ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ಒಪ್ಪಿದ್ರೆ 12 ದಿನ ಲಾಕ್‍ಡೌನ್ ಮಾಡುವ ಸಾಧ್ಯತೆಗಳಿವೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ವಿಧಾನಸೌಧದ ಕ್ಯಾಬಿನೆಟ್ ಹಾಲ್ ನಲ್ಲಿ ಸಚಿವರು ಟಾಸ್ಟ್ ಫೋರ್ಸ್ ತಜ್ಞರ ಜೊತೆಗಿನ ಸಭೆಯಲ್ಲಿ ಭಾಗಿಯಾಗಿದ್ದರು. ಈ ಸಭೆಯಲ್ಲಿ ಕೊರೊನಾ ತಡೆಗಾಗಿ ಲಾಕ್‍ಡೌನ್ ಮಾಡುವ ಕುರಿತ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಒಂದು ವೇಳೆ ಮುಖ್ಯಮಂತ್ರಿಗಳು ಒಪ್ಪಿದ್ರೆ ಜುಲೈ 6 ರಿಂದ 12 ದಿನ ಲಾಕ್‍ಡೌನ್ ಮಾಡುವ ಕುರಿತ ಚರ್ಚೆಗಳು ನಡೆದಿವೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ಕೊರೊನಾ ಪರೀಕ್ಷೆಗಳ ಪ್ರಮಾಣ ಹೆಚ್ಚಳವಾಗಬೇಕು. ಸೋಂಕು ಕಾಣಿಸಿಕೊಂಡ ಕೂಡಲೇ ರೋಗಿಗಳನ್ನು ನಿಗದಿತ ಸ್ಥಳಕ್ಕೆ ಶಿಫ್ಟ್ ಮಾಡುವ ಕೆಲಸ ಆಗಬೇಕೆಂದು ಟಾಸ್ಕ್ ಫೋರ್ಸ್ ತಜ್ಞರು ಸರ್ಕಾರಕ್ಕೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ವೈರಲ್ ಲೋಡಿಂಗ್ ಟೆಸ್ಟ್, ಸಮನ್ವಯತೆ, ಖಾಸಗಿ ಕಾಲೇಜ್, ಆಸ್ಪತ್ರೆಗಳನ್ನ ಬಳಸಿಕೊಳ್ಳುವ ಬಗ್ಗೆ ಸಭೆಯಲ್ಲಿ ಚರ್ಚೆ ಆಗಿದೆ. ಟಾಸ್ಕ್ ಫೋರ್ಸ್ ಅಜೆಂಡಾದಲ್ಲಿ ಲಾಕ್ ಡೌನ್ ವಿಚಾರ ಇರಲಿಲ್ಲ. ಲಾಕ್ ಡೌನ್ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಮುಖ್ಯಮಂತ್ರಿಗಳಿದೆ. ಅವರೇ ಈ ಬಗ್ಗೆ ಅಂತಿಮ ನಿರ್ಧಾರ ಮಾಡಲಿದ್ದಾರೆ ಎಂದು ಹೇಳಿದರು.