ಬೆಂಗಳೂರು: ನಟ ಕಿಚ್ಚ ಸುದೀಪ್ ಇತ್ತೀಚೆಗಷ್ಟೆ ಆಟೋಚಾಲಕನ ತಂಗಿಯ ಮದುವೆಯ ಖರ್ಚನ್ನು ಭರಿಸುವ ಮೂಲಕ ಮಾನವೀಯತೆ ಮೆರೆದಿದ್ದರು. ಇದೀಗ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದಾರೆ.
ಹೌದು..ನಟ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಾಲ್ಕು ಶಾಲೆಗಳನ್ನು ದತ್ತು ಪಡೆದಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮೂರು ಹಾಗೂ ಹಿರಿಯೂರು ತಾಲೂಕಿನ ಒಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಲಾಗಿದೆ.
4 ಸರ್ಕಾರಿ ಶಾಲೆಗಳನ್ನು ದತ್ತುಪಡೆದ ಕಿಚ್ಚಸುದೀಪ ಅಣ್ಣ. ಚಿತ್ರದುರ್ಗದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಲಾಯಿತು. @KSCS_Official @KicchaSudeep @iampriya06 pic.twitter.com/immciLSyAE
— KKSFA Official ® (@KicchafansKKSFA) July 14, 2020
ಪಿ. ಒಬವನಹಳ್ಳಿ, ಚಳ್ಳಕೆರೆ ಶಾಲೆ, ಪರುಶರಾಂಪುರ ಶಾಲೆ ಮತ್ತು ಚಿತ್ರದುರ್ಗದ ಶಾಲೆಯನ್ನು ದತ್ತು ಪಡೆದು ಶಾಲೆಯ ಸಂಪೂರ್ಣ ಅಭಿವೃದ್ಧಿಯನ್ನು ವಹಿಸಿಕೊಂಡಿದ್ದಾರೆ. ಈ ಶಾಲೆಗಳಿಗೆ ಬೇಕಾದ ಅಗತ್ಯ ಸೌಕರ್ಯಗಳನ್ನು ನೀಡುವುದಕ್ಕೆ ಟ್ರಸ್ಟ್ ಮುಂದಾಗಿದೆ.
ಕಟ್ಟಡ ದುರಸ್ತಿ, ಶೌಚಾಲಯ ವ್ಯವಸ್ಥೆ, ಪೀಠೋಪಕರಣ, ಶಾಲೆಗಳಿಗೆ ಕಂಪ್ಯೂಟರ್ ನೀಡುವುದು ಸೇರಿದಂತೆ ಅನೇಕ ಯೋಜನೆಗಳನ್ನು ಟ್ರಸ್ಟ್ ಹಮ್ಮಿಕೊಂಡಿದೆ. ಅಲ್ಲದೇ ಗುಣಮಟ್ಟದ ಶಿಕ್ಷಣ ಸೇರಿದ್ದಂತೆ ಮಕ್ಕಳನ್ನು ಸರ್ಕಾರಿ ಶಾಲೆಯತ್ತ ಕರೆತರುವ ಪ್ರಯತ್ನವನ್ನು ಈ ಮೂಲಕ ಮಾಡಲಾಗುತ್ತಿದೆ. ಸುದೀಪ್ ಅವರ ಸಾಮಾಜಿಕ ಕಾರ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
4 ಸರ್ಕಾರಿ ಶಾಲೆಗಳನ್ನು ದತ್ತುಪಡೆದ ಕಿಚ್ಚಸುದೀಪ ಅಣ್ಣ. ಚಿತ್ರದುರ್ಗದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಲಾಯಿತು. @KSCS_Official @KicchaSudeep @iampriya06 pic.twitter.com/EDwZgrQtrb
— KKSFA Official ® (@KicchafansKKSFA) July 14, 2020
ಈ ಹಿಂದೆಯೂ ಕೂಡ ಸುದೀಪ್ ಚಾರಿಟೇಬಲ್ ಟ್ರಸ್ಟ್ ಕಡೆಯಿಂದ ಈ ರೀತಿಯ ಸಾಮಾಜಿಕ ಕಾರ್ಯಗಳು ಆಗಿವೆ. ಲಾಕ್‍ಡೌನ್ ವೇಳೆ ಸಂಕಷ್ಟಕ್ಕೆ ಸಿಲುಕಿದ್ದ ಬಡ ಜನರಿಗೆ ಸುದೀಪ್ ಟ್ರಸ್ಟ್ ಸಹಾಯ ಹಸ್ತ ಚಾಚಿತ್ತು. ಪೊಲೀಸರ ಸಹಯೋಗದಿಂದ ಟ್ರಸ್ಟ್ ಮೂಲಕ ಅಭಿಮಾನಿಗಳು ಪ್ಯಾಕೆಟ್‍ನಲ್ಲಿ ಆಹಾರವನ್ನು ತಂದು ಅಸಹಾಯಕರು, ವಿಕಲಚೇತನರು ಸೇರಿದಂತೆ ಅನೇಕರಿಗೆ ನೀಡಿದ್ದರು. ಜೊತೆಗೆ ರಸ್ತೆಯಲ್ಲಿರುವ ಶ್ವಾನಗಳಿಗೂ ಊಟ ಕೊಡುವ ಮೂಲಕ ಮಾನವೀಯತೆ ಮೆರೆದಿದ್ದರು.