ಬೆಂಗ್ಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿ 3 ದಿನ ಸೀಲ್‌ಡೌನ್‌

Public TV
1 Min Read
COMMISSIONER OFFICE

ಬೆಂಗಳೂರು: ನಗರ ಪೊಲೀಸ್‌ ಆಯುಕ್ತರ ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.

ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಸೋಂಕು ಬಂದ ಹಿನ್ನೆಲೆಯಲ್ಲಿ ಮೂರು ದಿನ ಸೀಲ್‌ಡೌನ್‌ ಮಾಡಲಾಗಿದೆ.

ಇಲ್ಲಿಯವರೆಗೆ 92ಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಮಹಾಮಾರಿ ಆವರಿಸಿದ್ದು, 15 ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸುಮಾರು 870 ಮಂದಿ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. ಹೀಗಾಗಿ ಹಿಂಜರಿಕೆ, ಭಯದಿಂದಲೇ ಪೊಲೀಸರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಅಲ್ಲದೆ ಕೆಲಸ ಮಾಡಲು ಹಿಂದೇಟು ಹಾಕುತ್ತಿದ್ದಾರೆ.

coronavirus 4833754 1920 1

ಪದೇ ಪದೇ ಆರೋಪಿಗಳಿಗೆ ಪಾಸಿಟಿವ್ ಬರುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರೇ ಸ್ವಯಂ ಪ್ರೇರಿತವಾಗಿ ಸಣ್ಣ ಪುಟ್ಟ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸಲು ಹಿಂದೇಟು ಹಾಕುತ್ತಿದ್ದಾರೆ.

7 ವರ್ಷ ಮೇಲ್ಪಟ್ಟ ಶಿಕ್ಷೆಯ ಆರೋಪಿಗಳ ಬಂಧನಕ್ಕೆ ಮಾತ್ರ ಪೊಲೀಸರು ಒಲವು ವ್ಯಕ್ತಪಡಿಸುತ್ತಿದ್ದಾರೆ. ದೊಡ್ಡ ಪ್ರಕರಣಗಳಲ್ಲಿ ಬಂಧಿಸಿದ್ರೆ ಅವರನ್ನು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ಇರಿಸಲಾಗುತ್ತದೆ. ಕೊಲೆ, ಕೊಲೆ ಯತ್ನ, ರಾಬರಿ, ಇಂತಹ ದೊಡ್ಡ ಪ್ರಕರಣಗಳಲ್ಲಿ ಮಾತ್ರ ಈಗ ಆರೋಪಿಗಳ ಬಂಧನವಾಗುತ್ತಿದೆ.

Corona Virus 5

ಈ ಹಿಂದೆ ಮೊಬೈಲ್ ಆ್ಯಪ್ ಮೂಲಕ ನಕಲಿ ಜಿಪಿಎಸ್ ಸೃಷ್ಟಿಸಿ ಗ್ರಾಹಕರ ಸೋಗಿನಲ್ಲಿ ಕ್ಯಾಬ್ ಬುಕ್ಕಿಂಗ್ ಮಾಡಿ ಓಲಾ ಕಂಪನಿಯನ್ನು ವಂಚಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ಪೈಕಿ ಒಬ್ಬನಿಗೆ ಕೊರೊನಾ ಇರುವುದು ದೃಢಪಟ್ಟಿತ್ತು. ಹೀಗಾಗಿ ಸಿಸಿಬಿ ಕಚೇರಿಯನ್ನು ತಾತ್ಕಾಲಿಕವಾಗಿ ಸೀಲ್‌ಡೌನ್‌ ಮಾಡಲಾಗಿತ್ತು.

Share This Article
Leave a Comment

Leave a Reply

Your email address will not be published. Required fields are marked *