಿವ್ ಬಂದಿದ್ದ ಈ ಗ್ರಾಮದ ವ್ಯಕ್ತಿ ಗುಣಮುಖವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮ್ಮ ಗ್ರಾಮಕ್ಕೆ ಮರಳಿದ್ದಾರೆ. ಜಿಲ್ಲಾಡಳಿತ ಸಹ ತಮ್ಮ ಮನೆಗಳಿಗೆ ತೆರಳುವಂತೆ ಈ ಕುಟುಂಬಗಳಿಗೆ ಸೂಚನೆ ನೀಡಿದೆ. ಆದರೆ ಈ ಕುಟುಂಬಗಳು ಕೊರೊನಾ ಕಡಿಮೆಯಾಗುವವರಿಗೂ ಜಮೀನಲ್ಲಿಯೇ ವಾಸ ಮಾಡಲು ನಿರ್ಧರಿಸಿವೆ.

ಸ್ಯಾಂಪಲ್ ಸಂಗ್ರಹಣೆಯಲ್ಲಿ ರಾಜ್ಯದಲ್ಲಿ ಯಾದಗಿರಿ ಪ್ರಥಮ ಸ್ಥಾನ
ಕೊರೊನಾ ಮಾದರಿಗಳ ಸಂಗ್ರಹ ಮತ್ತು ಪರೀಕ್ಷೆಯಲ್ಲಿ ಯಾದಗಿರಿ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದಿದೆ. ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಯಾದಗಿರಿ ಜಿಲ್ಲಾಡಳಿತ ಕೆಲವು ದಿಟ್ಟ ನಿರ್ಧಾರ ಕೈಗೊಂಡಿತ್ತು. ಇದರ ಪರಿಣಾಮ ಕಳೆದ 10 ದಿನಗಳ ಅವಧಿಯಲ್ಲಿ ರಾಜ್ಯದಲ್ಲಿಯೇ ಯಾದಗಿರಿಯಲ್ಲಿ ಅತಿ ಹೆಚ್ಚು ಕೊವಿಡ್ 19 ಟೆಸ್ಟ್ ಆಗಿದೆ. 10 ದಿನದ ಅವಧಿಯಲ್ಲಿ 7,297 ಜನರಿಂದ ಸ್ಯಾಂಪಲ್ ಸಂಗ್ರಹಣೆ ಮಾಡಲಾಗಿದೆ. ಈವರೆಗೆ ಬರೋಬ್ಬರಿ 21,100 ಮಾದರಿಗಳ ಸಂಗ್ರಹ ಮತ್ತು ಪರೀಕ್ಷೆ ನಡೆದಿದ್ದು, ಇದರಲ್ಲಿ 19,500 ನೆಗಟಿವ್ ಮತ್ತು 828 ಕೊರೊನಾ ಪಾಸಿಟಿವ್ ಪ್ರಕರಣಗಳು ಧೃಡಪಟ್ಟಿವೆ. ಈ ವರೆಗೆ 18,000ಕ್ಕೂ ಅಧಿಕ ಕಾರ್ಮಿಕರು ಮಹಾರಾಷ್ಟ್ರದಿಂದ ಜಿಲ್ಲೆಗೆ ವಾಪಸಾಗಿದ್ದು, ಇನ್ನೂ 150 ಜನರ ವರದಿ ಬಾಕಿಯಿದೆ.

CORONA VIRUS 1 1 1

ಸೋಂಕು ಹರಡುವದನ್ನು ತಟೆಗಟ್ಟಲು ಜಿಲ್ಲೆಯಲ್ಲಿ ಫೋರ್ ಪ್ರಿನ್ಸಿಪಲ್ಸ್ ಆಫ್ ‘ಟಿ’ ಅಳವಡಿಕೆ ಮಾಡಲಾಗಿತ್ತು. ಟ್ರೇಸಿಂಗ್, ಟ್ರ್ಯಾಕಿಂಗ್, ಟೆಸ್ಟಿಂಗ್ ಮತ್ತು ಟ್ರೀಟ್ಮೆಂಟ್ ಗೆ ಮಹತ್ವದ ಆಧ್ಯತೆ ನೀಡಲಾಗಿದೆ. ಪರಿಣಾಮ ಯಾದಗಿರಿ ಪ್ರಥಯ ಸ್ಥಾನ ಬಳಿಕ ಕಲಬುರಗಿ (4843) ಉಡುಪಿ(4219) ವಿಜಯಪುರ(3891) ಸ್ಥಾನ ಪಡೆದಿವೆ. ಅತಿ ಹೆಚ್ಚು ಟೆಸ್ಟಿಂಗ್ ನೊಂದಿಗೆ ಯಾದಗಿರಿ ಅಗ್ರಸ್ಥಾನದಲ್ಲಿದೆ.

