ಮಂಗಳೂರಿನ ಬಿಜೆಪಿ ಶಾಸಕ ಭರತ್ ಶೆಟ್ಟಿಗೆ ಕೊರೊನಾ

Public TV
1 Min Read
bharath shetty 2

ಬೆಂಗಳೂರು: ಕೊರೊನಾ ಮಹಾಮಾರಿ ಬೆಂಬಿಡದೆ ಕಾಡುತ್ತಿದ್ದು, ರಾಜಕಾರಣಿಗಳಿಗೂ ವ್ಯಾಪಿಸುತ್ತಿದೆ. ಇದೀಗ ಮಂಗಳೂರು ನಗರ ಉತ್ತರ ಕ್ಷೇತ್ರದ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿಯವರಿಗೂ ಕೊರೊನಾ ಸೋಂಕು ತಗುಲಿದೆ.

ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರು ಸ್ಪಷ್ಟಪಡಿಸಿದ್ದು, ನನಗೆ ಕೊರೊನಾ ಪಾಸಿಟಿವ್ ಬಂದಿದೆ. ನಿಮ್ಮ ಆಶೀರ್ವಾದದೊಂದಿಗೆ ಗುಣಮುಖನಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ತಿಳಿಸಿದ್ದಾರೆ.

ದಯವಿಟ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳಿ, ಹೊರಗಡೆ ಹೋಗುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗೂ ಆಗಾಗ ಕೈ ತೊಳೆಯುತ್ತಿರಿ. ದಯವಿಟ್ಟು ನಿಮ್ಮ ಬಗ್ಗೆ ಹಾಗೂ ನಿಮ್ಮ ಹತ್ತಿರವಿದ್ದವರ ಬಗ್ಗೆಯೂ ಕಾಳಜಿ ವಹಿಸಿ ಎಂದು ಟ್ವೀಟ್‍ನಲ್ಲಿ ಮನವಿ ಮಾಡಿದ್ದಾರೆ.

Corona 12

ರಾಜ್ಯದಲ್ಲಿ ಪ್ರತಿನಿತ್ಯ ಸಾವಿರದ ಲೆಕ್ಕದಲ್ಲಿ ಕೊರೊನಾ ಪ್ರಕರಣಗಳು ಬರುತ್ತಿದ್ದು, ಜನರನ್ನು ಭಯಭೀತರನ್ನಾಗಿಸಿದೆ. ಇಂದು ಮತ್ತೆ 1502 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಬೆಂಗಳೂರು ಒಂದರಲ್ಲೇ 889 ಜನರಿಗೆ ಸೋಂಕು ತಗುಲಿದೆ. ಒಟ್ಟು 8334 ಜನ ಈ ವರೆಗೆ ಗುಣಮುಖರಾಗಿದ್ದು, 9406 ಸಕ್ರಿಯ ಪ್ರಕರಣಗಳಿವೆ.

Share This Article
Leave a Comment

Leave a Reply

Your email address will not be published. Required fields are marked *