– ಸಿಎಂ ಬಿಎಸ್‍ವೈ ಸಂತಾಪ
ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯ ರಂಗಭೂಮಿ ಹಿರಿಯ ಕಲಾವಿದೆ ಸುಭದ್ರಮ್ಮ ಮನ್ಸೂರ್ (81) ಅವರು ಬುಧವಾರ ತಡರಾತ್ರಿ ನಿಧನರಾಗಿದ್ದಾರೆ.
ಬಳ್ಳಾರಿ ನಗರದ ರೇಡಿಯೋಪಾರ್ಕ್ ಪ್ರದೇಶದ ತಮ್ಮ ನಿವಾಸದಲ್ಲಿ ನಿನ್ನೆ ರಾತ್ರಿ 11.30ರ ಸುಮಾರಿಗೆ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. ಕೂಡಲೇ ಅವರನ್ನ ಬಳ್ಳಾರಿ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅದಾಗಲೇ ಅವರು ಕೊನೆಯುಸಿರೆಳೆದಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮನ್ಸೂರ್ ಅವರು ಇಬ್ಬರು ಪತ್ರರು ಹಾಗೂ ಪುತ್ರಿಯನ್ನ ಅಗಲಿದ್ದಾರೆ. ಪತಿ ಲಿಂಗರಾಜ ಮನ್ಸೂರ್ ಹಲವು ವರ್ಷಗಳ ಹಿಂದೆಯೇ ಮೃತಪಟ್ಟಿದ್ದಾರೆ. ಅವರು ನಾಡೋಜ, ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವ ವಿದ್ಯಾಯಲಯದ ಗೌರವ ಡಾಕ್ಟರೇಟ್, ರಾಜ್ಯೋತ್ಸವ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.
ಹಿರಿಯ ರಂಗಭೂಮಿ ಕಲಾವಿದೆ ಶ್ರೀಮತಿ ಸುಭದ್ರಮ್ಮ ಮನ್ಸೂರ್ ನಿಧನರಾದ ಸುದ್ದಿ ಅತೀವ ದುಃಖ ತಂದಿದೆ. ಸುಮಾರು 5 ದಶಕಗಳ ಕಾಲ ರಂಗಭೂಮಿಯಲ್ಲಿ ಕಲಾವಿದರಾಗಿ ಮತ್ತು ಸಂಗೀತಗಾರರಾಗಿ ಅವರ ಸಾಧನೆ ಅನುಪಮವಾದದ್ದು. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ, ಕುಟುಂಬದವರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ.
— B.S. Yediyurappa (@BSYBJP) July 16, 2020
ಇತ್ತ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿಎಉವ ಸಿಎಂ, ಹಿರಿಯ ರಂಗಭೂಮಿ ಕಲಾವಿದೆ ಶ್ರೀಮತಿ ಸುಭದ್ರಮ್ಮ ಮನ್ಸೂರ್ ನಿಧನರಾದ ಸುದ್ದಿ ಅತೀವ ದುಃಖ ತಂದಿದೆ. ಸುಮಾರು 5 ದಶಕಗಳ ಕಾಲ ರಂಗಭೂಮಿಯಲ್ಲಿ ಕಲಾವಿದರಾಗಿ ಮತ್ತು ಸಂಗೀತಗಾರರಾಗಿ ಅವರ ಸಾಧನೆ ಅನುಪಮವಾದದ್ದು. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ, ಕುಟುಂಬದವರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಹಿರಿಯ ರಂಗಭೂಮಿ ಕಲಾವಿದೆ ನಾಡೋಜ ಸುಭದ್ರಮ್ಮ ಮನ್ಸೂರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಶ್ರೀ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬಾಲ ಕಲಾವಿದೆಯಾಗಿ ರಂಗಭೂಮಿ ಪ್ರವೇಶಿಸಿದ ಸುಭದ್ರಮ್ಮ ಮನ್ಸೂರ್, ಬದುಕಿನ ಏಳುಬೀಳುಗಳ ನಡುವೆಯೂ ವೃತ್ತಿ ರಂಗಭೂಮಿಯಲ್ಲಿ ತಮ್ಮದೇ ಛಾಪು ಮೂಡಿಸಿದವರು. (1/3) pic.twitter.com/9gChitfRaQ
— CM of Karnataka (@CMofKarnataka) July 16, 2020