Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರೋಗ ಲಕ್ಷಣವಿಲ್ಲದವರಿಗೆ ಮನೆಯಲ್ಲೇ ಚಿಕಿತ್ಸೆ- ಸಿಎಂ ಬಿಎಸ್‍ವೈಗೆ ತಜ್ಞರ ಸಲಹೆಗಳೇನು..?

Public TV
Last updated: July 1, 2020 4:48 pm
Public TV
Share
2 Min Read
CM BSY a
SHARE

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕೊರೊನಾ ವಿಜೃಂಭಿಸುತ್ತಿದೆ. ಈ ವೇಳೆಯಲ್ಲಿ ಲಾಕ್‍ಡೌನ್ ಜಾರಿ ಮಾಡುವ ಕುರಿತು ಬಾರಿ ಚರ್ಚೆ ನಡೆಯುತ್ತಿದೆ. ಇತ್ತ ಸೋಂಕಿನ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಹಾಗೂ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಲಭಿಸುವಂತೆ ಮಾಡಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಬಗ್ಗೆ ತಜ್ಞರ ಸಮಿತಿ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಸಲಹೆಗಳನ್ನು ನೀಡಿದೆ.

ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಕುರಿತು ಇಂದು ಸಿಎಂ ಬಿಎಸ್‍ವೈ ಅವರು ತಜ್ಞ ವೈದ್ಯರೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಸೋಂಕಿನ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಪ್ರಮುಖ ಕ್ರಮಗಳ ಬಗ್ಗೆ ತಜ್ಞರಿಂದ ಸಲಹೆಗಳನ್ನು ಪಡೆದರು. ಸಭೆಯಲ್ಲಿ ತಜ್ಞ ವೈದ್ಯರು, ಆರೋಗ್ಯ ಸಚಿವ ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಹಿರಿಯ ಸಚಿವರು, ಅಧಿಕಾರಿಗಳು ಹಾಜರಿದ್ದರು.

CM BSY

ಸಭೆಯ ಮುಖ್ಯಾಂಶಗಳೇನು?
1. ಸಭೆಯಲ್ಲಿ ಕೋವಿಡ್ ಚಿಕಿತ್ಸೆಗೆ ಹಾಗೂ ನಿರ್ವಹಣೆಗೆ ಅಳವಡಿಸಬೇಕಾದ ಮಾರ್ಗಸೂಚಿಗಳನ್ನು ನಿಗದಿ ಪಡಿಸುವ ಕುರಿತು ಚರ್ಚಿಸಲಾಯಿತು.

2. ರೋಗ ಲಕ್ಷಣ ಇಲ್ಲದ ಅಥವಾ ಅತ್ಯಂತ ಕಡಿಮೆ ಜ್ವರದ ಲಕ್ಷಣಗಳಿದ್ದರೆ ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿರಿಸಿ (ಹೋಂ ಐಸೋಲೇಷನ್) ಅವರ ಆರೋಗ್ಯದ ಮೇಲೆ ನಿಗಾ ಇಡುವುದು ಸೂಕ್ತ. ಇದರಿಂದ ಆಸ್ಪತ್ರೆಗಳ ಮೇಲೆ ಒತ್ತಡ ತಡೆಯಬಹುದಾಗಿದೆ ಎಂದು ಬಹುತೇಕ ತಜ್ಞರು ಅಭಿಪ್ರಾಯಪಟ್ಟರು.

3. ತೀವ್ರ ಸೋಂಕಿನ ಲಕ್ಷಣಗಳು ಹೊಂದಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು ಸೋಂಕಿತರಾದಲ್ಲಿ, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಆದ್ಯತೆ ನೀಡಬೇಕು ಎಂದು ತಜ್ಞರು ಸಲಹೆ ಮಾಡಿದರು.

ಬೆಂಗಳೂರಿನಲ್ಲಿ ಕೋವಿಡ್19 ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ, ‌ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ತೆಗೆದುಕೊಳ್ಳಬಹುದಾದ ತುರ್ತುಕ್ರಮಗಳ ಕುರಿತು ಇಂದು ಹಿರಿಯ ವೈದ್ಯರು, ಪರಿಣತರು ಹಾಗು ನುರಿತ ತಜ್ಞರೊಂದಿಗೆ‌ ಚರ್ಚೆ ನಡೆಸಿ ಸಲಹೆಗಳನ್ನು ಪಡೆಯಲಾಯಿತು. ಸಭೆಯಲ್ಲಿ ಹಿರಿಯ ಸಚಿವರುಗಳು ಮತ್ತು ಅಧಿಕಾರಿಗಳು ಪಾಲ್ಗೊಂಡಿದ್ದರು. pic.twitter.com/Wos18Y68v7

— B.S. Yediyurappa (@BSYBJP) July 1, 2020

4. ಪ್ರಕರಣ ದ್ವಿಗುಣಗೊಳ್ಳುವ ವೇಗ ತಗ್ಗಿಸಬೇಕು. ಮುಚ್ಚಿದ ಸ್ಥಳಗಳು, ನಿಕಟ ಸಂಪರ್ಕ ಹಾಗೂ ಜನಸಂದಣಿಯ ಸ್ಥಳಗಳಲ್ಲಿ ಜನತೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

5. ಟೆಲಿ ಮೆಡಿಸಿನ್ ವ್ಯವಸ್ಥೆಯ ಮೂಲಕ ಹೆಚ್ಚಿನ ರೋಗಿಗಳಿಗೆ ಚಿಕಿತ್ಸೆ ನೀಡಬಹುದು ಎಂದು ಸಲಹೆ ನೀಡಿದ್ದಾರೆ.

6. ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯ ಅಗತ್ಯವಿದೆ. ಸಂಪರ್ಕ ಪತ್ತೆ ಹಚ್ಚಲು ಹೆಚ್ಚುವರಿ ಮಾನವ ಸಂಪನ್ಮೂಲ ಅಗತ್ಯವಿದ್ದು, ಇತರ ಇಲಾಖೆಯ ಸಿಬ್ಬಂದಿ ಸೇವೆ ಬಳಸಿಕೊಳ್ಳಬೇಕು ಎಂಬ ಸಲಹೆಯೂ ಬಂದಿದೆ.

ಎಲ್ಲ ವೈದ್ಯರಿಗೆ ರಾಷ್ಟ್ರೀಯ ವೈದ್ಯರ ದಿನದ ಹಾರ್ದಿಕ ಶುಭಕಾಮನೆಗಳು. ಅನಾರೋಗ್ಯ ಉಂಟಾದಾಗ ಚಿಕಿತ್ಸೆ ನೀಡುವ ವೈದ್ಯರನ್ನು ದೇವರಂತೆ ಕಾಣುತ್ತೇವೆ. ವೈದ್ಯರ ಕರ್ತವ್ಯನಿಷ್ಠೆ, ಪರಿಶ್ರಮ ಮತ್ತು ಸೇವೆಗಳನ್ನು ಸಮಾಜ ಸದಾ ಆದರಿಸುತ್ತದೆ. ಈ ಕೋವಿಡ್ ವಿರುದ್ಧ ದಣಿವರಿಯದೆ ಹೋರಾಡುತ್ತಿರುವ ಎಲ್ಲ ವೈದ್ಯರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸೋಣ. pic.twitter.com/W1DuH7DZFJ

— B.S. Yediyurappa (@BSYBJP) July 1, 2020

7. ಟೆಲಿ ಐಸಿಯು ಹಾಗೂ ಚಿಕಿತ್ಸೆಯ ನಿಗದಿತ ಮಾನದಂಡಗಳ ಕುರಿತು ಹೆಚ್ಚಿನ ತರಬೇತಿ ಅಗತ್ಯ.

8. ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಸರಪಣಿ ಹಾಗೂ ಹೊಸ ಔಷಧಿಗಳ ಪೂರೈಕೆ ಸರಪಣಿ ಅಬಾಧಿತವಾಗಿರಬೇಕು.

9. ರಾಜ್ಯದಲ್ಲಿ ಕೋವಿಡ್ ಕುರಿತು ಭೀತಿಯ ವಾತಾವರಣ ಸೃಷ್ಟಿಯಾಗಿದ್ದು, ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವಾಗಬೇಕಿದೆ.

10. ತಜ್ಞರ ಈ ಅಭಿಪ್ರಾಯಗಳ ಕುರಿತು ಸರ್ಕಾರದ ಹಂತದಲ್ಲಿ ವಿವರವಾಗಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಿಎಸ್‍ವೈ ತಿಳಿಸಿದರು.

TAGGED:bengaluruCM BS YeddyurappaCoronaCovid 19 ManagementkarnatakaPublic TVಕರ್ನಾಟಕಕೊರೊನಾಕೋವಿಡ್ 19 ನಿರ್ವಹಣೆಪಬ್ಲಿಕ್ ಟಿವಿಬೆಂಗಳೂರುಸಿಎಂ ಬಿಎಸ್ ಯಡಿಯೂರಪ್ಪ
Share This Article
Facebook Whatsapp Whatsapp Telegram

You Might Also Like

Ben Duckett
Cricket

1st Test: ಮಿಂಚಿದ ಡಕೆಟ್- ಭಾರತದ ವಿರುದ್ಧ ಇಂಗ್ಲೆಂಡ್‌ಗೆ 5 ವಿಕೆಟ್‌ಗಳ ಜಯ

Public TV
By Public TV
1 hour ago
Shubhanshu Shukla 3
Latest

ನಾಳೆ ಬಾಹ್ಯಾಕಾಶ ಯೋಜನೆಯ ಆಕ್ಸಿಯಮ್ 4 ಉಡಾವಣೆ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ ಪ್ರಯಾಣ

Public TV
By Public TV
2 hours ago
Anantkumar Hegde Gunman Sridhar
Districts

ಮಾಜಿ ಸಂಸದ ಅನಂತ್‌ಕುಮಾರ್ ಹೆಗಡೆ ಗನ್ ಮ್ಯಾನ್ ಶ್ರೀಧರ್ ಅಮಾನತು

Public TV
By Public TV
2 hours ago
Family Man Season 3
Cinema

ಫ್ಯಾಮಿಲಿ ಮ್ಯಾನ್-3 : ಫಸ್ಟ್ ಲುಕ್ ರಿವೀಲ್

Public TV
By Public TV
2 hours ago
ajit kumar buzz cut hairdo
Cinema

ತಲಾ ಅಜಿತ್ ನ್ಯೂ ಲುಕ್ ವೈರಲ್ – ಬಾಲ್ಡ್ ಲುಕ್ ಯಾಕೆ ಗೊತ್ತಾ..?

Public TV
By Public TV
2 hours ago
MB Patil
Bengaluru City

ಶಾಸಕರ ಅಸಮಾಧಾನ ಎಲ್ಲವನ್ನೂ ಸಿಎಂ ಹ್ಯಾಂಡಲ್ ಮಾಡ್ತಾರೆ: ಸಚಿವ ಎಂಬಿ ಪಾಟೀಲ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?