TAGGED:Corona VirusfieldsPublic TVSocial distancevillagersyadgirಕೊರೊನಾ ವೈರಸ್ಗ್ರಾಮಸ್ಥರುಪಬ್ಲಿಕ್ ಟಿವಿಯಾದಗಿರಿಸಾಮಾಜಿಕ ಅಂತರಹೊಲ
Share This Article
Facebook Whatsapp Whatsapp Telegram

Cinema news

Dileep Chinmayi Sripada
ಲೈಂಗಿಕ ದೌರ್ಜನ್ಯ ಕೇಸ್ ಮಲಯಾಳಂ ನಟ ಖುಲಾಸೆ : ಗಾಯಕಿ ಚಿನ್ಮಯಿ ವಿಡಂಬನೆ
Cinema Latest Top Stories
Suri Annas Nee Nanna Devi song release 2
ಸೂರಿ ಅಣ್ಣನ ನೀ ನನ್ನ ದೇವತೆ ಸಾಂಗ್ ರಿಲೀಸ್
Cinema Latest Sandalwood
Alpha Movie
ಟೀಸರ್‌ನಲ್ಲಿ ಕುತೂಹಲ ಹೆಚ್ಚಿಸಿದ ಹೇಮಂತ್ ನಟನೆಯ ʻಆಲ್ಫಾʼ
Cinema Latest Sandalwood Top Stories
javara movie
ದುನಿಯಾ ವಿಜಯ್ ಮಗಳ ಹೊಸ ಚಿತ್ರಕ್ಕೆ ಮುಹೂರ್ತ: ರಿಷಿ ನಾಯಕ
Cinema Latest Sandalwood Top Stories

You Might Also Like

Bengaluru Family Suicide
Bengaluru City

ಸಾಲದ ಸುಳಿಗೆ ಸಿಲುಕಿ ಮಗಳು, ಮೊಮ್ಮಗ ಆತ್ಮಹತ್ಯೆ – ಸಾವು ಕಂಡ ಅಜ್ಜಿ ಹೃದಯಾಘಾತದಿಂದ ಕೊನೆಯುಸಿರು

Public TV
By Public TV
4 minutes ago
Byrathi Suresh
Belgaum

ಸಿಎ ಸೈಟ್‌ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ; 5 ವರ್ಷಕ್ಕೆ ಹೆಚ್ಚಿಸುವ ಭರವಸೆ

Public TV
By Public TV
29 minutes ago
Priyank Kharge 1
Districts

2023ರ ಚುನಾವಣೆ ವೇಳೆ ಚಿತ್ತಾಪುರ ಕ್ಷೇತ್ರದಲ್ಲಿ ಅಕ್ರಮ ಆರೋಪ – ಪ್ರಿಯಾಂಕ್ ಖರ್ಗೆಗೆ ಸುಪ್ರೀಂ ನೋಟಿಸ್

Public TV
By Public TV
38 minutes ago
Starlink
Latest

ಭಾರತಕ್ಕೆ ಬಂತು ಸ್ಟಾರ್‌ಲಿಂಕ್‌ ಇಂಟರ್‌ನೆಟ್‌ – ತಿಂಗಳಿಗೆ 8,600 ರೂ. ಪ್ಯಾಕ್‌ ಬಿಡುಗಡೆ

Public TV
By Public TV
57 minutes ago
PM Modi 1
Latest

ರಾಷ್ಟ್ರವನ್ನು ಒಗ್ಗೂಡಿಸಿದ್ದರಿಂದ ಜನರು ವಂದೇ ಮಾತರಂಗೆ ಋಣಿಯಾಗಿರಬೇಕು: ಮೋದಿ

Public TV
By Public TV
1 hour ago
Suryakumar Yadav
Cricket

ಸಾಕಷ್ಟು ಅವಕಾಶ ಕೊಟ್ಟಿದ್ದೇವೆ, ಯಾವ್ದೇ ಕ್ರಮಾಂಕದಲ್ಲೂ ಬ್ಯಾಟಿಂಗ್‌ ಮಾಡೋಕೆ ರೆಡಿ ಇರ್ಬೇಕು: ಸಂಜು ಬಗ್ಗೆ ಸೂರ್ಯ ಮಾತು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?