ಮಂಡ್ಯ: ಷರತ್ತು ಬದ್ಧ ಜಾಮೀನು ಪಡೆದ ಬಳಿಕ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಬೆಂಬಲಿಗರೊಂದಿಗೆ ಗುಂಪು ಕಟ್ಟಿಕೊಂಡು ಸಂಭ್ರಮಾಚರಣೆ ಮಾಡುವ ಮೂಲಕ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆಯುತ್ತಿದ್ದ ಸರ್ಕಾರಿ ಕಾಮಗಾರಿಗೆ ಅಡ್ಡಿ ಪಡಿಸಿ, ಜೆಸಿಬಿ ಚಾಲಕನ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಮಾಜಿ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರನ್ನು ಪೊಲೀಸರು ಬಂಧಿಸಿದ್ದರು. ನಂತರ ಶ್ರೀರಂಗಪಟ್ಟಣದ ಜೆಎಂಎಫ್‍ಸಿ ಕೋರ್ಟಿನ ನ್ಯಾಯಾಧೀಶರ ಮುಂದೆ ನಿಲ್ಲಿಸಿದ್ರು.
ನಂತರ ನ್ಯಾಯಾಧೀಶರು ರಮೇಶ್ ಬಾಬು ಬಂಡಿಸಿದ್ದೇಗೌಡ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿದ್ದರು. ಬಳಿಕ ಹೊರಗೆ ಬಂದ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಗುಂಪು ಕಟ್ಟಿಕೊಂಡು ಸಂಭ್ರಮಾಚರಣೆ ನಡೆಸಿದ್ರು. ಈ ವೇಳೆ ಯಾರು ಕೂಡ ಮಾಸ್ಕ್ ಧರಿಸಿರಲಿಲ್ಲ ಅಲ್ಲದೇ ಸಾಮಾಜಿಕ ಅಂತರವು ಇರಲಿಲ್ಲ. ಕೊರೊನಾ ಅಟ್ಟಹಾಸದ ನಡುವೆ ಈ ರೀತಿಯ ವರ್ತನೆ ವಿಪರ್ಯಾಸದ ಸಂಗತಿಯಾಗಿದೆ.